
ಬೆಂಗಳೂರು, (ಜೂನ್.23): ಕೊರೋನಾ ಭೀತಿ ನಡುವೆಯೂ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ.
ಇನ್ನು ಪರೀಕ್ಷೆ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಕೊರೋನಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಜುಲೈ 25 ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
SSLC ಪರೀಕ್ಷೆ ಬೇಡ, ಅನ್ಯರಾಜ್ಯಗಳ ರೀತಿ ರದ್ದು ಮಾಡಿ: ಪೋಷಕರ ಆಗ್ರಹ
ಕೊರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ
ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಒಂದು ವೇಳೆ ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ಸಹ ಕೊಟ್ಟಿದ್ದಾರೆ.
ಆದ್ರೆ, ರಾಜ್ಯ ಸರ್ಕಾರ ಹಲವು ವಿರೋಧದ ನಡುವೆಯೂ ಪರೀಕ್ಷೆ ನಡೆಸಲು ಮುಂದಾಗಿದ್ದು, ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಸುಮರ್ 8.4 ಲಕ್ಷ ವಿದ್ಯಾರ್ಥಿಗಳಿಗೆ ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆಯುವ ಪರಿಸ್ಥಿತಿ ಎದುರಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.