ಎಚ್.ಡಿ.ಕುಮಾರಸ್ವಾಮಿ ದಿನಕ್ಕೊಂದು ಹೇಳ್ತಾರೆ: ಸಚಿವ ಪರಮೇಶ್ವರ್‌ ಟಾಂಗ್‌

By Kannadaprabha NewsFirst Published Jan 8, 2024, 10:03 PM IST
Highlights

ಎಚ್.ಡಿ.ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ಅಂತಹ ಹೇಳಿಕೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್‌, ಸಂಸದ ಪ್ರತಾಪ್‌ಸಿಂಹ ಸೋದರನ ಮೇಲೆ ಮುಖ್ಯಮಂತ್ರಿಗಳ ಷಡ್ಯಂತ್ರ ಎಂಬ ಕುಮಾರಸ್ವಾಮಿ ಆರೋಪಕ್ಕೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದರು. 

ಬೆಂಗಳೂರು/ ಬೇಲೂರು (ಜ.08): ಎಚ್.ಡಿ.ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ಅಂತಹ ಹೇಳಿಕೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್‌, ಸಂಸದ ಪ್ರತಾಪ್‌ಸಿಂಹ ಸೋದರನ ಮೇಲೆ ಮುಖ್ಯಮಂತ್ರಿಗಳ ಷಡ್ಯಂತ್ರ ಎಂಬ ಕುಮಾರಸ್ವಾಮಿ ಆರೋಪಕ್ಕೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಬಗ್ಗೆ ಮಾತನಾಡದಿರುವುದೇ ಒಳಿತು ಎಂದರಲ್ಲದೆ, ಸಂಸದ ಪ್ರತಾಪ್‌ ಸಹೋದರ ಕಾನೂನಾತ್ಮವಾಗಿ ಮರ ಕಡಿಯಬೇಕು. ಪರ್ಮಿಶನ್ ಇಲ್ಲದೇ ಮರ ಕಡಿದಿದ್ದಾರೆ, ಅದಕ್ಕೆ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಇದರಲ್ಲಿ ಸಿಎಂ ಹೆಸರು ತರುವುದು ಅನವಶ್ಯಕ ಎಂದವರು ಹೇಳಿದರು.

