ಲೋಕಸಭಾ ಚುನಾವಣೆಯಲ್ಲಿ ಎಚ್‌ಡಿಕೆಗೆ 3 ಲಕ್ಷ ಅಂತರದ ಜಯ: ವಿಜಯೇಂದ್ರ

By Kannadaprabha NewsFirst Published Apr 18, 2024, 10:58 AM IST
Highlights

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹಣ ಬಲವುಳ್ಳ ಗುತ್ತಿಗೆದಾರನನ್ನು ಚುನಾವಣೆಗೆ ನಿಲ್ಲಿಸಿದೆ. ಪ್ರಧಾನಿ ಮೋದಿ ನೇತೃತ್ವದ ಮೈತ್ರಿಕೂಟ ಜನ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 
 

ಕೆ.ಆರ್.ಪೇಟೆ/ಮಂಡ್ಯ (ಏ.18): ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹಣ ಬಲವುಳ್ಳ ಗುತ್ತಿಗೆದಾರನನ್ನು ಚುನಾವಣೆಗೆ ನಿಲ್ಲಿಸಿದೆ. ಪ್ರಧಾನಿ ಮೋದಿ ನೇತೃತ್ವದ ಮೈತ್ರಿಕೂಟ ಜನ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳು ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿ, ಹಣ ಬಲ ಮತ್ತು ಜನಬಲದ ನಡುವೆ ಚುನಾವಣೆ ನಡೆಯುತ್ತಿದೆ. ಜನ ಬಲದ ನಾಯಕ ಕುಮಾರಸ್ವಾಮಿ ಅವರನ್ನು ಅತ್ಯಧಿಕ ಬಹುಮತದಿಂದ ಚುನಾಯಿಸಿ ಲೋಕಸಭೆಗೆ ಕಳುಹಿಸಬೇಕು ಎಂದರು.

ಮಂಡ್ಯ ಜಿಲ್ಲೆಯಲ್ಲಿ ಸ್ಪರ್ಧಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆತಂದವರು ನಾವು. ಜಿಲ್ಲೆಯ ಪ್ರಜ್ಞಾವಂತ ಮತದಾರರು ಮತ್ತು ತಾಯಂದಿರು ತಮ್ಮ ಮತವನ್ನು ಆಸೆ ಆಮಿಷಗಳಿಗೆ ಮಾರಿಕೊಳ್ಳದೆ ಕುಮಾರಸ್ವಾಮಿ ಬೆಂಬಲಿಸಬೇಕು ಎಂದು ಕೋರಿದರು. ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಉಸ್ತುವಾರಿ ತೆಗೆದುಕೊಂಡು ನಮ್ಮ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರನ್ನು ಗೆಲ್ಲಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಮಾತು ಕೊಟ್ಟಿದ್ದೆ. ಅದರಂತೆ ಬಿಜೆಪಿ ಸರ್ಕಾರ ಕೆ.ಸಿ. ನಾರಾಯಣಗೌಡರನ್ನು ಸಚಿವರನ್ನಾಗಿ ಮಾಡಿ 1800 ಕೋಟಿಗೂ ಅಧಿಕ ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಿದೆ ಎಂದರು.

ಡಿ.ಕೆ.ಸುರೇಶ್‌ಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಕಳೆದ 10 ತಿಂಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಈಗಾಗಲೇ 800ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ರೈತರ ಆತ್ಮಹತ್ಯೆಗಳು ಕಣ್ಣಿಗೆ ಕಾಣುತ್ತಿಲ್ಲ. ರೈತರ ಬದುಕು ನಾಶವಾಗುತ್ತಿದ್ದರೂ ನಯಾಪೈಸೆ ಪರಿಹಾರ ನೀಡಿಲ್ಲ ಎಂದು ಕಿಡಿಕಾರಿದರು.

ಡಾ। ಮಂಜುನಾಥ್‌ರಿಗೆ ಜಯದೇವ ಆಸ್ಪತ್ರೆಗೆ ಆಯ್ಕೆ ಮಾಡದಂತೆ ಡಿಕೆಶಿ ತಡೆಯೊಡ್ಡಿದ್ದರು: ಈ ಹಿಂದೆ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ತಡೆಯೊಡ್ಡಿದ್ದನ್ನು ಜನ ಮರೆಯಬಾರದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ಕನಕಪುರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಈವರೆಗೂ ಒಂದೇ ಒಂದು ಅಸತ್ಯ ನುಡಿದಿಲ್ಲ. ನನ್ನ ಅಳಿಯನನ್ನು ರಾಜಕೀಯಕ್ಕೆ ತರಲು ನನಗೆ ಇಷ್ಟವಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಮಂಜುನಾಥ ಅವರ ಸೇವೆ ದೇಶಕ್ಕೆ ಬೇಕಾಗಿದೆ ಎಂಬ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದರು.

ಪ್ರಧಾನಿ ಮೋದಿ, ಬಿಜೆಪಿ ಪರ ವ್ಯಾಪಕ ಅಲೆ: ಬಿಜೆಪಿ ಅಭ್ಯರ್ಥಿ ಶ್ರೀರಾಮುಲು

ನೆಹರು ಅವರಿಂದ ಹಿಡಿದು ರಾಜೀವ್ ಗಾಂಧಿಯವರೆಗೂ ಅಧಿಕಾರ ನಡೆಸಿದ ವಂಶಸ್ಥರು ಇವತ್ತು ಗೆಲುವು ಕಾಣಲು ಕೇರಳದ ವಯನಾಡಿಗೆ ಏಕೆ ಹೋಗಿದ್ದಾರೆ ಎಂಬುದನ್ನು ಕಾಂಗ್ರೆಸ್ ಪಕ್ಷದವರು ಅರಿಯಲಿ. ದೇಶದಲ್ಲಿ ಎರಡು ರಾಜಕೀಯ ಪಕ್ಷಗಳ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಒಂದು ಕಡೆ ಎನ್‌ಡಿಎ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಇದ್ದರೆ, ಪ್ರತಿಸ್ಪರ್ಧಿ ಐಎನ್ ಡಿಎ ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಅವರಿಗೆಯೇ ತಿಳಿಯದಾಗಿದೆ. ಡಿ.ಕೆ.ಶಿವಕುಮಾರ್ ರವರು ಖರ್ಗೆಯವರು ಪ್ರಧಾನಿ ಆಗಲಿದ್ದಾರೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದು ಸಾಧ್ಯವಿಲ್ಲ ಎಂದು ಹೇಳುತ್ತಾರೆ ಎಂದು ಟೀಕಿಸಿದರು.

click me!