BJP Politics: ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡದ ಬಿಜೆಪಿ: ಸಚಿವರಿಗೆ ಹೈಕಮಾಂಡ್‌ ಕ್ಲಾಸ್‌

By Kannadaprabha NewsFirst Published Jan 2, 2022, 4:15 AM IST
Highlights

*   ಸಿಎಂ, ಸಚಿವರ ಜೊತೆ ನಡ್ಡಾ, ಸಂತೋಷ್‌ ಸಮಾಲೋಚನೆ
*   ಕೆಲವು ಸಚಿವರಿಗೆ ಕಾರ್ಯವೈಖರಿ ಬದಲಿಸಿಕೊಳ್ಳಲು ಸೂಚನೆ?
*   ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆವ ಸಾಧ್ಯತೆ ಕಡಿಮೆ
 

ಬೆಂಗಳೂರು(ಜ.02):  ಸರ್ಕಾರ(Government of Karnataka) ಮತ್ತು ಪಕ್ಷದ ನಡುವೆ ಸಮನ್ವಯತೆ ಸಮಸ್ಯೆ ಉಂಟಾಗದಂತೆ ಮತ್ತು ಆಡಳಿತಕ್ಕೆ ಚುರುಕು ನೀಡುವ ಸಂಬಂಧ ಬಿಜೆಪಿ ಹೈಕಮಾಂಡ್‌ ರಾಜ್ಯದ ಸಚಿವರ ಜತೆ ಸಮಾಲೋಚನೆ ನಡೆಸಲು ಮುಂದಾಗಿದ್ದು, ಜ.8 ಮತ್ತು 9ರಂದು ರಾಜಧಾನಿ ಬೆಂಗಳೂರಿನ(Bengaluru) ಹೊರವಲಯದಲ್ಲಿ ಸಭೆ(Meeting) ನಡೆಸುವ ಸಾಧ್ಯತೆ ಇದೆ.

ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಸಚಿವರ ಜತೆಗೆ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಅಹವಾಲು ಹೇಳಿಕೊಳ್ಳುವ ನಿರೀಕ್ಷೆ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda)ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌(BL Santosh) ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗವಹಿಸಲಿದ್ದಾರೆ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಮತ್ತು ಪಕ್ಷದ ಸಂಘಟನೆ ಕುರಿತು ಚರ್ಚೆಗಳು ನಡೆಯಲಿದೆ.