ಇನ್ನು ಇದೇ ವಿಚಾರದ ಕುರಿತು ಬೇಲೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ ಖಾರವಾಗಿಯೇ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಿರಿಯ ರಾಜಕಾರಣಿ. ಆದರೂ ವಿಕ್ರಂ ಸಿಂಹನ ಮರ ಕಡಿತಲೆ ಪ್ರಕರಣದಲ್ಲಿ ಬಾಲಿಶವಾದ ಹೇಳಿಕೆ ನೀಡಿದ್ದಾರೆ. ಬೇರೆಯವರು ಯಾರೇ ಮುಖ್ಯಮಂತ್ರಿ ಆಗಲಿ ಆ ಮಟ್ಟಕ್ಕೆ ಇಳಿದು ನಡೆದುಕೊಳ್ಳಬಾರದು ಎಂದು ಹೇಳಿದರು. ಅವರು ಸಿಎಂ ಆಗಿದ್ದಾಗ ಈ ರೀತಿಯ ಕೆಲಸ ಮಾಡಿಸುತ್ತಿದ್ದರೇನೋ, ಹಾಗಾಗಿಯೇ ಈ ಪ್ರಕರಣವನ್ನು ಬೆಂಬಲಿಸಿ ಹೀಗೆ ಹೇಳಿದ್ದಾರೆ. ಈ ಹಿಂದೆ ಇದೇ ದೇವೇಗೌಡರ ಕುಟುಂಬದವರು ಯಾವ್ಯಾವ ಸಂದರ್ಭದಲ್ಲಿ ಬೇರೆಯವರ ಬಗ್ಗೆ ಹೇಗೆ ಟೀಕೆ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರಲ್ಲದೆ, ನಾವು ಆ ಬಗ್ಗೆ ಹೆಚ್ಚು ಮಾತನಾಡುವುದು ಸೂಕ್ತವಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ನಾಯಕರ ಬೇಳೆ ಬೇಯಲ್ಲ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಮ್ಯೂಸಿಯಂಗಳಿಗೆ ಬೆದರಿಕೆ ಹಾಕಿದವರ ಪತ್ತೆಗೆ ಕ್ರಮ: ನಗರದ ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರೂ ತಾರಾಲಯ ಸೇರಿದಂತೆ ದೇಶದ ಹಲವು ಮ್ಯೂಸಿಯಂಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದ್ದು, ಐಪಿ ವಿಳಾಸ ಆಧರಿಸಿ ತಪ್ಪಿತಸ್ಥರ ಪತ್ತೆಗೆ ಪೊಲೀಸ್‌ ತಂಡವನ್ನು ಕಳುಹಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ಇದೀಗ ಮ್ಯೂಸಿಯಂಗಳಿಗೆ ಬಂದಿದೆ. ದುಷ್ಕರ್ಮಿಗಳು ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡೇ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಇಂಟರ್‌ಪೋಲ್‌ಗೆ ಮಾಹಿತಿ ನೀಡಲಾಗಿದೆ. ಆದಷ್ಟು ಬೇಗ ತಪ್ಪಿತಸ್ಥರ ಪತ್ತೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗಳಿಗೆ ಹಾಜರಾಗಿ: ಅಧಿಕಾರಿಗಳು ಸಭೆಗಳಿಗೆ ಆಗಮಿಸುವಾಗ ತಮ್ಮ ಇಲಾಖೆಗೆ ಸಂಬಂಧಿಸಿದ ನಿಖರ ಮಾಹಿತಿಯನ್ನು ತರಬೇಕು. ಸಭೆಗೆ ಬಂದು ಸಬೂಬು ಹೇಳಬಾರದು. ಇನ್ನು ಮುಂದೆ ಇಂತಹ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಖ್ಯಮಂತ್ರಿಗಳ ಜ.೨೯ ರ ತುಮಕೂರು ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಂಟಿಬಿ ನಾಗರಾಜ್ ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ?: ವಿಜಯೇಂದ್ರ ಹೇಳಿದ್ದೇನು?

ತುಮಕೂರಿನ ಇತಿಹಾಸದಲ್ಲಿಯೇ ಹಿಂದೆಂದೂ ಕಾಣದಂತಹ ಕಾರ್ಯಕ್ರಮ ಇದಾಗಬೇಕು. ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ಸಂಭವವಿದ್ದು, ಈ ಪೈಕಿ ೫೦ ಸಾವಿರ ಫಲಾನುಭವಿಗಳಿರಬೇಕು. ಆಯಾ ಇಲಾಖೆಗಳೇ ಫಲಾನುಭವಿಗಳನ್ನು ಕರೆತರಬೇಕು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಬೇಕು. ಯಾವುದೇ ತಾಂತ್ರಿಕ ತೊಂದರೆಗಳಿದ್ದಲ್ಲಿ ಬಗೆಹರಿಸಿ ಜ.೨೯ ಕ್ಕೆ ಕಾಮಗಾರಿ ಉದ್ಘಾಟನೆಯಾಗಬೇಕು ಎಂದು ಸೂಚಿಸಿದರು. ಅಂದಾಜು ೭೦೦ ಕೋಟಿ ರು. ಮೊತ್ತದಷ್ಟು ಸವಲತ್ತುಗಳನ್ನು ಸರ್ಕಾರದ ವತಿಯಿಂದ ನೀಡುವ ಕಾರ್ಯಕ್ರಮ ಇದಾಗಿದೆ. ಅಂದು ಸುಮಾರು ೫೦ ಸಾವಿರ ಫಲಾನುಭವಿಗಳು ಸವಲತ್ತುಗಳನ್ನು ಪಡೆದುಕೊಳ್ಳಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳು ಸರ್ಕಾರದಿಂದ ಅನುಮೋದನೆಯಾಗಿ, ಅನುದಾನ ಬಿಡುಗಡೆಯಾಗಿರುವಂತಹ ಕಾರ್ಯಕ್ರಮಗಳಾಗಿವೆ ಎಂದು ತಿಳಿಸಿದರು.

click me!