ಹಿಂದೂಗಳು ನ್ಯಾಯಕ್ಕಾಗಿ ತಾಳ್ಮೆಯಿಂದ ಕಾದಿದ್ದಾರೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Published : Jan 09, 2024, 01:30 AM IST
ಹಿಂದೂಗಳು ನ್ಯಾಯಕ್ಕಾಗಿ ತಾಳ್ಮೆಯಿಂದ ಕಾದಿದ್ದಾರೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನಾವಶ್ಯಕವಾಗಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ಸೇಡಿನ ರಾಜಕಾರಣ ಮಾಡುತ್ತಿದ್ದು, ಇದು ನಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದರು. 

ಹೊನ್ನಾಳಿ (ಜ.09): ಅಯೋಧ್ಯೆಯಲ್ಲಿ ಜ. 22ರಂದು ರಾಮಮಂದಿರ ಉದ್ಘಾಟನೆ ಅಂಗವಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ಮಂತ್ರಾಕ್ಷತೆ, ಶ್ರೀರಾಮನ ಭಾವಚಿತ್ರ ಹಾಗೂ ಕರಪತ್ರ ವಿತರಣಾ ಮಹಾಸಂಪರ್ಕ ಅಭಿಯಾನ ಅಂಗವಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಬಿಜೆಪಿ ಕಾರ್ಯಕರ್ತರು ನ್ಯಾಮತಿ ಪಟ್ಟಣದಲ್ಲಿ ಮಹಾಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡು ಅಂದು ಎಲ್ಲರೂ ಉತ್ತರ ದಿಕ್ಕಿಗೆ ಐದು ದೀಪಗಳ ಹಚ್ಚಿ ಪೂಜೆ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನಾವಶ್ಯಕವಾಗಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ಸೇಡಿನ ರಾಜಕಾರಣ ಮಾಡುತ್ತಿದ್ದು, ಇದು ನಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನ್ಯಾಯಾಲಯದಲ್ಲಿ ಅಯೋಧ್ಯೆ ಬಗ್ಗೆ ವಿಚಾರಣೆಗೆ ಅಂಗೀಕಾರ ಮಾಡಿದಾಗಲೂ ಕಾಂಗ್ರೆಸ್ ಮುಸ್ಲಿಂರ ಪರವಾಗಿ ವಕೀಲರ ನೇಮಿಸಿದ್ದರು, ಅಲ್ಲದೆ ಕೆಲವು ಕಾಂಗ್ರೆಸ್ ನಾಯಕರು ಅಯೋಧ್ಯೆ ಬಗ್ಗೆ ಹಿಂದೂಗಳ ಪರವಾಗಿ ತೀರ್ಪು ನೀಡಿದಾಗಲೂ ತೀರ್ಪನ್ನೇ ಪ್ರಶ್ನಿಸಿ ಮುಸ್ಲಿಂ ಪರ ತುಷ್ಟೀಕರಣ ವ್ಯಕ್ತಪಡಿಸಿದ್ದು ಇದೇ ಕೆಲವು ಕಾಂಗ್ರೆಸ್ಸಿಗರು ಎಂದರು.

ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್‌: ರೇಣುಕಾಚಾರ್ಯ ಆರೋಪ

ಸುಮಾರು ಐದುನೂರು ವರ್ಷಗಳ ಸತತ ಹೋರಾಟದ ಬಳಿಕ ನಮಗೆ ರಾಮಮಂದಿರ ವಿಚಾರದಲ್ಲಿ ಸುಪ್ರೀಂ ನ್ಯಾಯಾಲಯದ ತೀರ್ಪಿನ ನಂತರವೇ ಹಿಂದೂಗಳು ಅಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದು, ಅಲ್ಲಿಯವರೆಗೂ ಹಿಂದೂಗಳು ತಾಳ್ಮೆಯಿಂದ ಕಾಯ್ದಿದ್ದಾರೆ. ಯಾವುದೇ ಕಾರಣಕ್ಕೂ ದಾಳಿ ಮಾಡಲಿಲ್ಲ, ಆದರೂ ಕೆಲವು ಕಾಂಗ್ರೆಸ್ಸಿಗರು ಸುಖಾಸುಮ್ಮನೆ ಹಿಂದೂ ಸಂಘಟನೆ ಹಾಗೂ ಬಿಜೆಪಿ ವಿರುದ್ಧ ಆರೋಪ ಮಾಡಿದ್ದರೂ ನ್ಯಾಯಾಲಯದಲ್ಲಿ ರಾಮಮಂದಿರ ವಿಚಾರದಲ್ಲಿ ಐತಿಹಾಸಿಕ ತೀರ್ಪು ನೀಡಿ ಹಿಂದೂಗಳ ಭಾವನೆಗೆ ಗೌರವ ನೀಡಿದೆ ಎಂದರು.

ದೇಶದಲ್ಲಿ ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್: ಸಚಿವೆ ಶೋಭಾ ಕರಂದ್ಲಾಜೆ ಆರೋಪ

1992 ರಲ್ಲಿ ಕರಸೇವಕರಾಗಿ ರಾಮನ ಸೇವೆ ಮಾಡಲಿಕ್ಕೆ ಅಯೋಧ್ಯೆಗೆ ಹೋಗಿದ್ದ ನೂರಾರು ಕರಸೇವಕರ ಮಾರಣ ಹೋಮ ಆಗಿದೆ, ಸರಯು ನದಿಯಲ್ಲಿ ನೂರಾರು ಋಷಿಮುನಿಗಳ ಹಾಗೂ ಕರ ಸೇವಕರ ಕಾಲಿಗೆ ಮರಳು ಕಟ್ಟಿ ನೀರಿನಲ್ಲಿ ಮುಳುಗಿಸಿದ್ದರು ಅಲ್ಲಿನ ಸಮಾಜವಾದಿ ಪಕ್ಷದ ಸರ್ಕಾರ. ಇಂತಹ ಸಂದರ್ಭದಲ್ಲೂ ಕರಸೇವಕರು ತಮ್ಮ ಪ್ರಾಣಕ್ಕೂ ಹೆದರದೆ ಹೋರಾಟ ಮಾಡಿದ್ದಾರೆ ಎಂದರು. ನ್ಯಾಮತಿ ತಾಲೂಕು ಬಿಜೆಪಿ ಮುಖಂಡರಾದ ರತ್ನಾಕರ್, ಸದಾಶಿವ, ತಾ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್, ಸೋಮಶೇಖರ್, ಶ್ರೀನಿವಾಸ್, ರತ್ನಮ್ಮ,ಗೀತಮ್ಮ, ಕುಮಾರ್ ಹಾಗೂ ಇತರರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು - Jaya Bachchan ಬಾಯ್ಕಾಟ್‌ ಆಗ್ತಾರಾ?