Hanuman Birthplace: ಅಯೋಧ್ಯೆ, ರಾಮಮಂದಿರ ಬಳಿಕ ಅಂಜನಾದ್ರಿ ಅಭಿವೃದ್ಧಿ: ಸಿಎಂ ಬೊಮ್ಮಾಯಿ

ಸಂಪುಟ ಪುನಾರಚನೆಯ ಕೂಗು ಬಲವಾಗಿ ಪಕ್ಷದಲ್ಲಿ ಕೇಳಿಬರುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ನಡೆಸದೆ ಸಚಿವರ ಕಾರ್ಯವೈಖರಿ ಕುರಿತು ಚರ್ಚೆ ನಡೆಸಿ ವರಿಷ್ಠರು ಕೆಲವು ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ. ಕೆಲವು ಸಚಿವರ ಬಗ್ಗೆ ಪಕ್ಷದಲ್ಲಿಯೇ ಅಸಮಾಧಾನಗಳು ಕೇಳಿಬಂದಿವೆ. ಮಾತ್ರವಲ್ಲ, ಹೈಕಮಾಂಡ್‌ಗೂ ಕೆಲ ಸಚಿವರ ನಡೆಯ ಬಗ್ಗೆ ಬೇಸರ ಮೂಡಿದೆ. ಈ ಹಿನ್ನೆಲೆಯಲ್ಲಿ ಆ ಕುರಿತು ಸಮಾಲೋಚನೆ ನಡೆಸಿ ಅಸಮಾಧಾನ ಹೋಗಲಾಡಿಸುವ ಪ್ರಯತ್ನ ಮಾಡಲಾಗುತ್ತದೆ. ಅಲ್ಲದೆ, ಕಾರ್ಯವೈಖರಿಯನ್ನು ಬದಲಿಸಿಕೊಳ್ಳುವಂತೆ ಸಲಹೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಲ್ಲದೆ, ವಿಧಾನ ಪರಿಷತ್‌ (Vidhan Parishat)ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ(Local Body Elections) ಬಿಜೆಪಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡಿಲ್ಲ. ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಆಗಿರುವ ವೈಫಲ್ಯದ ಕುರಿತು, ನಾಯಕರು ಮತ್ತು ಕಾರ್ಯಕರ್ತರ ನಡುವಿನ ಸಮನ್ವಯ ಕೊರತೆಯ ಕುರಿತು ಸಮಾಲೋಚನೆ ನಡೆಸಿ ಸರಿಪಡಿಸುವ ಕೆಲಸ ಮಾಡಲಾಗುತ್ತದೆ. ಚುನಾವಣೆಯ ವರ್ಷವಾಗಿರುವ ಕಾರಣ ಸರ್ಕಾರವು ಎಚ್ಚರಿಕೆಯಿಂದ ಕಾರ್ಯಪ್ರವೃತ್ತವಾಗಬೇಕಿದೆ. ಒಡಕಿನ ಮಾತುಗಳು ಪ್ರತಿಪಕ್ಷಗಳಿಗೆ ಆಹಾರವಾಗಲಿವೆ. ಇದಕ್ಕೆ ಆಸ್ಪದ ನೀಡಬಾರದು. ಚುನಾವಣೆಯಲ್ಲಿ ಸೋಲಿಗೆ ಕಾರಣಗಳೇನು ಎಂಬುದರ ಬಗ್ಗೆ ವಿಮರ್ಶೆ ಮಾಡಿ ಸರಿಪಡಿಸಿಕೊಳ್ಳಬೇಕು ಎಂಬ ಬಗ್ಗೆಯೂ ವರಿಷ್ಠರು ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಹೇಳಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತಂತ್ರಗಾರಿಕೆ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯುವ ನಿರೀಕ್ಷೆ ಇದೆ. ಕೇಂದ್ರದ ಯೋಜನೆಗಳ ಅನುಷ್ಠಾನ, ಲಸಿಕೆ ಕಾರ್ಯಕ್ರಮದ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಪ್ರತಿಪಕ್ಷಗಳ ಆರೋಪಗಳಿಗೆ ಪ್ರತ್ಯುತ್ತರ ನೀಡಬೇಕು. ಕೆಲವೊಂದು ವಿಚಾರಗಳಲ್ಲಿ ಪಕ್ಷದ ಬಗ್ಗೆ ನಕಾರಾತ್ಮಕವಾಗಿ ಸಂದೇಶ ಜನತೆಗೆ ರವಾನೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಆದಷ್ಟು ಸಕಾರಾತ್ಮಕವಾಗಿ ತಲುಪುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಮುಖಂಡರಿಗೆ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Karnataka BJP ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಕಾರ್ಯಕಾರಣಿ ಸಭೆಯಲ್ಲಿ ಮೊದಲ ವಿಕೆಟ್ ಪತನ

ಹೊಸಮುಖಗಳಿಗೆ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ

ಹುಬ್ಬಳ್ಳಿ: ಬಿಜೆಪಿ ಸರ್ಕಾರದಲ್ಲಿ ಎರಡು- ಮೂರು ಬಾರಿ ಸಚಿವರಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಿ ಎಂದು ಮಾಜಿ ಸಚಿವ ರೇಣುಕಾಚಾರ್ಯ(MP Renukacharya) ಹೇಳಿದ್ದರು. 

ಗುಜರಾತ್‌(Gujarat) ಮಾದರಿಯಲ್ಲಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದ್ದರು. ಡಿ.29 ರಂದು ನಗರದಲ್ಲಿ ನಡೆದ ಕಾರ್ಯಕಾರಿಣಿ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕುರಿತು ನಾವು ಪಕ್ಷದ ವರಿಷ್ಠರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ ನನಗೆ ಸಚಿವನಾಗುವ(Minister) ಆಸೆ ಇಲ್ಲ. ಅದರ ಬಗ್ಗೆ ಅಪೇಕ್ಷಯೂ ಇಲ್ಲ. ನನಗೆ ಶಾಸಕ ಸ್ಥಾನದಲ್ಲಿ ತೃಪ್ತಿ ಇದೆ. ಬಿಜೆಪಿಯನ್ನು(BJP) ಗೆಲ್ಲಿಸಿಕೊಂಡು ಬರುವ ಕೆಲಸವನ್ನು ಹಿರಿಯರು ಮಾಡಬೇಕು. ಅಧಿಕಾರ ಅನುಭವಿಸಿದ ನಾಯಕರು ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ತಿಳಿಸಿದರು. ನನಗೇ ಸಚಿವ ಸ್ಥಾನ ಕೊಡಬೇಕೆಂದಿಲ್ಲ. ಯಾರಿಗೆ ಬೇಕಾದರೂ ಸಚಿವ ಸ್ಥಾನ ನೀಡಲಿ. ಹೊಸ ಮುಖಗಳಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಅವರು ಹೇಳಿದ್ದರು. 
 

click me!