ಎಂಥ ವಿಚಾರಕ್ಕೆ ಪ್ರತಿಭಟಿಸಬೇಕೆಂದೂ ಬಿಜೆಪಿಗೆ ಗೊತ್ತಿಲ್ಲ: ಸಚಿವ ಪರಮೇಶ್ವರ್‌

By Kannadaprabha News  |  First Published Dec 20, 2023, 9:54 AM IST

ಬೆಳಗಾವಿಯಲ್ಲಿ ಮಹಿಳೆ ಮೇಲೆ ನಡೆದಿರುವ ಅಮಾನವೀಯ ಘಟನೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದೆ. ಬಿಜೆಪಿಯವರಿಗೆ ಎಂತಹ ವಿಚಾರಗಳ ಬಗ್ಗೆ ಪ್ರತಿಭಟನೆ ಮಾಡಬೇಕು ಎಂಬುದೂ ಅರಿವಿಲ್ಲ. ಇದರಲ್ಲಿ ಸರ್ಕಾರದ ಪಾತ್ರ ಏನಿದೆ ಎಂದು ಉತ್ತರಿಸಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದ್ದಾರೆ.


ಬೆಂಗಳೂರು (ಡಿ.20): ಬೆಳಗಾವಿಯಲ್ಲಿ ಮಹಿಳೆ ಮೇಲೆ ನಡೆದಿರುವ ಅಮಾನವೀಯ ಘಟನೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದೆ. ಬಿಜೆಪಿಯವರಿಗೆ ಎಂತಹ ವಿಚಾರಗಳ ಬಗ್ಗೆ ಪ್ರತಿಭಟನೆ ಮಾಡಬೇಕು ಎಂಬುದೂ ಅರಿವಿಲ್ಲ. ಇದರಲ್ಲಿ ಸರ್ಕಾರದ ಪಾತ್ರ ಏನಿದೆ ಎಂದು ಉತ್ತರಿಸಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರದೃಷ್ಟಕರ ಘಟನೆ ನಡೆಯಬಾರದಿತ್ತು. ಈ ಅಮಾನುಷ ಕೃತ್ಯವನ್ನು ಒಂದು‌ ಊರಿನ ಕೆಲ‌ ಜನ‌ ಮಾಡಿದ್ದಾರೆ. ಈ ಬಗ್ಗೆ ವಿಪಕ್ಷದವರು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಘಟನೆ ತಡರಾತ್ರಿ ನಡೆದಿದ್ದು, ಊರಿನ‌ ಜನ ತಕ್ಷಣ 112 ಸಹಾಯವಾಣಿಗೆ ಕರೆ‌ಮಾಡಿ ಮಾಹಿತಿ‌ ನೀಡಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಹೋಗಿ ಮಹಿಳೆಯನ್ನು ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌. ಸರ್ಕಾರ ಗಂಭೀರವಾಗಿ ಪರಿಗಣಿಸಿ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಹೇಳಿದರು.

Tap to resize

Latest Videos

ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ

ಸಂತ್ರಸ್ತೆಗೆ 2 ಎಕರೆ ಜಮೀನು ಪರಿಹಾರ: ಊರು ಬಿಟ್ಟು ಹೋಗಿದ್ದ ಯುವಕ-ಯುವತಿ ಬೆಳಗಾವಿ ಪೊಲೀಸ್ ಆಯುಕ್ತರ ಮುಂದೆ ಹಾಜರಾಗಿ ರಕ್ಷಣೆ ಕೋರಿದ್ದು, ರಕ್ಷಣೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯುವಕ-ಯುವತಿಗೆ ಏನೆಲ್ಲ ರಕ್ಷಣೆ ಒದಗಿಸಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಸಂತ್ರಸ್ತೆಗೆ ಪರಿಹಾರವಾಗಿ 2 ಎಕರೆ ಜಮೀನು ಮಂಜೂರು ಮಾಡಲು ಕ್ರಮ ವಹಿಸಲಾಗಿದೆ. ಇಷ್ಟೆಲ್ಲ ಕೆಲಸ ಮಾಡಿದ್ದರೂ ಪ್ರಕರಣವನ್ನು ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ ಎನ್ನುವುದು ಸರಿಯಲ್ಲ ಎಂದರು.

ಗೃಹರಕ್ಷಕ ಸಿಬ್ಬಂದಿ ಭತ್ಯೆ ಹೆಚ್ಚಳ: ಗೃಹ ರಕ್ಷಕ ದಳ ಸಿಬ್ಬಂದಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅಶ್ವಾಸನೆ ನೀಡಿದ್ದಾರೆ. 

ಬಿಜೆಪಿ ಸದಸ್ಯೆ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ರಾಜ್ಯದಲ್ಲಿ 21,327 ಪುರಷ ಹಾಗೂ 4,555 ಮಹಿಳೆ ಸೇರಿ ಒಟ್ಟು 25,882 ಗೃಹರಕ್ಷಕ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಆದೇಶದಂತೆ ಪೊಲೀಸ್ ಇಲಾಖೆಯ ಬಂದೋಬಸ್ತ್, ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಠಾಣೆ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ 750 ರು. ಮತ್ತು ಬೇರೆ ಇಲಾಖೆಗಳಲ್ಲಿ 600 ರು. ಹಾಗೂ ಪಹರೆ ಕೆಲಸಕ್ಕೆ ಬೆಂಗಳೂರು ನಗರದಲ್ಲಿ 455 ರು. ಮತ್ತು ಇತರೆ ಸ್ಥಳದಲ್ಲಿ 380 ರು. ಭತ್ಯೆ ನೀಡಲಾಗುತ್ತಿದೆ. ಈ ವ್ಯತ್ಯಾಸವನ್ನು ಸರಿ ಪಡಿಸಿ 750 ರು. ದಿನಭತ್ಯೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತಿಸಲಾಗುತ್ತಿದೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅದಷ್ಟು ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ವೀರಶೈವ ಮಹಾ ಅಧಿವೇಶನಕ್ಕೆ ಆಹ್ವಾನವಿದೆ, ಹೋಗುವೆ: ಜಗದೀಶ್‌ ಶೆಟ್ಟರ್‌

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಶಶಿಕಲಾ ಜೊಲ್ಲೆ, ಗೃಹ ರಕ್ಷಕ ದಳ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕರ್ತವ್ಯ ಭತ್ಯೆಯನ್ನು ಹೆಚ್ಚಳ ಮಾಡುವುದರ ಜತೆಗೆ ಪೊಲೀಸ್‌ ಸಿಬ್ಬಂದಿ ನೇಮಕಾತಿಯಲ್ಲಿ ಅದ್ಯತೆ ನೀಡಿ ಖಾಯಮಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

click me!