* ಪ್ರತಿಯೊಂದು ಮಾಹಿತಿ ಪಡೆದು ಮಾತನಾಡಬೇಕು
* ನಮ್ಮ ತಾಲೂಕಿಗೆ ಎಷ್ಟು ಕೊಟ್ಟಿದ್ದಾರೆ ಅವರ ದೊಡ್ಡಪ್ಪನ್ನೇ ಕೇಳಲಿ ಫಸ್ಟ್
* ರೇವಣ್ಣ ಲೆಟರ್ ಹೆಡ್ನಲ್ಲಿ ಹಣ ಹೊಡ್ಕೊಂಡು ಹೋಗಿ ಅವರ ಜಿಲ್ಲೆ ಅಭಿವೃದ್ಧಿ ಮಾಡ್ಕೊಂಡ್ರು
ಮಂಡ್ಯ(ಮಾ.13): ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ(Nikhil Kumarswamy) ಸೋಲಿಗೆ ಅವರ ದೊಡ್ಡಪ್ಪ(ಎಚ್.ಡಿ.ರೇವಣ್ಣ) ಕಾರಣರಾಗಿದ್ದಾರೆ. ನಿಖಿಲ್ ಬಗ್ಗೆ ಗೌರವ ಇದೆ, ಅವರು ಸುಮ್ಮನೆ ಮಾತಾಡೋದು ತಪ್ಪು. ನಿಖಿಲ್ ಚಿಕ್ಕ ರಾಜಕಾರಣಿ, ಕುಮಾರಸ್ವಾಮಿ(HD Kumaraswamy) ಸುಪುತ್ರರು. ಪ್ರತಿಯೊಂದು ಮಾಹಿತಿ ಪಡೆದು ಮಾತನಾಡಬೇಕು ಅಂತ ನಿಖಿಲ್ಗೆ ಸಚಿವ ಕೆ.ಸಿ.ನಾರಾಯಣ ಗೌಡ(KC Narayana Gowda) ಟಾಂಗ್ ಕೊಟ್ಟಿದ್ದಾರೆ.
ಇಂದು(ಭಾನುವಾರ) ಜಿಲ್ಲೆಯ ಕೆ.ಆರ್.ಪೇಟೆಯ ಸಿಂಧಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೂವರೆ ವರ್ಷದ ಮೈತ್ರಿ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಅವರ ದೊಡ್ಡಪ್ಪ ಎಚ್.ಡಿ.ರೇವಣ್ಣ(HD Revanna) PWD ಮಿನಿಸ್ಟರ್ ಆಗಿದ್ದರು. ಅವರ ದೊಡ್ಡಪ್ಪನೇ ಎನರ್ಜಿ ಮಿನಿಸ್ಟರ್ ಆಗಿದ್ದರು. ಸಾವಿರಾರು ಸಬ್ ಸ್ಟೇಷನ್ ಕೊಟ್ಟಿದ್ದೇನೆ ಅಂತ ಹೇಳುತ್ತಿದ್ದಾರೆ. ಕೆ.ಆರ್.ಪೇಟೆಗೆ ಒಂದೇ ಒಂದು ಕೊಟ್ಟಿದ್ದಾರಾ?.ಒಂದೇ ಒಂದು ತೋರಿಸಲಿ ಎನರ್ಜಿ ಮಿನಿಸ್ಟರ್ ಆಗಿ ಅಂತ ಖಾರವಾಗಿ ಮಾತನಾಡಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿನ್ನು ಫುಟ್ಬಾಲ್ಗೆ ಅವಕಾಶವಿಲ್ಲ: ಕ್ರೀಡಾ ಸಚಿವ ನಾರಾಯಣಗೌಡ
ಚನ್ನರಾಯಪಟ್ಟಣ ತಾಲೂಕು- ಹಾಸನ ಜಿಲ್ಲೆಗೆ ಸಾವಿರಾರು ಕೋಟಿ ರೂ. ಅನುದಾನವನ್ನ(Grants) ಹಾಕೊಂಡಿದ್ದಾರೆ. ನಮ್ಮ ತಾಲೂಕಿಗೆ ಎಷ್ಟು ಕೊಟ್ಟಿದ್ದಾರೆ ಅವರ ದೊಡ್ಡಪ್ಪನ್ನೇ ಕೇಳಲಿ ಫಸ್ಟ್. ನಿಖಿಲ್ ಕುಮಾರಸ್ವಾಮಿ ಅವರ ದೊಡ್ಡಪ್ಪನನ್ನ ಕೇಳಲಿ, ಇಲ್ಲ ಮಾಹಿತಿ ಹಕ್ಕಿನಲ್ಲಿ ಕೇಳಲಿ. ಅವರಿಗೆ ವಿಷಯ ಗೊತ್ತಿಲ್ಲ ಪಾಪ. ಅವರ ದೊಡ್ಡಪ್ಪ ಬಂದ ಅನುದಾನವನ್ನ ಹಾಸನಕ್ಕೆ ಹಾಕೊಂಡ್ರು. ಮಂಡ್ಯನ ಖಾಲಿ ಬಿಟ್ರು. ನಿಖಿಲ್ ಕುಮಾರಸ್ವಾಮಿ ಸೋಲಬೇಕಾದ್ರೆ ಅವರ ಕೆಲಸಗಳೇ ಕಾರಣ ಅಂತ ತಿಳಿಸಿದ್ದಾರೆ.
