ಹಿಂದೂ ಧರ್ಮದ ರಕ್ಷಣೆಗಾಗಿ ಜೆಸಿಬಿ ಸರ್ಕಾರ 2028ರಲ್ಲಿ ಅಧಿಕಾರಕ್ಕೆ ಬರಲಿದೆ: ಶಾಸಕ ಯತ್ನಾಳ್

Published : Oct 06, 2025, 10:15 AM IST
Yatnal

ಸಾರಾಂಶ

ಹಿಂದೂ ಧರ್ಮದ ರಕ್ಷಣೆಗಾಗಿ ಜನ ಸೇರುತ್ತಿದ್ದಾರೆ. ಸನಾತನ ಧರ್ಮ ಹಿಂದುಗಳ ಸ್ವಾಭಿಮಾನ ರಕ್ಷಣೆ ಮಾಡುವವರು ಮುಖ್ಯಮಂತ್ರಿ ಆಗಬೇಕಿದೆ. 2028ರಿಂದ ಜೆಸಿಬಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಶಿವಮೊಗ್ಗ (ಅ.06): ಸನಾತನ ಧರ್ಮ ಹಿಂದುಗಳ ಸ್ವಾಭಿಮಾನ ರಕ್ಷಣೆ ಮಾಡುವವರು ಮುಖ್ಯಮಂತ್ರಿ ಆಗಬೇಕಿದೆ. 2028ರಿಂದ ಜೆಸಿಬಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಶಿವಮೊಗ್ಗದ ವೀರಕೇಸರಿ ಯುವಕರ ಸಂಘದ ಗಣಪತಿ ರಾಜಬೀದಿ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದುಗಳ ಮೇಲೆ ದಬ್ಬಾಳಿಕೆ ಮಾಡುವವರನ್ನು ಜೆಸಿಬಿ ಗಳ ಮೂಲಕ ನಿರ್ನಾಮ ಮಾಡಲಾಗುವುದು. ನಮ್ಮ ಸರ್ಕಾರ ಬಂದರೆ ಮೊದಲು ಪೊಲೀಸರಿಗೆ ಏಕೆ 47 ಗನ್ ನೀಡಲಾಗುವುದು . ನಮ್ಮ ಸರ್ಕಾರ ಬಂದರೆ ಡಿಜೆ ಹಣ ಕೊಡಬೇಕಿಲ್ಲ ಮಸೀದಿ ಮುಂದೆ ಕುಣಿಯುವುದಕ್ಕೆ ನಿರ್ಬಂಧ ಇಲ್ಲ ಎಂದರು.

ಯತ್ನಾಳಗಾಗಿ ಜನ ಸೇರುತ್ತಿಲ್ಲ ಬದಲಾಗಿ ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ ಜನ ಸೇರುತ್ತಿದ್ದಾರೆ. ರಾಜ್ಯದಲ್ಲಿ 108, 110 ಸೀಟು ಅಲ್ಲ 150 ಸೀಟು ಗೆದ್ದು ಸರ್ಕಾರ ರಚನೆ ಮಾಡುತ್ತೇವೆ. ಕರ್ನಾಟಕದಲ್ಲಿ ಇನ್ಮುಂದೆ ನಾಟಕ ಮಾಡುವ ಕಂಪನಿಗಳು ಬಂದ್ ಆಗುತ್ತವೆ. ಕರ್ನಾಟಕದಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ . ನಮ್ಮ ಸರ್ಕಾರದಲ್ಲಿ ಹೊಂದಾಣಿಕೆ ರಾಜಕಾರಣ ಮಾಡುವವರ ಆಟ ನಡೆಯುವುದಕ್ಕೆ ಬಿಡುವುದಿಲ್ಲ. ಔರಂಗಜೇಬನ ಕಟೌಟ್ ಹಾಕುವವರ ಆಟ 2028 ರಿಂದ ನಡೆಯುವುದಿಲ್ಲ. ಔರಂಗಜೇಬನ ಕಟೌಟ್ ಹಾಕಿದವರ ಮನೆಗಳ ಮೇಲೆ ಕೇಸರಿ ಧ್ವಜ ಹಾರುತ್ತದೆ. ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆದರೆ ಜೆಸಿಬಿ ಗರ್ಜನೆ ಮಾಡುತ್ತದೆ.

ಹಿಂದುತ್ವದ ಶಕ್ತಿ

ಕಾಂಗ್ರೆಸ್ ಸರ್ಕಾರದಲ್ಲಿ ಡಿಜೆ ಹಾಕುವುದಕ್ಕೆ ಅವಕಾಶ ಇಲ್ಲ. ದಿನಕ್ಕೆ ಐದು ಬಾರಿ ನಮಾಜು ಮಾಡುವುದಕ್ಕೆ ಸಂಪೂರ್ಣ ಅನುಮತಿ ಕೊಟ್ಟಿದ್ದಾರೆ. ಶಿವಮೊಗ್ಗದಲ್ಲಿ ಡಿಜೆಗೆ ಪೊಲೀಸರು ಒಂದು ಲಕ್ಷ ರೂ ಠೇವಣಿ ಪಡೆದಿದ್ದಾರೆ. ಹಾಗಿದ್ದರೆ 5 ಬಾರಿ ನಮಾಜು ಮಾಡುವವರಿಂದ ಇವರು ಎಷ್ಟು ಠೇವಣಿ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಹಿಂದುತ್ವ ಎಂಬುದೇ ಇರಲಿಲ್ಲ ಕೇಸರಿ ಶಾಲು ಹಾಕುವವರು ಇರಲಿಲ್ಲ. ನಾನು ಹೋದಾಗ 15 ರಿಂದ 20 ಸಾವಿರ ಯುವಕರು ಕೇಸರಿ ಶಾಲಾ ಹಾಕಿಕೊಂಡು ಬಂದಿದ್ದರು ಅದು ಹಿಂದುತ್ವದ ಶಕ್ತಿ ಎಂದರು. ಇನ್ನು ರಾಜಬೀದಿ ಉತ್ಸವದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಮಾಜಿ ಜಿಪಂ ಸದಸ್ಯ ಕಾಂತೇಶ್, ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು