
ಭುವನೇಶ್ವರ, (ಮಾ.13): ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ ಒಡಿಶಾದ ಬಿಜೆಪಿ ಶಾಸಕ ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿಯೊದರ್ ಕ್ಷೇತ್ರದ ಬಿಜೆಪಿ ಶಾಸಕ ಸುಭಾಸ್ ಪಾಣಿಗ್ರಾಹಿ ಅವರೇ ಶುಕ್ರವಾರ ಬಜೆಟ್ ಅಧಿವೇಶನ ನಡೆಯುವ ವೇಳೆ ಹ್ಯಾಂಡ್ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಮ್ಮ ಭಾಗದ ಭತ್ತದ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ಸುಭಾಸ್ ಪಾಣಿಗ್ರಾಹಿ ಅವರು ಈ ರೀತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ಉಪಸಭಾಪತಿ ಎಸ್. ಎಲ್ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
ದಿಬಗಡ್ ಪ್ರದೇಶದಲ್ಲಿ ಸುಮಾರು ಎರಡು ಲಕ್ಷ ಕ್ವಿಂಟಾಲ್ ಭತ್ತದ ಬೆಳೆ ಸರ್ಕಾರ ಖರೀದಿ ಕೇಂದ್ರ ತೆರೆಯದ್ದಕ್ಕೆ ಹಾಗೇ ಉಳಿದಿದೆ. ಇದರಿಂದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸುವ ಭರದಲ್ಲಿ ಸುಭಾಸ್ ಸ್ಯಾನಿಟೈಸರ್ ಕುಡಿದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸದನದಲ್ಲಿ ಬಿಜೆಪಿ ಶಾಸಕನ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ವಿರೋಧ ವ್ಯಕ್ತವಾಗುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.