
ಬೆಂಗಳೂರು(ಸೆ.10): ಕಾಂಗ್ರೆಸ್ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ. ವಿಪಕ್ಷ ನಾಯಕ ಆರ್. ಅಶೋಕ್ ತಮ್ಮ ಪಕ್ಷದಲ್ಲಿನ ಜಗಳ ಸರಿಪಡಿಸಿಕೊಳ್ಳಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು? ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳವನ್ನು ಮೊದಲು ಅಶೋಕ್ ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯರ ನಾಯಕತ್ವ ಅಲ್ಲಾಡಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಸಚಿವ ಎನ್‌ಎಸ್ ಬೋಸರಾಜು ಕಿಡಿ
ನಾವೇನು ಮುಖ್ಯಮಂತ್ರಿಯವರನ್ನು ಬದಲಾವಣೆ ಮಾಡುವುದಿಲ್ಲ. ಸಿದ್ದರಾಮಯ್ಯ ಅವರೇ ನಮ್ಮ ಸಿಎಂ. ಆಡಳಿತ ಉತ್ತಮವಾಗಿಯೇ ನಡೆಯುತ್ತಿದೆ. ನ್ಯಾಯಾಲಯದಲ್ಲಿ ಕೇಸ್ ಇದೆ. ಏನಾಗುತ್ತದೆ ಎಂಬುದನ್ನು ಕಾದು ನೋಡುತ್ತೇವೆ. ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.
ಕೋರ್ಟ್ ಕೇಸ್‌ನಿಂದ ಆಡಳಿತದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಪ್ರತಿಯೊಬ್ಬ ಸಚಿವರು ಇಲಾಖೆಯ ಎಲ್ಲ ಕೆಲಸಗಳನ್ನು ಮಾಡುತ್ತಿದ್ದಾರೆ. ಅಧಿಕಾರಿಗಳಾಗಲೀ, ಸರ್ಕಾರದ ಕಾರ್ಯದರ್ಶಿಗಳಾಗಲೀ ಯಾರೂ ಸಹ ಸುಮ್ಮನೆ ಕುಳಿತಿಲ್ಲ. ಕೋರ್ಟ್‌ನಲ್ಲಿ ವಿಚಾರಣೆ ಇರುವುದರಿಂದ ಮುಖ್ಯಮಂತ್ರಿಗಳು ಯಾವುದೇ ಕಾರ್ಯಕ್ರಮಕ್ಕೆ ಹೋಗಿರಲಿಕ್ಕಿಲ್ಲ. ಆದರೆ, ಆಡಳಿತ ಸುಗಮವಾಗಿ ನಡೆಯುತ್ತಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.