ಸದನದಲ್ಲಿ ದೊಡ್ಡ ಹಗರಣ ಬಯಲು ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

By Govindaraj SFirst Published Sep 20, 2022, 4:30 AM IST
Highlights

ಸಾವಿರಾರು ಕೋಟಿ ರು. ವ್ಯವಹಾರಕ್ಕೆ ಸಂಬಂಧಿಸಿದ ದೊಡ್ಡ ಹಗರಣವೊಂದನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಅವಕಾಶ ನೀಡುವಂತೆ ವಿಧಾನಸಭೆಯ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಬೆಂಗಳೂರು (ಸೆ.20): ಸಾವಿರಾರು ಕೋಟಿ ರು. ವ್ಯವಹಾರಕ್ಕೆ ಸಂಬಂಧಿಸಿದ ದೊಡ್ಡ ಹಗರಣವೊಂದನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಅವಕಾಶ ನೀಡುವಂತೆ ವಿಧಾನಸಭೆಯ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಖಾಸುಮ್ಮನೆ ಮಾತನಾಡಿ ಸದನದಲ್ಲಿ ಇರಿಸುಮುರಿಸು ಮಾಡೋಕೆ ನನಗೆ ಇಷ್ಟವಿಲ್ಲ. ಇಂದು ಬೆಳಗ್ಗೆ ಕೂಡ ಸಭಾದ್ಯಕ್ಷರಿಗೆ ದೂರವಾಣಿ ಕರೆ ಮಾಡಿ ಮತ್ತೊಮ್ಮೆ ಮನವಿ ಮಾಡಿದ್ದೇನೆ. ಬೇರೆ ಬೇರೆ ವಿಚಾರಗಳ ಚರ್ಚೆಗೆ ಅವಕಾಶ ನೀಡಲಾಗಿದ್ದ ಕಾರಣದಿಂದ ತಡವಾಗಿ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. 

ಬಹುಶಃ ಮಂಗಳವಾರ ಅವಕಾಶ ಸಿಗಬಹುದು ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸದನದಲ್ಲಿ ನಾನು ಪ್ರಸ್ತಾಪ ಮಾಡಲಿರುವ ವಿಷಯ ಅತ್ಯಂತ ಗಂಭೀರ ವಿಚಾರ. ಪೂರ್ಣವಾಗಿ ದಾಖಲೆಗಳನ್ನು ಇಟ್ಟುಕೊಂಡೇ ಮಾತನಾಡುತ್ತೇನೆ. ಗಾಳಿಯಲ್ಲಿ ಗುಂಡು ಹಾರಿಸೋನು, ಕುಮಾರಸ್ವಾಮಿ ಹಿಟ್‌ ಆಂಡ್‌ ರನ್‌ ಮಾಡುತ್ತಾರೆ ಎಂದು ಹೇಳುವವರಿಗೆ ಉತ್ತರ ಕೊಡುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಸಾವಿರಾರು ಕೋಟಿ ರು. ವ್ಯವಹಾರಕ್ಕೆ ಸಂಬಂಧಪಟ್ಟವಿಷಯ ಅದು. ಈ ಒಂದು ವಿಷಯದಲ್ಲಿ ಸರ್ಕಾರ ಆಘಾತಕಾರಿ ತೀರ್ಮಾನ ತೆಗೆದುಕೊಂಡಿದೆ ಎಂದರು.

ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು: ಎಚ್‌.ಡಿ.ಕುಮಾರಸ್ವಾಮಿ

ನಗರದ ದುಸ್ಥಿತಿಗೆ ಸಿಂಗಾಪುರ ಕನಸು ಕಾರಣ: ನಗರದ ದುಸ್ಥಿತಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರನ್ನು ಸಿಂಗಾಪುರ ಮಾಡಲು ಹೊರಟಿದ್ದು ಕಾರಣ. ಜತೆಗೆ, ಈಗಿನ ಸರ್ಕಾರದ ನಿರ್ಲಕ್ಷ್ಯದ ಪಾಲೂ ಇದ್ದು, ದಾಖಲೆ ಮಳೆಯ ನೆಪ ಹೇಳಿ ತಪ್ಪಿಸಿಕೊಳ್ಳದೆ ಈಗಲಾದರೂ ಒತ್ತುವರಿ ಬಗ್ಗೆ ವಿಸ್ತೃತ ವರದಿ ಪಡೆದು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ನಿಯಮ 69ರಡಿ ಅತಿವೃಷ್ಟಿಬಗ್ಗೆ ಸುದೀರ್ಘವಾಗಿ ಮಾತನಾಡಿದ ಅವರು, ನೆರೆ ವಿಷಯದಲ್ಲಿ ಬೆಂಗಳೂರಿಗೆ ಶಾಶ್ವತ ಪರಿಹಾರ ಬೇಕು. ಸಿಎಜಿ ವರದಿಯಲ್ಲಿ ಕಾಲುವೆ ಮುಚ್ಚಿರುವುದರಿಂದ ಈ ನೆರೆ ಸಮಸ್ಯೆ ಎದುರಾಗಿದೆ ಎಂದು ತಿಳಿಸಲಾಗಿದೆ. 

