Bommai Press conference ದಿಲ್ಲಿಯಲ್ಲಿ ಬೊಮ್ಮಾಯಿ ಸುದ್ದಿಗೋಷ್ಠಿ, ಮೊದಲ ದಿನದ ದಿನಚರಿ ಬಗ್ಗೆ ಮಾಹಿತಿ

Published : Feb 07, 2022, 07:28 PM IST
Bommai Press conference  ದಿಲ್ಲಿಯಲ್ಲಿ ಬೊಮ್ಮಾಯಿ ಸುದ್ದಿಗೋಷ್ಠಿ, ಮೊದಲ  ದಿನದ ದಿನಚರಿ ಬಗ್ಗೆ ಮಾಹಿತಿ

ಸಾರಾಂಶ

* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿ ಪ್ರವಾಸ *ದಿಲ್ಲಿಯಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ * ಮೊದಲ  ದಿನದ ದಿನಚರಿ ಬಗ್ಗೆ ಮಾಹಿತಿ ನೀಡಿದ ಬೊಮ್ಮಾಯಿ

ನವದೆಹಲಿ, (ಫೆ.07): ಸಂಪುಟ ಪುನಾರಚನೆ (Cabinet Reshuffle) ಕೂಗಿನ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನವದೆಹಲಿ ಪ್ರವಾಸ ಕೈಗೊಂಡಿದ್ದು, ಇತ್ತ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಇಂದು(ಸೋಮವಾರ) ಸಿಎಂ ಬೊಮ್ಮಾಯಿ ಅವರು ದೆಹಲಿಯಲ್ಲಿ (New Delhi) ಹಲವು ನಾಯಕರುಗಳನ್ನ ಭೇಟಿಯಾಗಿದ್ದು, ಈ ಬಗ್ಗೆ ಸುದ್ದಿಗೋಷ್ಠಿ(Basavaraj Bommai Press conference) ನಡೆಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

Cabinet Expansion ದೆಹಲಿ ಭೇಟಿಗೂ ಮುನ್ನ ಬಿಎಸ್‌ವೈ ಭೇಟಿಯಾದ ಸಿಎಂ, ಸುದೀರ್ಘ ಚರ್ಚೆ!

ಕರ್ನಾಟಕ ರಾಜ್ಯದ ಸಂಸದರ (Karnataka MPs) ಜೊತೆ ಸಭೆ ಮಾಡಿದ್ದೇನೆ. ರಾಜ್ಯದ ಯೋಜನೆಗಳ ಸಂಬಂಧ ಚರ್ಚೆ ನಡೆಸಲಾಗಿದೆ. ನೀರಾವರಿ, ನಗರಾಭಿವೃದ್ಧಿ, ಹೆದ್ದಾರಿ ಯೋಜನೆ ಬಗ್ಗೆ ಚರ್ಚೆ ಮಾಡಲಾಗಿದೆ. ಸೌಹಾರ್ದಯುತ ಚರ್ಚೆ ನಡೆದಿದೆ ಎಂದರು. 

ಕೇಂದ್ರದ ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆ ಅನುಷ್ಠಾನದ ಬಗ್ಗೆ ಮಾತುಕತೆ ನಡೆಸಲಾಗಿದೆ. ರೈಲ್ವೇ ಮಂತ್ರಿ ಅಶ್ವಿನಿ ವೈಷ್ಣವ್ ಭೇಟಿಯಾಗಿದ್ದೇನೆ. ಕಲ್ಲಿದ್ದಲು ಸಾಗಾಣಿಕೆಗೆ ರೇಕ್ ಬೇಕಾಗಿದೆ. ಮನ್​ಸುಖ್ ಮಾಂಡವೀಯ ಆರೋಗ್ಯ ಸಚಿವರನ್ನು ಭೇಟಿ ಮಾಡಿದ್ದೇನೆ. ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಚರ್ಚೆ ಮಾಡಿದ್ದೇನೆ.  ಇಂಧನ ಸಚಿವ ಆರ್.ಕೆ‌ ಸಿಂಗ್ ಭೇಟಿಯಾಗಿದ್ದೇನೆ. ಹೆಸ್ಕಾಂ ಸಂಬಂಧ ಚರ್ಚೆ ನಡೆಸಿದ್ದೇನೆ ಎಂದ ಮಾಧ್ಯಮಗಳಿಗೆ ತಿಳಿಸಿದರು.

