
ಮೈಸೂರು (ಫೆ.11): ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಜತೆ ಮಾಡಿಕೊಂಡಿರುವ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ ಬಿಜೆಪಿ ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದರು.
ಮೈಸೂರಿನ ರ್‍ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಯಾರೂ ಅಪಸ್ವರ ಎತ್ತಬಾರದು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸಂದರ್ಭ ಇಂತಹ ಅಪಸ್ವರದ ಮಾತುಗಳು ಬಂದಿದ್ದರಿಂದಲೇ ಅವರಿಗೆ ಸೋಲಾಗಿತ್ತು. ಅದೇ ಕೆಲಸವನ್ನು ನೀವು ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ನರೇಂದ್ರ ಮೋದಿ-ಅಮಿತ್ ಶಾ ಇಬ್ಬರೂ ದೇಶ ಮುನ್ನಡೆಸುವ ಜೋಡೆತ್ತುಗಳು: ಸುತ್ತೂರು ಶ್ರೀಗಳು ಬಣ್ಣನೆ
ಬಿಜೆಪಿಯನ್ನು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಫೆಬ್ರವರಿ 20, 21ರಂದು ಎರಡು ದಿನಗಳ ಕಾಲ ಸಭೆ ನಡೆಸಲು ಅಮಿತ್ ಶಾ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆಗಳು ನಡೆಯಲಿದ್ದು ಅಂದಿನ ಸಭೆಗಳಲ್ಲಿ ಎಲ್ಲ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆಯಾಗಲಿದೆ.
ನಾವು ಏನೇ ಗಳಿಸಿದ್ರೂ ಅದನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ: ಸುತ್ತೂರು ಜಾತ್ರೆಯಲ್ಲಿ ಡಿಕೆಶಿ ಮಾತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.