ಬೆಳಗಾವಿ ಬಿಜೆಪಿ ಅಭ್ಯರ್ಥಿಯಾಗಿ ಯಾರೇ ಬಂದರೂ ನಮಗೆ ಸಂಬಂಧವಿಲ್ಲ. ಬಿಜೆಪಿ ಯಾರಿಗೆ ಟಿಕೆಟ್ ಕೊಟ್ಟರೂ ಅದು ಅವರ ಅಂತರಿಕ ವಿಚಾರ. ಅವರ ಪಕ್ಷದಲ್ಲಿ ಏನೇ ಆದರೂ ಗೊತ್ತಿಲ್ಲ. ನಮ್ಮ ಪಕ್ಷದ ವಿಚಾರ ಅಷ್ಟೇ ನಾವು ನೋಡುವುದು ಎಂದ ಸಚಿವ ಸತೀಶ್ ಜಾರಕಿಹೊಳಿ
ಅಥಣಿ(ಮಾ.26): ಶಾಸಕ ಲಕ್ಷ್ಮಣ ಸವದಿ ಈ ಭಾಗದಲ್ಲಿ ಸಾವಿರ ಕೋಟಿ ಅನುದಾನ ತಂದಿದ್ದಾರೆ. ಮೊನ್ನೆಯಷ್ಟೇ ₹2000 ಕೋಟಿ ಅನುದಾನ ಬಿಡುಗಡೆ ಆಗಿದೆ. ಆ ಹಣವನ್ನು ಹೆಲಿಕಾಪ್ಟರ್ ಮೇಲೆಯೇ ತರಬೇಕು. ಇನ್ನೂ ₹1000 ಕೋಟಿ ಅನುದಾನ ಕೇಳಿದ್ದು, ಅದು ಬರಬೇಕಾದರೆ ನೀವೆಲ್ಲ ಮತ ಹಾಕಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಲಕ್ಷ್ಮಣ ಸವದಿ ಸಾವಿರ ಕೋಟಿ ಅನುದಾನ ಕೇಳಿದ್ದು, ಅದು ಬರಬೇಕಾದರೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಆಗಬೇಕು ಎಂದು ವೇದಿಕೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಲೋಕಸಭೆ ಚುನಾವಣೆ 2024: ಸಚಿವಗಿರಿ ನೆರಳಿನಲ್ಲಿ ವಂಶವೃಕ್ಷದ ಪ್ರತಿಬಿಂಬ..!
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಬಿಜೆಪಿ ಅಭ್ಯರ್ಥಿಯಾಗಿ ಯಾರೇ ಬಂದರೂ ನಮಗೆ ಸಂಬಂಧವಿಲ್ಲ. ಬಿಜೆಪಿ ಯಾರಿಗೆ ಟಿಕೆಟ್ ಕೊಟ್ಟರೂ ಅದು ಅವರ ಅಂತರಿಕ ವಿಚಾರ. ಅವರ ಪಕ್ಷದಲ್ಲಿ ಏನೇ ಆದರೂ ಗೊತ್ತಿಲ್ಲ. ನಮ್ಮ ಪಕ್ಷದ ವಿಚಾರ ಅಷ್ಟೇ ನಾವು ನೋಡುವುದು ಎಂದು ಹೇಳಿದರು.