ಅಮಿತ್ ಶಾ ಅವರನ್ನು ಭೇಟಿ ಸಾಧ್ಯವಾಗಿಲ್ಲ. ನಾಳೆ (ಫೆ.08) ಜೆ.ಪಿ ನಡ್ಡಾ ಅವರು ದೆಹಲಿಗೆ ಬರಲಿದ್ದಾರೆ. ಭೇಟಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ನಡ್ಡಾ ಭೇಟಿ ವೇಳೆ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು, ಸಿಎಂ ಬೊಮ್ಮಾಯಿ ಸಂಸತ್​ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಭೇಟಿಯಾಗಿದ್ದಾರೆ. GST ‌ಪರಿಹಾರ ಸೇರಿದಂತೆ ಹಣಕಾಸು ನೆರವು ಕುರಿತು ಚರ್ಚೆ ನಡೆಸಲಾಗಿದೆ. ಕರ್ನಾಟಕಕ್ಕೆ ನೀಡಬೇಕಾದ ನೆರವಿನ ಬಗ್ಗೆ ಸಿಎಂ ಮಾತುಕತೆ ನಡೆಸಿದ್ದಾರೆ.

ಸಂಪುಟ ಪುನಾರಚನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?
ಯೆಸ್....ಸಂಪುಟ ಪುನಾರಚನೆ ಆಗಲೇಬೇಕು. ಅದು ಬಜೆಟ್ ಅಧಿವೇಶನಕ್ಕೂ ಮೊದಲೇ ಆಗಬೇಕೆಂದು ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂಪಿ ರೇಣುಕಾಚಾರ್ಯ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಧ್ಯೆ ಸಂಪುಟ ಪುನಾರಚನೆ ಕೂಗಿನ ಒತ್ತಡದಲ್ಲಿ ಸಿಲುಕಿಕೊಂಡಿದ್ದು, ಈ ಬಗ್ಗೆ ಹೈಕಮಾಂಡ್‌ನ ಸಲಹೆ ಸೂಚನೆಗಳ ಪಡೆದುಕೊಳ್ಳಲು ದೆಹಲಿಗೆ ತೆರಳಿದ್ದಾರೆ. 

ಬೊಮ್ಮಾಯಿ ಅವರ ಮೊದಲ ದಿನ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಕ್ಕಿಲ್ಲ. ಇದರಿಂದ ಮಂಗಳವಾರ ಭೇಟಿಗೆ ಸಮಯ ಸಿಗುವ ಸಾಧ್ಯತೆಗಳಿದ್ದು, ಸಂಪುಟ ಪುನಾರಚನೆಗೆ ಬಗ್ಗೆ ಚರ್ಚೆ ಮಾಡಲಿದ್ದಾರೆ. ಅಲ್ಲದೇ ಯಾರನ್ನು ಸಂಪುಟದಿಂದ ಕೈಬಿಡಬೇಕು? ಯಾರನ್ನು ಹೊಸದಾಗಿ ಸೇರಿಸಿಕೊಳ್ಳಬೇಕು ಎನ್ನು ಬಗ್ಗೆ ಸುದೀರ್ಘವಾಗಿ ನಡ್ಡಾ ಹಾಗೂ ಅಮಿತ್ ಶಾ ಜತೆ ಮಾತುಕತೆ ನಡೆಸಲಿದ್ದಾರೆ.

ಒಂದು ವೇಳೆ ಈಗ ಸಂಪುಟ ಪುನಾರಚನೆ ಮಾಡಿದ್ರೆ ಬಜೆಟ್ ಮಧ್ಯೆ ಸಚಿವ ಸ್ಥಾನ ವಂಚಿತರು ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಗಳಿವೆ. ಹಾಗಾಗಿ ಬಜೆಟ್ ಮುಗಿದ ಮೇಲೆಯೇ ಸಂಪುಟ ಪುನಾರಚನೆ ಮಾಡಿ. ಈ ಬಗ್ಗೆ ಆಗ ಮಾತನಾಡೋಣ ಎಂದು ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ನಾಯಕರು ಸಲಹೆ ಕೊಟ್ಟು ಕಳುಹಿಸಬಹುದು.

ಒಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಪ್ರವಾಸ ಕುತೂಹಲ ಮೂಡಿಸಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