ಬಿಜೆಪಿಯಲ್ಲಿ ಕಡೆಗಣನೆ ಆಯಿತು ಎಂದು ನಾನು ಹೇಳಲ್ಲ. ನನ್ನ ಕ್ಷೇತ್ರಕ್ಕೆ ಬಿಎಸ್‌ವೈ, ಬೊಮ್ಮಾಯಿ ಹೆಚ್ಚಿನ ಅನುದಾನ ನೀಡಿದ್ದಾರೆ. ಆದ್ರೆ, ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮಾಜವನ್ನು ಕಡೆಗಣಿಸಲಾಯಿತು: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಚಿತ್ರದುರ್ಗ(ಅ.11): ಜಿಲ್ಲೆಯ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಚಿತ್ರದುರ್ಗದ ಕೃಷ್ಣ ಯಾದವಾನಂದ ಮಠಕ್ಕೆ ನಿನ್ನೆ(ಮಂಗಳವಾರ) ಭೇಟಿ ನೀಡಿ ನೀಡಿದ್ದಾರೆ. ಭೇಟಿ ವೇಳೆ ಶಾಸಕಿ ಪೂರ್ಣಿಮಾಗೆ ಪತಿ ಡಿ.ಟಿ.ಶ್ರೀನಿವಾಸ್ ಸಾಥ್ ನೀಡಿದ್ದರು.
ಕೃಷ್ಣ ಯಾದವಾನಂದ ಮಠದಲ್ಲಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಮಾಜದ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಕೃಷ್ಣ ಯಾದವಾನಂದ ಶ್ರೀ ಅವರ ಸಮ್ಮುಖದಲ್ಲಿ ಸಮಾಜದ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.
undefined
'ಡಿಕೆಶಿ ಜೈಲಿಗೆ ಕಳಿಸೋಕೆ ಕುಮಾರಸ್ವಾಮಿ ಬಿಜೆಪಿ ಜೊತೆ ಕೈ ಜೋಡಿಸಿದ್ರಾ?'
ಪತಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು 'ಕೈ' ಹಿಡಿದ ಪೂರ್ಣಿಮಾ?
ಚಿತ್ರದುರ್ಗದ ಶ್ರೀಕೃಷ್ಣ ಯಾದವಾನಂದ ಮಠ ಭೇಟಿ ಬಳಿಕ ಮಾತನಾಡಿದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ಬಹುತೇಕ ಅಕ್ಟೋಬರ್ 20ಕ್ಕೆ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಲಾಗಿದೆ. ಈವರೆಗೆ ಕಾಂಗ್ರೆಸ್ ಸೇರ್ಪಡೆ ದಿನಾಂಕ ಖಚಿತವಾಗಿಲ್ಲ. ಕಾಂಗ್ರೆಸ್ ಸೇರ್ಪಡೆ ದಿನಾಂಕ ನಿಗದಿ ಬಳಿಕ ತಿಳಿಸುತ್ತೇನೆ. ನಮ್ಮ ಸಮಾಜದ ಮುಖಂಡರ ಆಲೋಚನೆಯಂತೆ ಪಕ್ಷ ಬದಲಾವಣೆ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಪತಿ ಡಿ.ಟಿ.ಶ್ರೀನಿವಾಸ್ ಅವರಿಗೆ MLC ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಿದೆ. ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಪಕ್ಷದ ಟಿಕೆಟ್‌ನ ಭರವಸೆ ನೀಡಿದ್ದಾರೆ. ನಾನು ಹಿರಿಯೂರು ಅಥವಾ ಕೆ.ಆರ್.ಪುರಂ ಕ್ಷೇತ್ರ ಎಂದು ತೀರ್ಮಾನ ಮಾಡಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಕಾಂಗ್ರೆಸ್ ಪಕ್ಷ ಸೇರಲು ಯಾವುದೇ ಬೇಡಿಕೆಯಿಟ್ಟಿಲ್ಲ. ಹಿರಿಯೂರಲ್ಲಿ ಸೋತಿರುವುದರಿಂದ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಕಡೆಗಣನೆ ಆಯಿತು ಎಂದು ನಾನು ಹೇಳಲ್ಲ. ನನ್ನ ಕ್ಷೇತ್ರಕ್ಕೆ ಬಿಎಸ್‌ವೈ, ಬೊಮ್ಮಾಯಿ ಹೆಚ್ಚಿನ ಅನುದಾನ ನೀಡಿದ್ದಾರೆ. ಆದ್ರೆ, ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮಾಜವನ್ನು ಕಡೆಗಣಿಸಲಾಯಿತು. ಅನೇಕ ಯಾದವ ಸಮುದಾಯ ಭವನ, ಹಾಸ್ಟೆಲ್ ಅರ್ಧಕ್ಕೆ ನಿಂತಿವೆ. ನನಗೆ ಕಡೆ ಗಳಿಗೆಯಲ್ಲಿ ಮಂತ್ರಿಸ್ಥಾನ ತಪ್ಪಿಸಲಾಯಿತು. ಕಾಡುಗೊಲ್ಲ ಅಭಿವೃದ್ಧಿ ನಿಗಮ ವೇಳೆ ಗೊಂದಲ ಸೃಷ್ಠಿಸಿದರು. ನಮ್ಮನ್ನು ಗಣನೆಗೆ ತೆಗೆದುಕೊಂಡು ನಿಗಮ ಮಾಡಬೇಕಿತ್ತು. ಸಮಾಜದ ಮುಖಂಡರ ನಿರ್ಧಾರದಂತೆ ಪಕ್ಷ ಬದಲಾವಣೆ ಮಾಡುತ್ತಿದ್ದೇವೆ. ಹಿಂದುಳಿದ ಸಮಾಜಗಳಿಗೆ ಬಿಜೆಪಿಯಲ್ಲಿ ಕಷ್ಟವಿದೆ ಎಂದು ತಿಳಿಸಿದ್ದಾರೆ.