ಕರ್ನಾಟಕದ ಬಿಜೆಪಿ ಶಾಸಕಿಗೆ ಕೊರೋನಾ ದೃಢ

By Suvarna News  |  First Published Aug 18, 2020, 4:03 PM IST

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಕೊರೋನಾ ದೃಢಪಟ್ಟ ಬೆನ್ನಲ್ಲೇ ಇದೀಗ ಮತ್ತೊರ್ವ ಬಿಜೆಪಿ ಶಾಸಕರೊಬ್ಬರಿಗೆ ಸೋಂಕು ತಗುಲಿದೆ.


ಬೆಂಗಳೂರು, (ಆ.18): ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೂ ಇಂದು (ಮಂಗಳವಾರ) ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಕೊರೊನಾ ಸೋಂಕು ಅಂಟಿರುವುದು ಪರೀಕ್ಷೆಯಲ್ಲಿ ಖಚಿತವಾಗಿದೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಮುನ್ನೆಚ್ಚರಿಕೆ ವಹಿಸುವಂತೆ ಫೇಸ್‌ಬುಕ್‌ನಲ್ಲಿ ಶಾಸಕಿ ಮನವಿ ಮಾಡಿದ್ದಾರೆ.

Tap to resize

Latest Videos

ಶಾಸಕ ಜಮೀರ್ ಅಹ್ಮದ್‌ ಖಾನ್‌ಗೆ ಕೊರೋನಾ: ಆಸ್ಪತ್ರೆಗೆ ದಾಖಲು

ಈ ಕುರಿತಂತೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ ಪೂರ್ಣಿಮಾ ಶ್ರೀನಿವಾಸ್ ಅವರು,ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದಿದ್ದಾರೆ.

click me!