ಶಿವರಾತ್ರಿ ಬಳಿಕ ಕುಮಾರಸ್ವಾಮಿ ದಿಲ್ಲಿಗೆ: ಸೀಟು ಹಂಚಿಕೆ ಚರ್ಚೆ

By Kannadaprabha NewsFirst Published Mar 7, 2024, 6:37 AM IST
Highlights

ಕುಮಾರಸ್ವಾಮಿ ಈಗಾಗಲೇ ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೆಡಿಎಸ್‌ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಬಗ್ಗೆ ಮೈತ್ರಿ ಪಕ್ಷಗಳು ಸಮೀಕ್ಷೆ ನಡೆಸಿದ್ದು, ಅದಕ್ಕಗನುಗುಣವಾಗಿ ಹಂಚಿಕೆಯಾಗಲಿದೆ ಎನ್ನಲಾಗಿದೆ.

ಬೆಂಗಳೂರು(ಮಾ.07):  ಸೀಟು ಹಂಚಿಕೆ ಸಂಬಂಧ ಅಂತಿಮ ಹಂತದ ಮಾತುಕತೆ ನಡೆಸುವ ಸಲುವಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಶಿವರಾತ್ರಿ ಹಬ್ಬ ಬಳಿಕ ದೆಹಲಿಗೆ ಪ್ರಯಾಣಿಸಲಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸೀಟು ಹಂಚಿಕೆ ಕುರಿತು ಪ್ರಕಟಿಸಲಾಗುವುದು ಎಂದು ಮೂಲಗಳು ಹೇಳಿವೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಉಭಯ ಪಕ್ಷಗಳು ಕಾರ್ಯತಂತ್ರ ರೂಪಿಸುವಲ್ಲಿ ನಿರತವಾಗಿವೆ. ನಾಲ್ಕೈದು ಸ್ಥಾನಗಳಿಗೆ ಜೆಡಿಎಸ್‌ ಬೇಡಿಕೆ ಇಟ್ಟಿದೆ. ಸದ್ಯಕ್ಕೆ ಹಾಸನ ಕ್ಷೇತ್ರ ಮಾತ್ರ ಜೆಡಿಎಸ್‌ನ ಹಿಡಿತದಲ್ಲಿದ್ದು, ಇನ್ನಾವುದೇ ಕ್ಷೇತ್ರದಲ್ಲಿಯೂ ಜೆಡಿಎಸ್‌ ಪಾರುಪತ್ಯ ಇಲ್ಲ. ಈ ಬಾರಿ ಮಂಡ್ಯ ಕ್ಷೇತ್ರವು ಕೇಂದ್ರ ಬಿಂದುವಾಗಿದ್ದು, ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಹಾಲಿ ಸಂಸದೆ ಸುಮಲತಾ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಜೆಡಿಎಸ್‌ ಸಹ ಈ ಕ್ಷೇತ್ರ ಬಿಟ್ಟುಕೊಡುವಂತೆ ಒತ್ತಾಯಿಸಿದೆ. ಇನ್ನು, ತುಮಕೂರು ಕ್ಷೇತ್ರಕ್ಕೆ ಬಿಜೆಪಿಯಲ್ಲಿಯೇ ಪೈಪೋಟಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹೊರತು ಪಡಿಸಿ ಜೆಡಿಎಸ್‌ಗೆ ಯಾವ ಕ್ಷೇತ್ರಗಳು ಲಭಿಸಲಿವೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

Latest Videos

ಜೆಡಿಎಸ್ ಎಲ್ಲಿದೆ? ಬಿಜೆಪಿ ಸ್ಪೋಕ್ಸ್ ಪರ್ಸನ್ ಆದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಈಗಾಗಲೇ ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೆಡಿಎಸ್‌ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಬಗ್ಗೆ ಮೈತ್ರಿ ಪಕ್ಷಗಳು ಸಮೀಕ್ಷೆ ನಡೆಸಿದ್ದು, ಅದಕ್ಕಗನುಗುಣವಾಗಿ ಹಂಚಿಕೆಯಾಗಲಿದೆ ಎನ್ನಲಾಗಿದೆ.

click me!