
ಶಿವಮೊಗ್ಗ (ಜೂ.9) ಸಂಘ ಪರಿವಾರದ ಸಿದ್ಧಾಂತಗಳು ಯಾವುದೇ ಇಲಾಖೆಯಲ್ಲಿ ತೂರಲು ಬಿಡೋದಿಲ್ಲ. ಹೆಡ್ಗೇವಾರ್‌ರಂತ ಹೇಡಿಗಳನ್ನು ಮಕ್ಕಳ ಪಠ್ಯದಲ್ಲಿರಲು ಬಿಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಗುಡುಗಿದರು.
ಶಿವಮೊಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೇಶವ್ ಬಲಿರಾಮ್ ಹೆಡ್ಗೇವಾರ್(Baliram hedgewar) ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಬೀತು ಮಾಡಲಿ. ಬ್ರಿಟೀಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಯಾರೋ ಹೇಳಿಕೆ ನೀಡಿ ನಾಥುರಾಮ್ ಗೋಡ್ಸೆ ಕೂಡ ಸ್ವಾತಂತ್ರ್ಯ ಹೋರಾಟಗಾರ ಎಂದಿದ್ದಾರೆ. ಇವರ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಗೂ ವ್ಯತ್ಯಾಸವಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ವಿರುದ್ಧದ ಷಡ್ಯಂತ್ರ, ದ್ವೇಷ ರಾಜಕೀಯಕ್ಕೆ ಬಿಜೆಪಿಗೆ ಜನತೆ ತಕ್ಕ ಉತ್ತರ: ಬಿಕೆ ಹರಿಪ್ರಸಾದ್
ಬಿಜೆಪಿ ಅಥವಾ ಸಂಘ ಪರಿವಾರದವರು ಅವರದ್ದೇ ಆದ ಗ್ರಂಥಗಳಲ್ಲಿ ಆರು ಬಾರಿ ಕ್ಷಮಾಪಣಾ ಪತ್ರ ಕೊಟ್ಟಿರೋದಾಗಿ ಉಲ್ಲೇಖಿಸಿದ್ದಾರೆ. ಬ್ರಿಟೀಷರಿಗೆ ಯಾಕೆ ಕ್ಷಮಾಪಣಾ ಪತ್ರ ನೀಡಿದರು ಎಂದು ಹೇಳಲಿ. ಇಂತಹ ರಣಹೇಡಿಗಳ ಬಗ್ಗೆ ಮಕ್ಕಳು ಓದುವ ಪಠ್ಯ ಪುಸ್ತಕದಲ್ಲಿ ಇಡಲು ಬಿಡೋದಿಲ್ಲ. ಚುನಾವಣೆ ಅಜೆಂಡಾ ಮಾಡಿಕೊಳ್ಳೋದು ಬಹಳ ಸಂತೋಷ, ಈ ಸಲ ಬಿಜೆಪಿಯನ್ನ ಜನ ಅರಬ್ಬಿ ಸಮುದ್ರಕ್ಕೆ ಹಾಕ್ತಾರೆ ಎಂದು ಛೇಡಿಸಿದರು.
ಭಾರತೀಯ ಜನತಾ ಪಾರ್ಟಿ ಅನೈತಿಕ ಸರ್ಕಾರ ರಚನೆ ಮಾಡಿದ ಮೇಲೆ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ನಾಲ್ಕು ವರ್ಷ ಇವರ ಆಡಳಿತ ನೋಡಿದ್ದೇನೆ. ಕೃಷಿ, ಕಾರ್ಮಿಕ, ಶಿಕ್ಷಣ ಇಲಾಖೆಯಲ್ಲಿ ಸಂಪೂರ್ಣ ಕೇಸರೀಕರಣ ಮಾಡಲು ಬಿಜೆಪಿ ಹೊರಟಿತ್ತು. ಭಾರತ ಸಾವಿರಾರು ವಷÜರ್‍ಗಳಿಂದಲೂ ಜಾತ್ಯತೀತ ರಾಷ್ಟ್ರವಾಗಿ ಉಳಿದುಕೊಂಡಿದೆ. ಇದನ್ನ ಬಿಜೆಪಿ ಬುಡಮೇಲು ಮಾಡಲು ಹೊರಟಿತ್ತು. ಎಲ್ಲೆಲ್ಲಿ ಸಂಘ ಪರಿವಾರದ ತತ್ವಸಿದ್ಧಾಂತಗಳನ್ನು ತೂರಲು ಹೊರಟಿದ್ದರೋ ಅದನ್ನು ಎಲ್ಲಾ ಕ್ಷೇತ್ರದಲ್ಲಿ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತೆ ಎಂದು ಹೇಳಿದರು.
ರಾಜ್ಯದಲ್ಲಿ ಬಜರಂಗದಳ ನಿಷೇಧವನ್ನು ಮತ್ತೆ ಬೆಂಬಲಿಸಿದ ಬಿಕೆ ಹರಿಪ್ರಸಾದ್
ಕರಾವಳಿ, ಮಲೆನಾಡಿನಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಿದೆ. ಭಜರಂಗದಳ ವಿರುದ್ಧ ಸಮರ ಸಾರಿದ್ದೆವು. ಬಿಜೆಪಿ ಅದನ್ನ ಅಜೆಂಡಾ ಮಾಡಿಕೊಂಡರೂ ಸಹ ಜನ ತಿರಸ್ಕರಿಸಿದರು. ಜನ ಸ್ಪಷ್ಟವಾಗಿ ತೀರ್ಪು ನೀಡಿದ್ದಾರೆ. ಇವನ್ನ ಬಿಟ್ಟು ಜನರಿಗೆ ಒಳಿತಾಗುವ ಕೆಲಸ ಬಿಜೆಪಿ ಮಾಡಲಿ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಲೆ ನೀಡಲಿ. ಜಾತಿ ಗಣತಿ ನಾವು ಬಹಿರಂಗ ಮಾಡ್ತೀವಿ, ನಮ್ಮ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದಿನ ಗಣತಿ ಎಂದು ಹೇಳಲಾಗದು, ಬದಲಾವಣೆ ಇದ್ದರೆ ಮಾಡ್ತೀವಿ. ಗ್ಯಾರಂಟಿ ಗೊಂದಲಗಳು ಬೇಡ, ಜುಲೈ ಹೊತ್ತಿಗೆ ಎಲ್ಲವೂ ಬಗೆಹರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.