ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವುದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದನ್ನು ವಿರೋಧಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.
ಬೆಂಗಳೂರು (ಮಾ.17): ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವುದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದನ್ನು ವಿರೋಧಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೀಸಲಾತಿಯಲ್ಲಿ ಜೈನರು ಮತ್ತು ಇತರ ಅಲ್ಪಸಂಖ್ಯಾತರನ್ನು ನೆಪ ಮಾತ್ರಕ್ಕೆ ಸೇರಿಸಲಾಗಿದೆ. ಓಲೈಕೆ ರಾಜಕಾರಣ, ತುಷ್ಟೀಕರಣ ರಾಜಕಾರಣ ಮಾಡಲಾಗುತ್ತಿದೆ. ಮುಸ್ಲಿಮರಿಗೆ ಮೀಸಲಾತಿ ನೀಡುವುದರ ಹಿಂದೆ ದೇಶವನ್ನು ಕೆಡಿಸುವ ಉದ್ದೇಶವಿದೆ. ಮುಸ್ಲಿಮರಿಂದ ಈ ದೇಶಕ್ಕೆ ಗಂಡಾಂತರ ಇದೆ ಎಂದು ನಾನು ಹೇಳುತ್ತಿಲ್ಲ. ಆದರೆ, ಮುಸ್ಲಿಮರ ಜೊತೆಗಿದ್ದು ಮುಸ್ಲಿಂ ಮನಸ್ಥಿತಿಯ ಹಿಂದೂಗಳಿಂದ ಈ ದೇಶಕ್ಕೆ ಗಂಡಾಂತರ ಇದೆ ಎಂದರು.
ಧರ್ಮಾಧಾರಿತ ಮೀಸಲಾತಿ ಕೊಡಲು ಅವಕಾಶ ಇಲ್ಲ. ಅದು ಸಂವಿಧಾನಕ್ಕೆ ವಿರುದ್ಧವಾದ ನಿರ್ಧಾರ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಧಾರ್ಮಿಕ ಮೀಸಲಾತಿಯನ್ನು ಹಿಂಪಡೆಯಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧಾರ್ಮಿಕ ಮೀಸಲಾತಿ ನೀಡುವುದಾಗಿ ಘೋಷಿಸಿ, ಈಗ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಕೊಟ್ಟಿದ್ದಾರೆ. ಇದು ಕಾನೂನುಬಾಹಿರ ಎಂದು ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ನಾವು ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಶೇ.41ಕ್ಕಿಂತ ಹೆಚ್ಚು ಇದ್ದೇವೆ. ನಮಗೆ ಯಾರ ಹಂಗೂ ಬೇಕಿಲ್ಲ. ನಾವೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ. 1947ರಲ್ಲಿ ಈ ದೇಶ ವಿಭಜನೆ ಆಗಿತ್ತು. 2047ರಲ್ಲಿ 100 ವರ್ಷ ತುಂಬಿದಾಗ ನಾವು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದನ್ನು ಯಾರು ಹೇಳುತ್ತಿದ್ದಾರೆ ಎಂದು ನಾರಾಯಣಸ್ವಾಮಿ ಪ್ರಶ್ನಿಸಿದರು.
ದಲಿತರಿಗೆ ಅನ್ಯಾಯ ಮಾಡಿದ್ದಕ್ಕೆ ಸಿದ್ದು ಕುಂಟುತ್ತಿದ್ದಾರೆ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುವ ಹಾಗಾಗಿದೆ, ವ್ಹೀಲ್ ಚೇರ್ ಬಂದಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಗುರುವಾರ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಛಲವಾದಿ, ದಲಿತ ಸಮಿತಿಯ ಒಕ್ಕೊರಲ ಹೋರಾಟಕ್ಕೆ ವೇದಿಕೆ ಮೇಲೆಯೇ ದಲಿತ ಸಮುದಾಯದ ಮುಖಂಡರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದರು.
ನದಿ ಹರಿವಾಗ ಕಸ, ಕಡ್ಡಿ ಅಡ್ಡ ಬರುತ್ತದೆ: ಬಿ.ವೈ.ವಿಜಯೇಂದ್ರ ಮಾರ್ಮಿಕ ಹೇಳಿಕೆ
ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ನಮಗೆ ಗ್ಯಾರಂಟಿಗಳನ್ನು ಕೊಟ್ಟೇ ಇಲ್ಲ. ನಮ್ಮಲ್ಲಿ ವಿದ್ಯಾವಂತರು ಹೆಚ್ಚಾಗುತ್ತಿದ್ದಾರೆ. ಆದರೆ, ನಿರುದ್ಯೋಗವೂ ಹೆಚ್ಚಾಗಿದೆ. ಪೇಪರ್‌ಗಳಲ್ಲಷ್ಟೇ ಗ್ಯಾರಂಟಿ ಇದೆ ಎಂದರು. ವಾಸ್ತವದಲ್ಲಿ ನಮಗೆ ಆ ಗ್ಯಾರಂಟಿ ಸಿಗುತ್ತಿಲ್ಲ. ಕಾಂಗ್ರೆಸ್ ಪಕ್ಷದವರು ಗುಲಾಮಗಿರಿಯ ಸುಖದ ಸಂಭ್ರಮ ಮಾಡುತ್ತಿದ್ದಾರೆ. ದಲಿತರು ಬೀದಿಯಲ್ಲಿ ಕುಳಿತಿದ್ದೇವೆ. ದಲಿತರ ಹೋರಾಟದಲ್ಲಿ ಕೈ ಜೋಡಿಸಲು ಬಿಜೆಪಿ 14 ತಂಡಗಳನ್ನು ರಚನೆ ಮಾಡಿದೆ ಎಂದರು.