ಶಿರಸಿಯ ಮೈದಾನದಲ್ಲಿ ಹೆಲಿಕಾಪ್ಟರ್ ಇಳಿಸಲು ಡಿಕೆಶಿ ಆಪ್ತ ಯು.ಬಿ. ಶೆಟ್ಟಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಜಗದೀಶ್ ಶೆಟ್ಟರ್ ಅವರನ್ನು ಹೆಲಿಕಾಪ್ಟರ್ ಮೂಲಕ ಬೆಂಗಳೂರು ಕರೆದೊಯ್ಯಲು ಲ್ಯಾಂಡಿಂಗ್‌ಗಾಗಿ ಮನವಿ ಮಾಡಿದ್ದಾರೆ. ಆದರೆ, ಉತ್ತರಕನ್ನಡ ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದಾರೆ.
ಕಾರವಾರ, ಉತ್ತರಕನ್ನಡ (ಏಪ್ರಿಲ್ 16, 2023): ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಜಗದೀಶ್ ಶೆಟ್ಟರ್ ಅವರನ್ನು ಹೆಲಿಕಾಪ್ಟರ್ ಮೂಲಕ ಬೆಂಗಳೂರು ಕರೆದೊಯ್ಯಲು ಡಿಕೆಶಿ ಆಪ್ತ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲು ಮನವಿ ಮಾಡಿದ್ದಾರೆ.
ಶಿರಸಿಯ ಮೈದಾನದಲ್ಲಿ ಹೆಲಿಕಾಪ್ಟರ್ ಇಳಿಸಲು ಡಿಕೆಶಿ ಆಪ್ತ ಯು.ಬಿ. ಶೆಟ್ಟಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಜಗದೀಶ್ ಶೆಟ್ಟರ್ ಅವರನ್ನು ಹೆಲಿಕಾಪ್ಟರ್ ಮೂಲಕ ಬೆಂಗಳೂರು ಕರೆದೊಯ್ಯಲು ಲ್ಯಾಂಡಿಂಗ್‌ಗಾಗಿ ಮನವಿ ಮಾಡಿದ್ದಾರೆ. ಆದರೆ, ಉತ್ತರಕನ್ನಡ ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದಾರೆ.
ಇದದನ್ನು ಓದಿ: ಕಾಗೇರಿ ಸಂಧಾನ ವಿಫಲ, ಬಿಜೆಪಿಗೆ ಶೆಟ್ಟರ್ ಗುಡ್‌ಬೈ , ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ಆಪ್ತನಿಂದ ಹೆಲಿಕಾಫ್ಟರ್ ಬುಕ್!
ಡಿಕೆಶಿ ಆಪ್ತರು ಬೆಳಗ್ಗೆ ಕರೆ ಮಾಡಿ, ಬಳಿಕ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ಇ ಮೇಲ್ ಮಾಡಿ ಮನವಿ ಮಾಡಿದ್ದರು. ಆದರೆ, ಚುನಾವಣೆ ಹಿನ್ನೆಲೆ ಇವುಗಳನ್ನೆಲ್ಲ ಪರಿಶೀಲಿಸಲು ಸಮಿತಿ ಇರೋದ್ರಿಂದ ಸೂಕ್ತ ಅರ್ಜಿಯ ಮೂಲಕ ಮನವಿ ಸಲ್ಲಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೆ ಅರ್ಜಿ ಮನವಿ ಜಿಲ್ಲಾಧಿಕಾರಿ ಹಾಗೂ ಸಮಿತಿ ಸದಸ್ಯರ ಗಮನಕ್ಕೆ ಬಂದ ಬಳಿಕವಷ್ಟೇ ಅನುಮತಿ ಲಭ್ಯವಾಗುತ್ತದೆ ಎಂದೂ ಹೇಳಿದ್ದಾರೆ.
ಆದರೆ, ಡಿಕೆಶಿ ಆಪ್ತರು ಸೂಕ್ತ ಅರ್ಜಿಯ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿಲ್ಲ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲಾಡಳಿತ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲು ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರೋದು ಪಕ್ಕಾ ಎಂದ ಶಾಮನೂರು ಶಿವಶಂಕರಪ್ಪ!
ಡಿಕೆಶಿ ಆಪ್ತ ಯು.ಬಿ.ಶೆಟ್ಟಿ ಹೆಸರಿನಲ್ಲಿ ಹೆಲಿಕಾಪ್ಟರ್ ಬುಕ್ ಮಾಡಲಾಗಿದೆ. ಶಿರಸಿಯಿಂದ ವಾಪಸ್ಸಾದ ನಂತರ ಮದ್ಯಾಹ್ನದ ಬಳಿಕ ಬೆಂಗಳೂರಿಗೆ ಜಗದೀಶ್ ಶೆಟ್ಟರ್ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಜಗದೀಶ್ ಶೆಟ್ಟರ್ ಜೊತೆ ಕಾಂಗ್ರೆಸ್‌ನ ಮಾಜಿ ಶಾಸಕರು, ಕೆಲ ನಿಗಮ ಮಂಡಳಿ ಅಧ್ಯಕ್ಷರೂ ಬೆಂಗಳೂರಿಗೆ ಆಗಮಿಸಲಿದ್ದು, ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಶಿರಸಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಜಗದೀಶ್ ಶೆಟ್ಟರ್ ಬರಮಾಡಿಕೊಂಡ ಸ್ಪೀಕರ್ ಕಾಗೇರಿ ಮನವೊಲಿಕೆಗೆ ಪಯತ್ನ ಮಾಡಿದ್ದಾರೆ. ಕಚೇರಿ ಒಳಗಿರುವ ಕೊಠಡಿಯಲ್ಲಿ ರೂಂ ಬಾಗಿಲು ಬಂದ್ ಮಾಡಿ ಸ್ಪೀಕರ್ ಕಾಗೇರಿ- ಶೆಟ್ಟರ್ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಆದ್ರೆ ತಮ್ಮ ನಿರ್ಧಾರವನ್ನು ಶೆಟ್ಟರ್ ಬದಲಿಸದೇ ರಾಜೀನಾಮೆ ಸಲ್ಲಿಸಿದ್ದು. ಹೀಗಾಗಿ ಕಾಗೇರಿ ರಾಜೀನಾಮೆ ಪತ್ರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್ ರಾಜೀನಾಮೆ..!
ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.