ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಮಂಡ್ಯದ ಜನತೆ, ಕನ್ನಡಿಗರಿಗೆ ಕೃತಜ್ಞತೆ ತಿಳಿಸಿದ ಕುಮಾರಸ್ವಾಮಿ

By Girish GoudarFirst Published Jun 9, 2024, 8:40 PM IST
Highlights

ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ಹಾಗೂ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ತಿಳಿಸಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ 
 

ಬೆಂಗಳೂರು(ಜೂ.09): ನರೇಂದ್ರ ಮೋದಿ ಅವರ ನೇತೃತ್ವದ NDA ಸರಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಅಧಿಕಾರ ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧನ್ಯವಾದಗಳು ಎಂದು ನೂತನ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. 

 

ಮಾನ್ಯ ಶ್ರೀ ಅವರ ನೇತೃತ್ವದ NDA ಸರಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ.

ಅಧಿಕಾರ ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧನ್ಯವಾದಗಳು.

ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ… pic.twitter.com/59NkXQFndA

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)

Latest Videos

ಎಕ್ಸ್‌ನಲ್ಲಿ ಬರೆದುಕೊಂಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು, ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ಹಾಗೂ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ. 

ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಇಂದು(ಭಾನುವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.  ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದರೆ ಕರ್ನಾಟಕದಿಂದ ಆಯ್ಕೆಯಾದ ಎನ್‌ಡಿಎ ಸಂಸದರ ಪೈಕಿ ಎಚ್‌.ಡಿ. ಕುಮಾರಸ್ವಾಮಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎಚ್‌.ಡಿ. 
ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ಖಾತೆಯನ್ನ ನೀಡಲಿದ್ದಾರೆ ಎಂಬುದನ್ನ ಕಾದು ನೋಡಬೇಕಿದೆ. 

click me!