
ಬೆಂಗಳೂರು(ಮಾ.24): ಲೋಕಸಭಾ ಚುನಾವಣೆಗೆ ಬಿಜೆಪಿಯ ಮಿತ್ರ ಪಕ್ಷವಾಗಿರುವ ಜೆಡಿಎಸ್ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯು ಬಹುತೇಕ ಅಂತಿಮಗೊಂಡಿದೆ. ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದೆ. ಮಂಡ್ಯ ಕ್ಷೇತ್ರಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು บฮอก ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಖಚಿತವಾಗಿದೆ.
ಅಂತೆಯೇ ಕೋಲಾರ ಕ್ಷೇತ್ರಕ್ಕೆ ಪಕ್ಷದ ನಾಯಕ ಮಲ್ಲೇಶ್ ಬಾಬುಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ಇನ್ನು ಹಾಸನ ಕ್ಷೇತ್ರದಿಂದ ನಿರೀಕ್ಷೆಯಂತೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ. ಇಂದು(ಭಾನುವಾರ) ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡ ಅವರು ಪತ್ರಿಕಾಗೋಷ್ಠಿ ಕರೆದಿದ್ದು, ಈ ವೇಳೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಪಕ್ಷದ ಪ್ರಮುಖರ ಸಮ್ಮುಖದಲ್ಲಿಯೇ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.
Lok Sabha Election 2024: ಮಂಡ್ಯ, ಹಾಸನ, ಕೋಲಾರ ದಳಕ್ಕೆ ಬಿಜೆಪಿ ಘೋಷಣೆ
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಲಭಿಸಿರುವುದು ಖಚಿತವಾಗುತ್ತಿದ್ದಂತೆ ಮಾಜಿ ಸಚಿವರಾದ ಸಿ.ಎಸ್. ಮಂಡದಿಂದ ಎಚ್ಡಿಕೆ ನಿಖಿಲ್ ಸ್ಪರ್ಧೆಗೆ ಪುಟ್ಟರಾಜು ಅಥವಾ ಡಿ.ಸಿ.ತಮ್ಮಣ್ಣ ಪೈಕಿ ಒಬ್ಬರಿಗೆ ಟಿಕೆಟ್ ನೀಡುವಸಾಧ್ಯತೆ ಹೆಚ್ಚಿತ್ತು.ಆದರೆ, ಇವರಿಬ್ಬರ ಪೈಕಿ ಒಬ್ಬರು ಕಣಕ್ಕಿಳಿದರೂ ಪಕ್ಷದ ಮತಗಳೇ ವಿಭಜನೆಯಾಗುವ ಸಾಧ್ಯತೆ ಹೆಚ್ಚಿತ್ತು. ಹೀಗಾಗಿ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಪೈಕಿ ಒಬ್ಬರು ನಿಲ್ಲುವಂತೆ ಪಕ್ಷದ ಮುಖಂಡರೇ ಒತ್ತಾಯ ಮಾಡಿದ್ದರು. ಅಲ್ಲದೇ, ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ವೇಳೆ ಅವರು ಸಹ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದರು. ಈ ಮಾಗಲ್ಲಿ ಮಾಯಾಗಿ ಸುಮಾರಸ್ವಾಮಿ ಅವರ ಕ್ಷೇತ್ರದಿಂದ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇನ್ನು, ಕೋಲಾರ ಕ್ಷೇತ್ರಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ ಮಲ್ಲೇಶ್ ಬಾಬುಹೆಸರು ಅಂತಿಮಗೊಂಡಿದೆ ಎಂದು ಹೇಳಲಾಗಿದೆ. ಮಲ್ಲೇಶ್ ಬಾಬು ಅವರು ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಸ್ಪರ್ಧೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿಯೇ ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.
ಈನಡುವೆ, ಹಾಲಿ ಶಾಸಕ ಸಮೃದ್ಧಿ ಮಂಜುನಾಥ್ ಮತ್ತು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸಹಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ. ನಿಸರ್ಗ ಕಾರಾಯ ಸ್ವಾಮಿ ಅವರಿಗೆ ಕು ಸಿಗುವುದು ಅನುಮಾನ ಹೇಳಲಾಗಿದೆ. ಮಲ್ಲೇಶ್ ಬಾಬು ಮತ್ತು ಸಮೃದ್ಧಿ ಮಂಜುನಾಥ್ ಇಬ್ಬರು ಕೋಲಾರ ಜಿಲ್ಲೆಯವರಾಗಿರುವ ಕಾರಣ ಈ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುತ್ತದೆ. ಮಲ್ಲೇಶ್ ಮುಂಚೂಣಿಯಲ್ಲಿರುವ ಕಾರಣ ಅವರಿಗೆ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
ಎಲ್ಲರಿಗಿಂತ ಮೊದಲು ತಿಳಿಯುವುದು ಇಲ್ಲೇ
ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧೆ ಮಾಡಬಹುದು ಎಂದು 'ಕನ್ನಡಪ್ರಭ' ಮಾ.16ಕ್ಕೇ ಸುಳಿವು ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.