ಕುಮಾರಸ್ವಾಮಿ ಖಾಲಿ ಪೇಪರ್ನಲ್ಲಿ ಹೇಳ್ಕೊಂಡು ಬಂದ್ರು, ಇಷ್ಟು ಸಾವಿರ ಕೋಟಿ ಕೊಡ್ತೀವಿ ಅಂತ. ರೇವಣ್ಣ ಅವರು ಲೆಟರ್ ಹೆಡ್ನಲ್ಲಿ ಹಣ ಹೊಡ್ಕೊಂಡು ಹೋಗಿ ಅವರ ಜಿಲ್ಲೆ ಅಭಿವೃದ್ಧಿ ಮಾಡ್ಕೊಂಡ್ರು. ಅಲ್ಲಿ ಅವರ ಮಗನ ಗೆಲ್ಲಿಸಿಕೊಂಡ್ರು, ನಿಖಿಲ್ನನ್ನ ಸೋಲಿಸಿದ್ರು, ಅದಕ್ಕಿಂತ ಪಾಠ ಬೇಕಾ ನಮ್ಮ ನಿಖಿಲ್ ಕುಮಾರಣ್ಣಂಗೆ. ನಿಖಿಲ್ ಸ್ವಲ್ಪ ತಿಳಿದುಕೊಂಡು ಮಾತನಾಡಲಿ ಅಂತ ಕೆ.ಸಿ.ನಾರಾಯಣ ಗೌಡ ಸಲಹೆ ಕೊಟ್ಟಿದ್ದಾರೆ.
ರಾಷ್ಟ್ರ ಧ್ವಜಕ್ಕೆ ಕರ್ನಾಟಕದ ಮತ್ತೋರ್ವ ಸಚಿವ ಅಪಮಾನ, ಭುಗಿಲೆದ್ದ ಆಕ್ರೋಶ
ಮಂಡ್ಯ: ಒಂದೆಡೆ ಕರ್ನಾಟಕದಲ್ಲಿ ಹಿಜಾಬ್ ಗದ್ದಲ, ಗಲಾಟೆ ಜೋರಾಗಿದೆ. ಮತ್ತೊಂದೆಡೆ ತ್ರಿವರ್ಣ ಧ್ವಜ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮ ಶುರುವಾಗಿತ್ತು.
ರಾಷ್ಟ್ರಧ್ವಜದ (Flag Row) ಬಗ್ಗೆ ಸಚಿವ ಕೆ.ಎಸ್ಈಶ್ವರಪ್ಪ ಹೇಳಿಕೆ ಖಂಡಿಸಿ ಸದನದಲ್ಲಿಯೇ ಕಾಂಗ್ರೆಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದರು. ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕರು, ನಿನ್ನೆಯ ಅಧಿವೇಶನ ಮುಗಿದ ಬಳಿಕವೂ ಪ್ರತಿಭಟನೆ ಮುಂದುವರಿಸಿದ್ದು, ಸದನದಲ್ಲಿಯೇ ಅಹೋರಾತ್ರಿ ಧರಣಿ ನಡೆಸಿದ್ದರು. ಇಷ್ಟೆಲ್ಲಾ ರಂಪರಾಮಾಯಣ ಆಗುತ್ತಿರುವುದು ಗೊತ್ತಿದ್ದರೂ ಸಹ ಕ್ರೀಡೆ ಮತ್ತು ರೇಷ್ಮೆ ಸಚಿವ ಕೆ.ಸಿ.ನಾರಾಯಣ ಗೌಡ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಹೌದು....ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ ಅಂತ್ಯಕ್ರಿಯೆ ವೇಲೆ ಸಚಿವ ನಾರಾಯಣಗೌಡ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.
District In-Charge: ಸಚಿವ ಕೆ.ಸಿ.ನಾರಾಯಣ ಗೌಡ ಬದಲಾವಣೆಗೆ MLC ಚುನಾವಣೆ ಕಾರಣವಾಯ್ತ?
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಡಾ. ಹೆಚ್ ಡಿ ಚೌಡಯ್ಯ ಬುಧವಾರ ವಿಧಿವಶರಾದ್ದರು. ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆದಿದ್ದು, ಮಾಜಿ ಶಾಸಕರ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಕ್ರೀಡೆ ಮತ್ತು ರೇಷ್ಮೆ ಸಚಿವ ಕೆ.ಸಿ.ನಾರಾಯಣ ಗೌಡ ಚಪ್ಪಲಿ ಧರಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದರು.
ಸಚಿವ ಕೆ.ಸಿ.ನಾರಾಯಣ ಗೌಡ ಅವರ ನಿರ್ಲಕ್ಷ್ಯತನಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು, ಇದು ರಾಷ್ಟ್ರಧ್ವಜಕ್ಕೆ ಅಷ್ಟೇ ಅಲ್ಲ, ಮಾಜಿ ಶಾಸಕರಿಗೂ ಮಾಡಿದ ಅಪಮಾನ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.