ಅಯೋಧ್ಯೆಗೆ ಹೋಗಬೇಕೇ, ಬೇಡವೇ ಹೈಕಮಾಂಡ್‌ ನಿರ್ಧರಿಸುತ್ತೆ: ಸಚಿವ ಪರಮೇಶ್ವರ್‌

Published : Jan 02, 2024, 04:45 AM IST
ಅಯೋಧ್ಯೆಗೆ ಹೋಗಬೇಕೇ, ಬೇಡವೇ ಹೈಕಮಾಂಡ್‌ ನಿರ್ಧರಿಸುತ್ತೆ: ಸಚಿವ ಪರಮೇಶ್ವರ್‌

ಸಾರಾಂಶ

ಬಿಜೆಪಿಯವರಷ್ಟೇ ಹಿಂದೂಗಳಲ್ಲ, ನಾವು ಕೂಡ ಹಿಂದುಗಳೇ. ರಾಮರಾಜ್ಯ ಎಂಬುದು ಎಲ್ಲರಿಗೂ ಅನ್ವಯವಾಗುವ ವಿಚಾರ. ನಾವು ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.   

ಬೆಂಗಳೂರು (ಜ.02): ಬಿಜೆಪಿಯವರಷ್ಟೇ ಹಿಂದೂಗಳಲ್ಲ, ನಾವು ಕೂಡ ಹಿಂದುಗಳೇ. ರಾಮರಾಜ್ಯ ಎಂಬುದು ಎಲ್ಲರಿಗೂ ಅನ್ವಯವಾಗುವ ವಿಚಾರ. ನಾವು ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ನಾಯಕರು ತೆರಳಲಿದ್ದಾರೆಯೇ ಎಂಬ ಪ್ರಶ್ನೆಗೆ, ರಾಮಮಂದಿರ ಕೇವಲ ಬಿಜೆಪಿಗೆ ಸೀಮಿತವಲ್ಲ. 

ನಾವು ಹೋಗಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ತಿರ್ಮಾನ ಮಾಡಲಿದೆ. ಅವರ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ. ಬಿಜೆಪಿಯವರು ಮಾತ್ರವಲ್ಲ, ನಾವೂ ಹಿಂದೂಗಳೇ ಎಂದರು. ರಾಮ ಹಾಗೂ ರಾಮರಾಜ್ಯದ ಆಡಳಿತ ವಿಶ್ವಕ್ಕೇ ಸಲ್ಲುತ್ತದೆ. ಯಾವುದೇ ವ್ಯತ್ಯಾಸಗಳು ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎನ್ನುವುದೇ ರಾಮರಾಜ್ಯದ ಕಲ್ಪನೆ. ಇದನ್ನು ಯಾರೂ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂದು ಹೇಳಿದರು.

ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಪ್ಲಾನ್: ಪ್ರತಾಪ್ ಸಿಂಹ

ಯತ್ನಾಳ ಹೇಳಿಕೆಯಿಂದ ತನಿಖೆಗೆ ಬಲ: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಕೋವಿಡ್‌ ಹೆಸರಲ್ಲಿ 40 ಸಾವಿರ ಕೋಟಿ ರು. ಹಗರಣ ನಡೆದಿದೆ ಎಂಬ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಚಿವರಾದ ಪ್ರಿಯಾಂಕ್‌ ಖರ್ಗೆ ಹಾಗೂ ಡಾ.ಜಿ.ಪರಮೇಶ್ವರ್‌ ಅವರು ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

ಯತ್ನಾಳ್‌ ಅವರು ಕನ್ನಡಿಗರ ಹಿತಾಸಕ್ತಿ ಕಾಪಾಡಲು ತಮ್ಮ ಬಳಿ ಇರುವ ದಾಖಲೆಗಳನ್ನು ಮಾಧ್ಯಮದ ಎದುರು ಬಿಡುಗಡೆ ಮಾಡಬೇಕು ಅಥವಾ ರಾಜ್ಯ ಸರ್ಕಾರ ನೇಮಿಸಿರುವ ನ್ಯಾ. ಮೈಕಲ್‌ ಸಮಿತಿಗೆ ನೀಡಬೇಕು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರೆ, ಯತ್ನಾಳ್‌ರಿಂದ ಕೋವಿಡ್‌ ಹಗರಣದ ಮೊತ್ತದ ಕುರಿತ ತಪ್ಪು ಕಲ್ಪನೆ ಬದಲಾಗಿದೆ. ₹4000 ಕೋಟಿ ಭ್ರಷ್ಟಾಚಾರ ಎಂದು ಭಾವಿಸಿದ್ದೆವು. ಯತ್ನಾಳ ಅವರ ಹೇಳಿಕೆಯಿಂದ ಅದು ₹40000 ಕೋಟಿ ಹಗರಣ ಎಂಬುದು ಗೊತ್ತಾಗಿದೆ. ಅವರು ಇದೀಗ ನಮ್ಮ ಕೆಲಸವನ್ನು ಹಗುರ ಮಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಜನರಿಗೆ ಕೈ ಗ್ಯಾರಂಟಿ ಅಲ್ಲ, ಮೋದಿ ಗ್ಯಾರಂಟಿ ಬೇಕಿದೆ: ಬಿ.ವೈ.ವಿಜಯೇಂದ್ರ

ಈ ಕುರಿತು ಬಾಗಲಕೋಟೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿರುವ ಪ್ರಿಯಾಂಕ್‌, ಬಿಜೆಪಿ ಹೆಣದಲ್ಲಿ ಹಣ ಮಾಡಿದೆ. ಯತ್ನಾಳ ಅವರು ಸ್ವಪಕ್ಷೀಯರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್‌ ಹಾಗೂ ಕೋಟ ಶ್ರೀನಿವಾಸ್ ಪೂಜಾರಿ ಅವರು ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು. ಕೋವಿಡ್‌ ಹಗರಣದ ಮೊತ್ತದ ಕುರಿತು ನಮಗೆ ತಪ್ಪು ಕಲ್ಪನೆ ಇತ್ತು. ಇದು ₹4000 ಕೋಟಿ ಭ್ರಷ್ಟಾಚಾರ ಎಂದು ಭಾವಿಸಿದ್ದೆವು. ಯತ್ನಾಳ ಅವರ ಹೇಳಿಕೆಯಿಂದ ಅದು ₹40000 ಕೋಟಿ ಹಗರಣ ಎಂಬುದು ಗೊತ್ತಾಗಿದೆ. ಯತ್ನಾಳ ಅವರ ಹೇಳಿಕೆ ತನಿಖೆಗೆ ಇನ್ನಷ್ಟು ಶಕ್ತಿ ಕೊಟ್ಟಂತಾಗಿದೆ ಎಂದು ಪರಮೇಶ್ವರ್ ಅವರು ಕಲಬುರಗಿಯಲ್ಲಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