ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್‌: ರೇಣುಕಾಚಾರ್ಯ ಆರೋಪ

By Kannadaprabha News  |  First Published Jan 8, 2024, 11:03 PM IST

ಹಿಂದೂಗಳು, ಕರ ಸೇವಕರನ್ನೇ ಗುರಿಯಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಬಂಧಿಸುವ ಕೆಲಸ ಮಾಡುತ್ತಿದ್ದು, ಈ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್ ಆಗಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. 
 


ದಾವಣಗೆರೆ (ಜ.08): ಹಿಂದೂಗಳು, ಕರ ಸೇವಕರನ್ನೇ ಗುರಿಯಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಬಂಧಿಸುವ ಕೆಲಸ ಮಾಡುತ್ತಿದ್ದು, ಈ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್ ಆಗಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌ ಹೋರಾಟ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಹಿಂದೂ ಪರ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಪರ ಹೋರಾಟ ತೀವ್ರಗೊಂಡ ನಂತರ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಹಿಂದೂಗಳ, ಕರ ಸೇವಕರನ್ನೇ ಸಿದ್ದರಾಮಯ್ಯ ಸರ್ಕಾರ ಗುರಿ ಮಾಡುತ್ತಿದೆ. ಇದು ರೈತ ವಿರೋಧಿ, ಹಿಂದು ವಿರೋಧಿ, ತುಘಲಕ್‌ ಸರ್ಕಾರವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಂಧಲೆ, ಗಲಭೆ ಪ್ರಕರಣದ ಆರೋಪಿಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಮ್ಮ ಬ್ರದರ್ಸ್‌ ಎನ್ನುತ್ತಾರೆ. ಪೊಲೀಸ್ ಠಾಣೆ, ವಾಹನಗಳು, ಜನ ಸಾಮಾನ್ಯರ ಮನೆಗಳಿಗೆ ನುಗ್ಗಿದವರು, ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯಲು ಮುಂದಾಗಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ: ಸಚಿವ ಚಲುರಾಯಸ್ವಾಮಿ

ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಅನುದಾನ ಘೋಷಿಸುವ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಆರಾಧನಾ ಕೇಂದ್ರಗಳಾದ ದೇವಾಲಯ, ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಕೊಡಲು ಹಣವಿಲ್ಲ. ತೀವ್ರ ಬರಕ್ಕೆ ತುತ್ತಾಗಿರುವ ರಾಜ್ಯದ ರೈತರಿಗೆ ಬರ ಪರಿಹಾರ ನೀಡಲು, ಬರ ಪರಿಹಾರ ಕಾರ್ಯ ಕೈಗೊಳ್ಳಲು ಹಣ ಇಲ್ಲವಂತೆ ಎಂದು ವ್ಯಂಗ್ಯವಾಡಿದರು.

ರಾಜ್ಯವ್ಯಾಪಿ ಬೀದಿಗಿಳಿದು ಹೋರಾಟ: ಗೋಧ್ರಾ ಘಟನೆ ಮರುಕಳಿಸುತ್ತದೆನ್ನುವ ಮೂಲಕ ರಾಜ್ಯದ ಜನತೆಯಲ್ಲಿ ಭಯ ಹುಟ್ಟು ಹಾಕುವ ಕೆಲಸ ಬಿ.ಕೆ.ಹರಿಪ್ರಸಾದ್ ಮಾಡುತ್ತಿದ್ದಾರೆ. ಹಿಂದೂಗಳ ಬಂಧಿಸಿದರೆ, ಹಿಂದೂಗಳು, ಕರ ಸೇವಕರನ್ನೇ ಗುರಿಯಾಗಿಸಿ ತಂತ್ರ, ಕುತಂತ್ರಗಳನ್ನು ಕಾಂಗ್ರೆಸ್ ಸರ್ಕಾರ ಮುಂದುವರಿಸಿದರೆ ನಮ್ಮ ಕುಟುಂಬಗಳ ಸಮೇತ ಬೀದಿಗಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ರಾಜ್ಯದಲ್ಲೇನು ಷರಿಯಾ ಕಾನೂನು ಜಾರಿಗೊಳಿಸಲು ಹೊರಟಿದ್ದೀರಾ? ನಾವು ಇಡೀ ರಾಜ್ಯವ್ಯಾಪಿ ನಿಮ್ಮ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತೇವೆ. ಕರ ಸೇವಕರು, ಶ್ರೀರಾಮನ ಶಾಪವು ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಲಿದೆ. ಹಿಂದೂಗಳ ಶಾಪವೇ ಕಾಂಗ್ರೆಸ್ ಸರ್ಕಾರದ ಪತನಕ್ಕೂ ಕಾರಣವಾಗಲಿದೆ. ಎಂದು ಆಕ್ರೋಶ ಹೊರ ಹಾಕಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ, ಹರಿಹರದ ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ, ಪಾಲಿಕೆ ಸದಸ್ಯ ಆರ್.ಎಲ್‌.ಶಿವಪ್ರಕಾಶ, ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ರಾಜು ವೀರಣ್ಣ, ಅಣಜಿ ಬಸವರಾಜ, ಪ್ರವೀಣ ಜಾಧವ್ ಇತರರಿದ್ದರು.

ರಾಜ್ಯದಲ್ಲಿ ಬಿಜೆಪಿ ನಾಯಕರ ಬೇಳೆ ಬೇಯಲ್ಲ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಭೀಕರ ಬರ ಇದ್ದರೂ, ರೈತರಿಗೆ ಕೇವಲ 2 ಸಾವಿರ ರು. ಪರಿಹಾರ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರವು ಅನ್ನದಾತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ, ಓಲೈಕೆಯಲ್ಲಿ ತೊಡಗಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರಾಜ್ಯದ ಜನತೆ ಇದಿರು ನೋಡುತ್ತಿದ್ದಾರೆ.
-ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

click me!