ಡಿಕೆಶಿ ಕಾರ್ಯತಂತ್ರ ಠುಸ್‌ ಆಯ್ತಾ? ಹಿಮಾಚಲ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೆ ಬಿಕ್ಕಟ್ಟು?

Published : Mar 02, 2024, 01:45 PM IST
ಡಿಕೆಶಿ ಕಾರ್ಯತಂತ್ರ ಠುಸ್‌ ಆಯ್ತಾ? ಹಿಮಾಚಲ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೆ ಬಿಕ್ಕಟ್ಟು?

ಸಾರಾಂಶ

ಹಿಮಾಚಲಪ್ರದೇಶ ಕಾಂಗ್ರೆಸ್‌ ಸರ್ಕಾರದಲ್ಲಿನ ಎಲ್ಲ ಬಿಕ್ಕಟ್ಟು ಶಮನವಾಗಿದೆ ಎಂದು ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ ಬೆನ್ನಲ್ಲೇ, ಪ್ರಧಾನಿ ಮೋದಿ ಅವರನ್ನು ಹಿಮಾಚಲ ಕಾಂಗ್ರೆಸ್‌ ಅಧ್ಯಕ್ಷೆ ಹೊಗಳಿದ್ದಾರೆ. ಹೀಗಾಗಿ ಹೊಸ ಬಿಕ್ಕಟ್ಟಿನ ಭೀತಿ ಕಾಂಗ್ರೆಸ್ಸಿಗೆ ಶುರುವಾಗಿದೆ.

ಶಿಮ್ಲಾ (ಮಾ.2): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಅಡ್ಡಮತದಾನ ಮಾಡಿದ ಪರಿಣಾಮ ಪತನದ ಭೀತಿ ಎದುರಿಸುತ್ತಿರುವ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರದಲ್ಲಿ ಬಿಕ್ಕಟ್ಟು ಇನ್ನೂ ಶಮನವಾಗಿಲ್ಲ. ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿಮಾಚಲಕ್ಕೆ ತೆರಳಿ ಬಿಕ್ಕಟ್ಟು ಬಗೆಹರಿಸಿದ್ದಾರೆ ಎಂದು ಹೇಳಲಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷೆ ಪ್ರತಿಭಾ ಸಿಂಗ್‌ ಬಿಜೆಪಿಯನ್ನು ಹೊಗಳಿ ಸಂಚಲನ ಮೂಡಿಸಿದ್ದಾರೆ.

‘ಬಿಜೆಪಿ ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ ಮೇಲೆ ಅದು ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷ ದುರ್ಬಲವಾಗಿದೆ’ ಎಂದು ಪ್ರತಿಭಾ ಸಿಂಗ್‌ ಶುಕ್ರವಾರ ಹೇಳಿದ್ದಾರೆ. ಪ್ರತಿಭಾ ಅವರ ಪುತ್ರ, ರಾಜ್ಯದಲ್ಲಿ ಸಚಿವರಾಗಿರುವ ವಿಕ್ರಮಾದಿತ್ಯ ಸಿಂಗ್‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅದನ್ನು ಮರಳಿ ಪಡೆದುಕೊಂಡು, ಆರು ಬಂಡಾಯ ಕಾಂಗ್ರೆಸ್‌ ಶಾಸಕರನ್ನು ಭೇಟಿ ಮಾಡಿದ ಬೆನ್ನಲ್ಲೇ ಪ್ರತಿಭಾ ಈ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

225 ರಾಜ್ಯಸಭಾ ಸದಸ್ಯರ ಒಟ್ಟು ಆಸ್ತಿ 19602 ಕೋಟಿ! ಅಚ್ಚರಿಯ ಅಂಶ ಬೆಳಕಿಗೆ, ಶ್ರೀಮಂತ ಪಕ್ಷ ಯಾವುದು?

‘ಕಾಂಗ್ರೆಸ್‌ನಲ್ಲಿ ಇನ್ನೂ ಸಾಕಷ್ಟು ಕೆಲಸಗಳು ಆಗಬೇಕಿದೆ. ಬಿಜೆಪಿಯವರು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿರುವುದು ನಿಜ. ಆರಂಭದಿಂದಲೂ ಇದನ್ನು ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆ ಹೇಳುತ್ತಾ ಬಂದಿದ್ದೇನೆ. ಮುಂಬರುವ ಚುನಾವಣೆಯಲ್ಲಿ ನಾವು ಪೈಪೋಟಿ ನೀಡಬೇಕೆಂದರೆ ಪಕ್ಷವನ್ನು ಬಲಗೊಳಿಸಬೇಕಿದೆ. ಆದರೆ ಪಕ್ಷದಲ್ಲಿ ತಳಮಟ್ಟದಲ್ಲಿ ಸಾಕಷ್ಟು ಸಮಸ್ಯೆಗಳಿವೆ’ ಎಂದೂ ಪ್ರತಿಭಾ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ತಡ ರಾತ್ರಿ 3.30ರವರೆಗೂ ಚುನಾವಣಾ ಸಮಿತಿ ಸಭೆ, ಕೆಲಸ ಮಾಡದ ಹಲವು ಸಂಸದರಿಗೆ ಕೊಕ್‌

ಅನರ್ಹತೆ ಪ್ರಶ್ನಿಸಿ ಆರು ಹಿಮಾಚಲ ಕಾಂಗ್ರೆಸ್‌ ಶಾಸಕರು ಹೈಕೋರ್ಟ್‌ಗೆ
ನವದೆಹಲಿ: ಪಕ್ಷದ ವಿಪ್‌ ಉಲ್ಲಂಘಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನಿಂದ ವಜಾಗೊಂಡಿರುವ ಹಿಮಾಚಲಪ್ರದೇಶದ 6 ಕಾಂಗ್ರೆಸ್‌ ಶಾಸಕರು ಹೈಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಸ್ಪೀಕರ್‌ ನೀಡಿದ್ದ ನೋಟಿಸ್‌ಗೆ ಉತ್ತರಿಸಲು ತಮಗೆ ಕಾನೂನಿನನ್ವಯ ಏಳು ದಿನಗಳ ಕಾಲಾವಕಾಶ ನೀಡಿಲ್ಲ. ಸೂಕ್ತ ದಾಖಲೆಗಳನ್ನು ಒದಗಿಸದೇ ನಿಯಮಬಾಹಿರವಾಗಿ ತಮ್ಮನ್ನು ಅನರ್ಹ ಮಾಡಲಾಗಿದೆ ಎಂಬ ಕಾರಣವಿಟ್ಟುಕೊಂಡು ನ್ಯಾಯಾಲಯದಲ್ಲಿ ದಾವೆ ಹೂಡಲು ಕಾಂಗ್ರೆಸ್‌ ಶಾಸಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಹಾಕಿದ್ದಕ್ಕೆ ಮತ್ತು ಬಜೆಟ್‌ ಮೇಲಿನ ಮತದಾನಕ್ಕೆ ಗೈರಾದ ಕಾರಣ ನೀಡಿ 6 ಶಾಸಕರನ್ನು ವಿಧಾನಸಭೆ ಸ್ಪೀಕರ್‌ ವಜಾ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!