ಕಪ್‌ ತುಳಿತದಲ್ಲಿ ಗೃಹ ಸಚಿವರು ಅಸಹಾಯಕರು: ನಿಖಿಲ್ ಕುಮಾರಸ್ವಾಮಿ ಟೀಕೆ

Kannadaprabha News   | Kannada Prabha
Published : Jun 19, 2025, 07:07 AM IST
nikhil kumaraswamy

ಸಾರಾಂಶ

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಬಲಿಯಾಗಿದ್ದು, ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರ ಅಸಹಾಯಕತೆ ಎದ್ದು ಕಾಣಿಸುತ್ತದೆ ಎಂದು ಯುವ ಜೆಡಿಎಸ್ ಪಕ್ಷದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಕೊರಟಗೆರೆ (ಜೂ.19): ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಬಲಿಯಾಗಿದ್ದು, ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರ ಅಸಹಾಯಕತೆ ಎದ್ದು ಕಾಣಿಸುತ್ತದೆ ಎಂದು ಯುವ ಜೆಡಿಎಸ್ ಪಕ್ಷದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ತಾಲೂಕು ಜೆಡಿಎಸ್‌ ಏರ್ಪಡಿಸಿದ್ದ ಕಾರ್ಯಕರ್ತರ ಸಭೆ ಹಾಗೂ ಸದಸ್ವ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿ, ಪೊಲೀಸ್ ಇಲಾಖೆ ಬೇಡ ಎಂದರೂ ಸಹ ಸಿಎಂ, ಡಿಸಿಎಂ ಹಠಕ್ಕೆ ಬಿದ್ದು ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ದಾರೆ.

ಆದರೆ, ಅದಕ್ಕೆ ನಾವು ಹೊಣೆಯಲ್ಲವೆಂದು ಕಾರಣ ನೀಡಿ ನಿಷ್ಠಾವಂತ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಇಷ್ಟೇಲ್ಲಾ ಆದರೂ ಗೃಹ ಸಚಿವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಲ್ಲದೆ ಅಧಿಕಾರಿಗಳನ್ನು ಸಹ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ. ಇದು ಅವರ ಅಸಹಾಯಕತೆಯನ್ನು ಎದ್ದು ತೋರಿಸಿದೆ ಎಂದು ತಿವಿದರು. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಗಮನ ನೀಡದೆ ಎಲ್ಲವೂ ದೆಹಲಿ ಸೂಚನೆ ಆಡಳಿತ ನೀಡುತ್ತವೆ. ಕರ್ನಾಟಕದಲ್ಲಿ ಜೆಡಿಎಸ್ ಕಾರ್ಯಕರ್ತರ ಬಲಿಷ್ಠ ಪಡೆ ಇದೆ.

ಜೆಡಿಎಸ್ ಕಾರ್ಯಕರ್ತರು ಎಲ್ಲಾ ಬೂತ್‌ಗಳಲ್ಲೂ ಹೆಚ್ಚಿನ ಸದಸ್ಯತ್ವ ನೋಂದಣಿ ಮಾಡಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧರಾಗಿ ಎಂದು ಕರೆ ನೀಡಿದರು. ವೈಜಾಕ್‌ನಲ್ಲಿರುವ 1 ಲಕ್ಷ ಕೋಟಿ ಬೆಲೆ ಬಾಳುವಂತ ಸ್ಟೀಲ್ ಕಾರ್ಖಾನೆ ಮುಚ್ಚಲಾಗಿತ್ತು. ಕೇವಲ 10 ಸಾವಿರ ಕೋಟಿಗೆ ಮಾರಬೇಕು ಎನ್ನಲಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಂದ ₹11,440 ಕೋಟಿ ಅನುದಾನ ತಂದು ಮತ್ತೆ ಆರಂಭ ಮಾಡುತ್ತಿದ್ದು, ಮತ್ತೆ ಸಾವಿರಾರು ಜನರಿಗೆ ಉದ್ಯೋಗ ದೊರೆಯುತ್ತಿದೆ ಎಂದರು.

ಕಾನೂನು ಹೋರಾಟ: ಹರೀಸಂದ್ರ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿಯವರು ಕೈಜೋಡಿಸುತ್ತಾರೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವರೆಗೆ ವಿರಮಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ಹರೀಸಂದ್ರ ಗ್ರಾಮದ ಸರ್ವೇ ನಂಬರ್ 166ರಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಸ್ಥಳದಲ್ಲಿ ನಡೆಯುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಘಟಕ ನಿರ್ಮಾಣ ಸ್ಥಗಿತಗೊಳಿಸಲು ಗ್ರಾಮಸ್ಥರೊಂದಿಗೆ ಧರಣಿ ನಡೆಸುವುದು ಮಾತ್ರವಲ್ಲದೆ ಕಾನೂನು ಹೋರಾಟವನ್ನೂ ನಡೆಸಲಾಗುವುದು ಎಂದರು. ಇಲ್ಲಿ ಘಟಕ ನಿರ್ಮಾಣಕ್ಕೂ ಮುನ್ನ ಜಿಲ್ಲಾಡಳಿತ ಸುತ್ತಮುತ್ತಲ ಗ್ರಾಮಗಳ ರೈತರ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸುವ ಕೆಲಸ ಮಾಡಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡು ಘಟಕ ನಿರ್ಮಾಣ ಮಾಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!