LR Shivaramegowda ಮಾಜಿ ಸಂಸದ ಜೆಡಿಎಸ್‌ನಿಂದ ಉಚ್ಚಾಟನೆ, ನಾಯಕನ ರಾಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ

By Suvarna NewsFirst Published Jan 31, 2022, 5:52 PM IST
Highlights

* ಮಾಜಿ ಸಂಸದನ ರಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ
* ಜೆಡಿಎಸ್‌ನಿಂದ ಮಾಜಿ ಸಂಸದ ಉಚ್ಛಾಟನೆ
* ಪಕ್ಷದಿಂದ ಉಚ್ಛಾಟಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಆದೇಶ 

ಬೆಂಗಳೂರು, (ಜ.31): ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಇನ್ನಿಲ್ಲದ ಕಸರತ್ತು ನಡೆಸಿದ್ದ ಮಂಡ್ಯ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡಗೆ ಆಡಿಯೋ ಆಪತ್ತು ತಂದಿಟ್ಟಿದೆ.

ಹೌದು...ಎಲ್.ಆರ್. ಶಿವರಾಮೇಗೌಡ (LR Shivarame Gowda) ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ(HK Kumaraswamy) ಆದೇಶ ಹೊರಡಿಸಿದ್ದಾರೆ. 

LR Shivarame Gowda ಮಾಜಿ ಸಂಸದಗೆ ಆಡಿಯೋ ತಂದ ಆಪತ್ತು, ಪಕ್ಷದಿಂದ ಹೊರ ಹಾಕುವಂತೆ ಎಚ್‌ಡಿಕೆ ಸೂಚನೆ

ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ಹಾಗೂ ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆ ಮೇರೆಗೆ ಎಲ್.ಆರ್. ಶಿವರಾಮೇಗೌಡ ಅವರನ್ನ ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ (Audeio) ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದರು. ಅಲ್ಲದೇ ಶಿವರಾಮೇಗೌಡ ಅವರನ್ನ ಪಕ್ಷದಿಂದ ಹೊರಹಾಕಲು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಎಚ್‌ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದರು.

ಎಚ್‌ಡಿಕೆ ಸೂಚನೆಯಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಕೆ ಕುಮಾರಸ್ವಾಮಿ ಅವರು ಇಂದು ಶಿವರಾಮೇಗೌಡ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲೆಯ ದಿವಂಗತ ನಾಯಕರು ಹಾಗೂ ಒಕ್ಕಲಿಗ ಸಮುದಾಯದ ಹಿರಿಯರೂ ಆಗಿದ್ದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಲೋಕಸಭೆಯ ಮಾಜಿ ಸದಸ್ಯ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರ ಅನುಮತಿ ಪಡೆಯಲಾಗಿದ್ದು, ಶಿವರಾಮೇಗೌಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಸೂಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು ಸಮುದಾಯದ ಹಿರಿಯ ನಾಯಕರು ಹಾಗೂ ಇಡೀ ರಾಜ್ಯವೇ ಗೌರವಿಸುತ್ತಿದ್ದ ಜಿ. ಮಾದೇಗೌಡರಂಥ ಹಿರಿಯರ ಬಗ್ಗೆ ಶಿವರಾಮೇಗೌಡರು ಅಸಭ್ಯವಾಗಿ ಮಾತನಾಡಿರುವುದು ಅಕ್ಷ್ಯಮ್ಯ. ಮಾದೇಗೌಡರ ಬಗ್ಗೆ ಅವರು ಮಾತನಾಡಿರುವ ಆಡಿಯೋವನ್ನು ನಾನೂ ಕಳಿದ್ದೇನೆ. ಇಂಥ ನಡವಳಿಕೆಯನ್ನು ಸಹಿಸುವ ಪ್ರಶ್ನೆ ಇಲ್ಲ ಎಂದು ಹೇಳಿದ್ದರು.

ಮಂಡ್ಯದ ರಾಜಕೀಯದ ಬಗ್ಗೆ ಮಾತನಾಡುತ್ತಾ ಶಿವರಾಮೇಗೌಡರು ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಅಸಭ್ಯವಾಗಿ ಅವರು ಮಾತನಾಡಿರುವ ಮೊಬೈಲ್ ಕರೆಯ ಆಡಿಯೋ ಈಗ ವೈರಲ್ ಆಗಿದೆ. ತಮಗೆ ಸಂಬಂಧವೇ ಇಲ್ಲದ ವಿಷಯಗಳನ್ನು ಅವರು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೆ, ಮಾದೇಗೌಡರ ಬಗ್ಗೆ ಅಂತಹ ಕೆಳಮಟ್ಟದ ಭಾಷೆ ಬಳಸುವ ಅಗತ್ಯ ಇರಲಿಲ್ಲ ಎಂದು ಕುಮಾರಸ್ವಾಮಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದರು.

click me!