Hijab Row ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ರೂ. ಕೊಟ್ಟ ಜೆಡಿಎಸ್ ನಾಯಕ

Published : Feb 10, 2022, 11:40 AM ISTUpdated : Feb 10, 2022, 03:46 PM IST
Hijab Row ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ರೂ. ಕೊಟ್ಟ ಜೆಡಿಎಸ್ ನಾಯಕ

ಸಾರಾಂಶ

* ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ರೂ. ವಿತರಣೆ * ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ 1 ಲಕ್ಷ ರೂ. ಚೆಕ್ * ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ

ಮಂಡ್ಯ, (ಫೆ.10): ನಗರದ ಪಿಇಎಸ್ ಕಾಲೇಜಿನಲ್ಲಿ ಮಂಗಳವಾರ ಹಿಂದೂ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ ಮನೆಗೆ ಜೆಡಿಎಸ್ ಮುಖಂಡ ಹಾಗೂ ಬಿಬಿಎಂಪಿ ಸದಸ್ಯ ಇಮ್ರಾ ನ್ ಪಾಷ ಭೇಟಿ ನೀಡಿದ್ದಾರೆ.

ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ ಮನೆಗೆ ಇಮ್ರಾನ್ ಪಾಷ ನೀಡಿದ್ದು, ನಡೆದ ಘಟನೆ ಬಗ್ಗೆ ಮಾಹಿತಿ ಪಡೆದು, ಮುಸ್ಕಾನ ಕುಟುಂಬಕ್ಕೆ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. 

'ಜೈ ಶ್ರೀರಾಮ್' ಎಂದ ಹುಡುಗರೆದುರು ಸಿಟ್ಟಿಗೆದ್ದು 'ಅಲ್ಲಾ ಹು ಅಕ್ಬರ್' ಎಂದ ವಿದ್ಯಾರ್ಥಿನಿಯ ಸ್ಪಷ್ಟನೆ

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಇಮ್ರಾನ್ ಪಾಷಾ ನಿನ್ನೆ ಘಟನೆ ಬಗ್ಗೆ ಬೇಸರವಾಯ್ತು. ಅದಕ್ಕಾಗಿ ಇವತ್ತು ಮುಸ್ಕಾನ ಮನೆಗೆ ಭೇಟಿ ನೀಡಿ ಮಾತನಾಡಿದ್ದೇನೆ. ಕಾನೂನಾತ್ಮಕವಾಗಿ ನೀವು ಯಾವುದೇ ಕ್ರಮ ತೆಗೆದುಕೊಂಡರು ನಿಮ್ಮ ಜೊತೆ ಇರ್ತೇನೆ. ಹಲ್ಲೆ ಅಥವಾ ತೊಂದರೆ ಕೊಡಲು ಬಂದರೇ ಪೊಲೀಸ್ ಠಾಣೆಗೆ ದೂರು ಕೊಡಲು ಹೇಳಿದ್ದೇನೆ. ಸರ್ಕಾರದ ಜೊತೆ ಮಾತನಾಡಿ ನ್ಯಾಯಕೊಡಿಸುವ ನಿಟ್ಟಿನಲ್ಲಿ ನಾನು ಇರ್ತೇನೆ ಎಂದಿದ್ದೇನೆ ಎಂದರು. 

"

ಇನ್ನು ಜೈ ಶ್ರೀರಾಮ್ ಅಂತ ಕೂಗುವುದರಲ್ಲಿ ತಪ್ಪೇನಿಲ್ಲ. ಆದ್ರೆ ಆ ವಿದ್ಯಾರ್ಥಿಗಳನ್ನು ಯಾರೋ ಪ್ರಚೋದನೆ ಮಾಡಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಉಡುಪಿಯಲ್ಲಿ ಶುರುವಾದ ಹಿಜಾಬ್ ವರ್ಸಸ್ ಕೇಸರಿ ವಿವಾದ ಬಿಸಿಯಾಗುತ್ತಿದೆ. ಈಗ ಈ ವಿಚಾರದಲ್ಲಿ ರಾಜಕೀಯ ಶುರುವಾಗಿದೆ. ಹಿಜಾಬ್ ವಿಚಾರವಾಗಿ ಎಲ್ಲ ಪಕ್ಷಗಳ ನಾಯಕರು ಒಂದರ ಹಿಂದೆ ಒಂದರಂತೆ ಹೇಳಿಕೆ ನೀಡುತ್ತಿದ್ದಾರೆ.

