ಧಾರ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವುದು ಪಾಪದ ಕೆಲಸ: ಸಚಿವ ಎಚ್.ಕೆ. ಪಾಟೀಲ್

Published : Sep 02, 2025, 08:17 AM IST
hk patil

ಸಾರಾಂಶ

ಧರ್ಮಸ್ಥಳದ ಬಗ್ಗೆ ನಡೆದಿರುವ ಷಡ್ಯಂತ್ರದ ವಿರುದ್ಧ ಧರ್ಮಸ್ಥಳದಲ್ಲಿಯೇ ಬಿಜೆಪಿ ಮತ್ತು ಜೆಡಿಎಸ್ ಸಮಾವೇಶ ಮಾಡಿರುವುದಕ್ಕೆ ಸಚಿವ ಎಚ್.ಕೆ. ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ (ಸೆ.02): ಧರ್ಮಸ್ಥಳದ ಬಗ್ಗೆ ನಡೆದಿರುವ ಷಡ್ಯಂತ್ರದ ವಿರುದ್ಧ ಧರ್ಮಸ್ಥಳದಲ್ಲಿಯೇ ಬಿಜೆಪಿ ಮತ್ತು ಜೆಡಿಎಸ್ ಸಮಾವೇಶ ಮಾಡಿರುವುದಕ್ಕೆ ಸಚಿವ ಎಚ್.ಕೆ. ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಧಾರ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವುದು ಪಾಪದ ಕೆಲಸ ಎಂದು ಕುಟುಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದಿಗೂ ಇಂಥ ಪಾಪದ ಕೆಲಸ ಮಾಡುವುದಿಲ್ಲ. ಎಸ್‌ಐಟಿ ರಚಿಸಿದ್ದು ಧರ್ಮಸ್ಥಳದ ವಿರುದ್ಧ ಎಂದವರು ಮೊದಲು ಸ್ವಾಗತಿಸಿದ್ದು ಏಕೆ ? ಎಂದು ಪ್ರಶ್ನಿಸಿದರು.

ಧರ್ಮಸ್ಥಳದ ಬಗ್ಗೆ ಆರೋಪಿಸಿದ್ದು ಯಾರು ಎಂದು ಪ್ರಶ್ನಿಸಿದ ಅವರು, ಈ ಮೂಲವನ್ನು ನೀವ್ಯಾಕೆ ಕೆದಕುವುದಿಲ್ಲ ಎಂದು ಮಾಧ್ಯಮಗಳಿಗೆ ಮರು ಪ್ರಶ್ನಿಸಿದರು. ಆಗ ಯಾರು ಎಂದು ಸುದ್ದಿಗಾರರು ಪ್ರಶ್ನಿಸಿದರೆ ನಿಮಗೆ ಗೊತ್ತಿಲ್ಲವೇ ಎಂದು ಮರುಪ್ರಶ್ನಿಸುತ್ತಲೇ, ಗಿರೀಶ ಮಟ್ಟಣವರ ಹೆಸರು ಹೇಳದೆಯೇ ಕಟುವಾಗಿ ಟೀಕಿಸಿದರು. ಇವರು ಯಾವ ಪಕ್ಷದಲ್ಲಿದ್ದರು ಎಂದರು.

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್‌ ಕರೆಸಿರುವ ಪ್ರಶ್ನೆಗೆ, ಈ ಹಿಂದೆ ಅಲ್ಪಸಂಖ್ಯಾತರನ್ನು ಉದ್ಘಾಟನೆಗೆ ಕರೆಸಿಲ್ಲವೇ? ಈಗೇಕೆ ಈ ಪ್ರಶ್ನೆ ಬಂದಿದೆ ಎಂದ ಅವರು, ಈ ಹಿಂದೇ ರಾಜರೇ ಮಿರ್ಜಾ ಇಸ್ಮಾಯಿಲ್‌ ಅವರನ್ನು ಕರೆಸಿದ್ದು ಗೊತ್ತಿಲ್ಲವೇ? ಜನರ ಭಾವನೆಯೊಂದಿಗೆ ಆಟವಾಡಿ, ಸಮಾಜದ ಶಾಂತಿ ಕದಡುವ ಕಾರ್ಯ ಮಾಡಬಾರದು. ಮೈಸೂರು ದಸರಾ ಸಾಂಸ್ಕೃತಿಕ ಉತ್ಸವ. ನಾಡ ಉತ್ಸವವಾಗಿದೆ. ಹೀಗಿರುವಾಗ ಅದನ್ನು ತಪ್ಪಾಗಿ ಅರ್ಥೈಸುವ ಕಾರ್ಯ ಮಾಡಬಾರದು ಎಂದರು.

ಅಂಜನಾದ್ರಿ ಅಭಿವೃದ್ಧಿ ಕುರಿತು ಶಾಸಕ ಗಾಲಿ ಜನಾರ್ದನ ರೆಡ್ಡಿ ಏನು ಹೇಳಿದ್ದಾರೆಂದು ನನಗೆ ಮಾಹಿತಿ ಇಲ್ಲ. ಹೀಗಾಗಿ ಅದಕ್ಕೆ ಉತ್ತರಿಸಲ್ಲ. ಆದರೆ, ಅಂಜನಾದ್ರಿ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದೆ. ಕೇಬಲ್ ಕಾರ್ ಅಳವಡಿಸುವುದು ಸೇರಿದಂತೆ ವಿವಿಧ ಯೋಜನೆ ಒಳಗೊಂಡಿದ್ದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

17 ವರ್ಷಗಳ ಬಳಿಕ ತಾರಿಕ್ ರೆಹಮಾನ್ ಬಾಂಗ್ಲಾಕ್ಕೆ ಎಂಟ್ರಿ; ಭುಗಿಲೆದ್ದ ರಾಜಕೀಯ ಸಂಘರ್ಷ, ಯೂನಸ್ ಸರ್ಕಾರಕ್ಕೆ ಭಾರೀ ಹಿನ್ನಡೆ
ಅಧಿಕಾರ ಶಾಶ್ವತವಲ್ಲ: ಸಿಎಂ ಬದಲಾವಣೆ ಬಗ್ಗೆ ಮೌನ ಮುರಿದ ಯತೀಂದ್ರ ! ಡಿಕೆಶಿ ಹೇಳಿಕೆಗೆ ನೀಡಿದ ಉತ್ತರವೇನು?