ಪ್ರಚಾರಕ್ಕೆ ವಾಹನ, ಸ್ಪೀಕರ್‌ ಬಳಕೆ: ಕೆಆರ್‌ಎಸ್‌ ಪಕ್ಷಕ್ಕೆ ಹೈಕೋರ್ಟ್ ಅನುಮತಿ

Published : Apr 18, 2023, 07:35 AM ISTUpdated : Apr 18, 2023, 07:36 AM IST
ಪ್ರಚಾರಕ್ಕೆ ವಾಹನ, ಸ್ಪೀಕರ್‌ ಬಳಕೆ: ಕೆಆರ್‌ಎಸ್‌ ಪಕ್ಷಕ್ಕೆ ಹೈಕೋರ್ಟ್ ಅನುಮತಿ

ಸಾರಾಂಶ

ರಾಜ್ಯದಲ್ಲಿ ಇನ್ನೂ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ (ಕೆಆರ್‌ಎಸ್‌ಪಿ) ಚುನಾವಣೆಯ ಪ್ರಚಾರದಲ್ಲಿ ವಾಹನ ಮತ್ತು ಧ್ವನಿವರ್ಧಕ ಬಳಸಲು ಅನುಮತಿ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಚ್‌ ನಿರ್ದೇಶಿಸಿದೆ.

ಬೆಂಗಳೂರು (ಏ.18) : ರಾಜ್ಯದಲ್ಲಿ ಇನ್ನೂ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ (ಕೆಆರ್‌ಎಸ್‌ಪಿ) ಚುನಾವಣೆಯ ಪ್ರಚಾರದಲ್ಲಿ ವಾಹನ ಮತ್ತು ಧ್ವನಿವರ್ಧಕ ಬಳಸಲು ಅನುಮತಿ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್(Karnataka Highcourt) ನಿರ್ದೇಶಿಸಿದೆ.

ವಾಹನ ಮತ್ತು ಧ್ವನಿವರ್ಧಕ ಬಳಸಲು ಅನುಮತಿ ನಿರಾಕರಿಸಿದ ಗದಗ ಮತ್ತು ವಿಜಯನಗರ ಜಿಲ್ಲಾ ಚುನಾವಣಾಧಿಕಾರಿ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಎನ್‌. ದೀಪಕ್‌ ಮತ್ತು ಯಲಹಂಕದ ಅಭ್ಯರ್ಥಿ ಜೆ.ಪಿ. ರಘುನಂದನ್‌(JP Raghunandan) ಹೈಕೋರ್ಟ್ ತಕರಾರು ಅರ್ಜಿ ಸಲ್ಲಿಸಿದರು.

ಕೆಆರ್‌ಎಸ್‌ ಪಕ್ಷದಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಚುನಾವಣಾಧಿಕಾರಿಗಳಿಗೆ ಈ ನಿರ್ದೇಶನ ನೀಡಿ ಅರ್ಜಿ ವಿಚಾರಣೆಯನ್ನು ಬೇಸಿಗೆ ರಜೆಯ ನಂತರಕ್ಕೆ ಮುಂದೂಡಿದೆ. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗ, ಗದಗ, ವಿಜಯನಗರ ಮತ್ತು ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ಸೂಚಿಸಿರುವ ನ್ಯಾಯಪೀಠ, ಅಗತ್ಯ ಸನ್ನಿವೇಶ ಸೃಷ್ಟಿಯಾದರೆ ಅರ್ಜಿದಾರರು ಪ್ರಕರಣದ ವಿಚಾರಣೆಗಾಗಿ ಬೇಸಿಗೆ ರಜಾಲದ ಪೀಠದ ಮುಂದೆ ಕೋರಬಹುದು ಎಂದು ನಿರ್ದೇಶಿಸಿದೆ.

ಪ್ರಕರಣದ ವಿವರ:

ಚುನಾವಣಾ ಪ್ರಚಾರಕ್ಕಾಗಿ ಖಾಸಗಿ ವಾಹನ ಮತ್ತು ಧ್ವನಿವರ್ಧಕ ಬಳಸಲು ಅನುಮತಿ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS Party)ಅಭ್ಯರ್ಥಿಗಳು ಗದಗ ಮತ್ತು ವಿಜಯನಗರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು. ಇದೇ ರೀತಿಯ ಮನವಿಯನ್ನು ಜೆ.ಪಿ. ರಘುನಂದನ್‌ ಸಹ ಮಾಡಿದ್ದರು. ಕೆಆರ್‌ಎಸ್‌ಪಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಲ್ಲ ಎಂಬ ಕಾರಣ ನೀಡಿದ್ದ ಚುನಾವಣಾಧಿಕಾರಿಗಳು ಅರ್ಜಿದಾರರ ಮನವಿ ತಿರಸ್ಕರಿಸಿದ್ದರು.

ಚಿಗಟೇರಿ ಜಿಲ್ಲಾಸ್ಪತ್ರೆ ಖಾಸಗಿಕರಣಕ್ಕೆ ವಿರೋಧ: ಕೆಆರ್ ಎಸ್ ಪ್ರತಿಭಟನೆ

ಕೆಆರ್‌ಎಸ್ ಪಾರ್ಟಿ ಭರ್ಜರಿ ಪ್ರಚಾರ ಕಾರ್ಯ ನಡೆಸಲಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?