'ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು'

By Suvarna NewsFirst Published Jul 2, 2021, 2:31 PM IST
Highlights

 * ಜಿಎಸ್ ಟಿಗೆ 4 ವರ್ಷದ ಸಂಭ್ರಮ
 * ಕೇಂದ್ರ ಸರ್ಕಾರದ ಜಿಎಸ್‌ಟಿ ಸಂಭ್ರಮಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅಸಮಾಧಾನ
* ಸರಣಿ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ ಎಚ್‌ಡಿಕೆ

ಬೆಂಗಳೂರು, (ಜುಲೈ.02): ಜಿಎಸ್ ಟಿಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್ ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯಕ್ಕೆ 9 ಸಾವಿರ ಕೋಟಿಯಷ್ಟು ಜಿಎಸ್ ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ, ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಅಸಮಾಧಾನ  ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಅಬ್ಬರವಿದ್ದರೂ 1 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ!

ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪಾರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ? ಎಂದಿದ್ದಾರೆ.

ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ?
4/5

— H D Kumaraswamy (@hd_kumaraswamy)

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌-ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಹೇಳಿದ್ದಾರೆ.

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ.
5/5

— H D Kumaraswamy (@hd_kumaraswamy)

ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್ ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂ ಅನ್ನು ಜಿಎಸ್ ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಬೇಸರ ವ್ಯಕ್ತಪಡಿಸಿದರು.

click me!