
ಬೆಂಗಳೂರು(ಫೆ.22): ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಿಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದಿಢೀರ್ ದೆಹಲಿಗೆ ಪ್ರಯಾಣಿಸಿದ್ದಾರೆ.
ಬುಧವಾರ ಸಂಜೆ ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೆಹಲಿಗೆ ತೆರಳಿದರು. ತಡರಾತ್ರಿ ಗೃಹಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.
ನಮ್ಮ ಶಾಸಕರಿಗೆ ಕರೆ ಮಾಡಿ ಎಚ್‌ಡಿಕೆ ಧಮಕಿ ಹಾಕುತ್ತಿದ್ದಾರೆ: ಡಿಕೆ ಶಿವಕುಮಾರ
ಸಂಸದೆ ಸುಮಲತಾ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂಬ ಸುದ್ದಿ ಬೆನ್ನಲ್ಲೇ ಕುಮಾರಸ್ವಾಮಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಟಿಕೆಟ್ ಜೆಡಿಎಸ್‌ಗೆ ನೀಡುವಂತೆ ಕಸರತ್ತು ನಡೆಸಲಾಗುತ್ತಿದೆ. ಆದರೆ, ಬಿಜೆಪಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ದೆಹಲಿ ಭೇಟಿ ಪ್ರಮುಖವಾಗಿದೆ. ಈ ಕುರಿತು ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದರು. ಅಲ್ಲದೇ, ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರರೆಡ್ಡಿ ಅವರ ಗೆಲುವಿಗೆ ರೂಪಿಸಲಾಗಿರುವ ರಾಜಕೀಯ ತಂತ್ರಗಾರಿಕೆ ಕುರಿತು ಸಮಾಲೋಚನೆ ನಡೆಸಲಾಯಿತು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.