ಹೀಗಿದ್ದರೂ ವಸತಿ ಪ್ರದೇಶಗಳು ಮುಳುಗುವವರೆಗೂ ಅಧಿಕಾರಿಗಳು ಏಕೆ ಒತ್ತುವರಿ ತೆರವು ಮಾಡಿಲ್ಲ ಎಂದು ಕಿಡಿ ಕಾರಿದರು. ಮುಖ್ಯಮಂತ್ರಿಗಳೇ, ಈ ಬಾರಿ ಒತ್ತುವರಿ ತೆರವು ಕಾರ್ಯವನ್ನು ಮೂರ್ನಾಲ್ಕು ದಿನಗಳು ನಡೆಸಿ ನಿಲ್ಲಿಸಿದರೆ ಆಗುವುದಿಲ್ಲ. ನೀವು ಕಠಿಣವಾಗಿ ವರ್ತಿಸಬೇಕು. ಒತ್ತುವರಿ ಬಗ್ಗೆ ವಿಸ್ತೃತವಾದ ವರದಿ ಪಡೆದು ಕ್ರಮ ಕೈಗೊಳ್ಳಬೇಕು. ತೆರವು ವೇಳೆ ಬಡ ಕುಟುಂಬಗಳ ಬಗ್ಗೆ ಮಾನವೀಯತೆಯಿಂದ ವರ್ತಿಸಬೇಕು. ತಮ್ಮದಲ್ಲದ ತಪ್ಪಿಗೆ ಅವರಿಗೆ ಶಿಕ್ಷೆ ಕೊಡದೆ ತಪ್ಪಿತಸ್ಥರ ಅಧಿಕಾರಿಗಳು ಹಾಗೂ ಕಟ್ಟಡ ನಿರ್ಮಾಣದಾರರನ್ನು ಹುಡುಕಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇಷ್ಟಪಟ್ಟು ಮತಾಂತರವಾಗಲು ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶ್ವಥ ನಾರಾಯಣ್‌

ನಗರದ ದುಸ್ಥಿತಿಗೆ ಬಿಡಿಎ ಹೊಣೆ: ಬೆಂಗಳೂರು ನಗರದ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೇ (ಬಿಡಿಎ) ಕಾರಣ. ಆ ಪ್ರಾಧಿಕಾರಕ್ಕೆ ಒಂದು ಸ್ಪಷ್ಟತೆ ಇಲ್ಲ, ನೀಲನಕ್ಷೆ ಇಲ್ಲ. ಇದ್ದ ಎಲ್ಲಾ ಕೆರೆಗಳನ್ನು ಮುಚ್ಚಿ ಬಡಾವಣೆಗಳನ್ನು ಮಾಡಿ, ಕಾಲುವೆಗಳನ್ನು ಮುಚ್ಚಿ ಬೆಂಗಳೂರು ಸೌಂದರ್ಯವನ್ನು ನಾಶ ಮಾಡಿತು. ಕೆರೆಗಳಿದ್ದಿದ್ದರೆ ಈ ರೀತಿ ನೆರೆ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಕೆರೆ ಅಭಿವೃದ್ಧಿಪಡಿಸಿದ್ದರೇ ನೀರಿನ ಸಮಸ್ಯೆನೇ ಆಗುತ್ತಿರಲಿಲ್ಲ. ಮೇಕೆದಾಟಿಗಾಗಿ ಪಾದಯಾತ್ರೆ ಮಾಡುವ ಅವಶ್ಯಕತೆನೇ ಇರಲಿಲ್ಲ ಎಂದರು.

click me!