5 ಲಕ್ಷ ರೂ. ಬಹುಮಾನ ಘೋಷಣೆ
ಬೆಂಗಳೂರು: ಮಂಡ್ಯದಲ್ಲಿ ಹುಡುಗರ ಮುಂದೆ 'ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಜಮಾತ್‌ ಉಲ್ಮಾ ಐ ಹಿಂದ್‌ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ ಮುಸ್ಕಾನ್‌ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ವೈರಲ್‌ ಆದ ಬೆನ್ನಲ್ಲೇ ಜಮಾತ್‌ ಉಲ್ಮಾ ಐ ಹಿಂದ್‌ ಟ್ವೀಟ್‌ ಮಾಡಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ವಿದ್ಯಾರ್ಥಿನಿಯ ಸ್ಪಷ್ಟನೆ
ಮಂಗಳವಾರ ಮಂಡ್ಯದ ಪಿಇಎಸ್​ ಕಾಲೇಜಿನ ಬಳಿ 'ಅಲ್ಲಾಹು ಅಕ್ಬರ್' ಎಂದು ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯದ ಪಿಇಎಸ್​ ಕಾಲೇಜಿನ ಬಳಿ ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ ಪ್ರತಿಕ್ರಿಯೆ ನೀಡಿದ್ದು, 'ಅವರು ಜೈ ಶ್ರೀರಾಮ್ ಎಂದು ಕೂಗಿದರು. ನಾನು ಅಲ್ಲಾಹು ಅಕ್ಬರ್ ಎಂದು ಕೂಗಿದೆ' ಎಂದು ಸ್ಪಷ್ಟನೆ ನೀಡಿದ್ದಾರೆ.

'ನಾನು ಅಸೈನ್ಮೆಂಟ್‌ ಕೊಡಲು ಕಾಲೇಜಿಗೆ ಹೋಗಿದ್ದೆ. ಈ ವೇಳೆ ಬುರ್ಕಾ ತೆಗೆದುಕೊಂಡು ಹೋಗು ಎಂದು ಹುಡುಗರು ಹೇಳಿದರು. ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗುತ್ತಿದ್ದರು. ಇದೇ ರೀತಿ ನನ್ನ ಸ್ನೇಹಿತೆಯರಿಗೂ ತಡೆದಿದ್ದರು. ಅವರು ಜೈ ಶ್ರೀರಾಮ್ ಎಂದು ಕೂಗಿದರು. ನಾನು ಅಲ್ಲಾಹು ಅಕ್ಬರ್' ಎಂದು ಕೂಗಿದೆ' ಎಂದು ಸ್ಪಷ್ಟನೆ ನೀಡಿದರು.

'ಅವರು ಕೂಗಿದ್ದು ತಪ್ಪಿಲ್ಲ, ನಾನು ಕೂಗಿದ್ದೂ ತಪ್ಪಿಲ್ಲ. ನಾನು ನನ್ನ ಧರ್ಮ ಪಾಲನೆ ಮಾಡಿದ್ದೇನೆ. ಅವರು ಕಿವಿ ಹತ್ತಿರ ಬಂದು ಘೋಷಣೆ ಕೂಗಿದ್ರು. ಆ ಕ್ಷಣದಲ್ಲಿ ನನಗೆ ಯಾವ ಭಯವೂ ಆಗಲಿಲ್ಲ. ನಾನು ಯಾಕೆ ಭಯ ಪಡಬೇಕು?' ಎಂದರು.

ಇದೇ ವೇಳೆ, ಕೋರ್ಟ್ ಆದೇಶ ಏನು ಬರುತ್ತೋ ಗೊತ್ತಿಲ್ಲ. ಆದರೆ ಹಿಜಬ್‌ ವಿಚಾರದಲ್ಲಿ ಆದೇಶ ಪಾಲನೆ ಕಷ್ಟ' ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
ಮೂರುವರೆ ದಶಕಗಳಿಂದ ಇದ್ದ ಒಳ ಮೀಸಲಾತಿಗಾಗಿ ಹೋರಾಟಕ್ಕೆ ಜಯ ಸಿಕ್ಕಿದೆ: ಸಚಿವ ಮುನಿಯಪ್ಪ