
ಬೆಂಗಳೂರು (ಸೆ.30): ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡೋದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಇದೆಲ್ಲ ನಮ್ಮ ವ್ಯಾಪ್ತಿಗೆ ಬರೋದಿಲ್ಲ, ನಮಗೆ ಗೊತ್ತೇ ಆಗೋದಿಲ್ಲ ಎಂದು ಜಮೀರ್ ಅಹಮದ್ ಹೇಳಿಕೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ನಂತರ ಮಾತನಾಡಿದ ಅವರು, ಕೆಲವರು ಅವರವರ ಅಭಿಪ್ರಾಯ ಹೇಳ್ತಾರೆ. ಎರಡೂವರೆ ವರ್ಷಕ್ಕೆ ಸಂಪುಟ ಪುನಾರಚನೆ ಆಗಬೇಕು ಅಂತ ಹೇಳ್ಕೊಂಡು ಬರ್ತಿದ್ದಾರಲ್ಲ. ಇದರ ಬಗ್ಗೆ ನಮಗ್ಯಾರಿಗೂ ಗೊತ್ತೇ ಇಲ್ಲ. ಹೈಕಮಾಂಡ್‌ನವ್ರು ಯಾರೂ ಹೇಳಿಲ್ಲ, ಅಥವಾ ಸಿಎಂ ಆಗಲೀ ಅಧ್ಯಕ್ಷರಾಗಲೀ ನಮಗೆ ಇದರ ಬಗ್ಗೆ ಹೇಳಿಲ್ಲ. ಒಳಗೆ ಅವರು ಏನು ಅಂಡರ್‌ಸ್ಟ್ಯಾಂಡಿಂಗ್‌ಗೆ ಬಂದಿದ್ದಾರೋ ಗೊತ್ತಿಲ್ಲ ಎಂದರು. ಕುಣಿಗಲ್ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರ್ಪಡೆಗೆ ಸಿಎಂ ಕೆಲವು ಸಂಘಟನೆಗಳ ಮನವಿ ವಿಚಾರವಾಗಿ, ಇದರ ಬಗ್ಗೆ ಅಲ್ಲಿನ ಶಾಸಕರೇ ಗೊತ್ತಿಲ್ಲ ಅಂದಿದ್ದಾರೆ. ಇನ್ನು ನನಗೆ ಹೇಗೆ ಗೊತ್ತಾಗುತ್ತೆ ಎಂದು ಪರಮೇಶ್ವರ್ ಪ್ರಶ್ನಿಸಿದರು.
ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವದ ಬಂಧನ ಆಗದ ವಿಚಾರ ಹಾಗೂ ತನಿಖೆ ವಿಳಂಬ ವಿಚಾರವಾಗಿ, ಅವರ ಬಂಧನಕ್ಕೆ ಕಾನೂನು ತೊಡಕುಗಳು ಏನೇನಿದೆಯೋ ಅದರ ಬಗ್ಗೆ ನಾನು ಇನ್ನೂ ಚರ್ಚೆ ಮಾಡಿಲ್ಲ. ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಆದ್ರೆ ಎಸ್ಐಟಿನವ್ರು ಅವರ ಕೆಲಸ ಮಾಡ್ತಿದ್ದಾರೆ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್ಎಸ್‌ಎಲ್ ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ ಎಸ್ಐಟಿಗೆ ತಿಳಿಸಿದ್ದೇವೆ. ಬಂದವರೆಲ್ಲ ದೂರು ಕೊಡೋದು ಅರ್ಜಿ ಕೊಡೋದು ಆಗ್ತಿದೆ, ಹೇಳಿಕೆಗಳನ್ನು ಕೊಡಲಾಗ್ತಿದೆ. ಇದಕ್ಕೆಲ್ಲ ಅಂತ್ಯ ಹಾಡಲು ಹೇಳಿದ್ದೇವೆ ಎಂದರು.
ತಿಮರೋಡಿ ನಾಪತ್ತೆ ವಿಚಾರವಾಗಿ, ನಾವು ಏನೇ ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡಬೇಕು. ಗಡಿಪಾರು ವಿಚಾರವನ್ನು ಅವರು ಕೋರ್ಟಿನಲ್ಲಿ ಪ್ರಶ್ನಿಸಿದ್ದಾರೆ, ಅದೇನಾಗುತ್ತೆ ಅಂತ ನೋಡೋಣ. ಆದ್ರೆ ತಿಮರೋಡಿ ಬಂಧಿಸೋದಾಗಲೀ ಕ್ರಮವಾಗಿ ಕೈಗೊಳ್ಳೋದಾಗಲೀ ಕಾನೂನು ಪ್ರಕಾರವೇ ಮಾಡ್ತಾರೆ. ಇದರ ಬಗ್ಗೆ ಸರ್ಕಾರ ಎಸ್ಐಟಿಗೆ ಸೂಚನೆ ಕೊಡಕ್ಕಾಗಲ್ಲ. ಅಂತಿಮವಾಗಿ ಎಸ್ಐಟಿನವ್ರು ತೀರ್ಮಾನ ಮಾಡ್ತಾರೆ. ನಾವು ಎಸ್ಐಟಿಗೆ ನಾಳೆಯೇ ತನಿಖೆ ಮುಗಿಸಿ ಅಂತ ಹೇಳಕ್ಕಾಗಲ್ಲ. ಎಲ್ಲವನ್ನೂ ನೋಡಿಕೊಂಡು ಎಸ್ಐಟಿನವ್ರು ತೀರ್ಮಾನ ತಗೋತಾರೆ. ಸುಪ್ರೀಂಕೋರ್ಟ್ ನಲ್ಲಿ ಚಿನ್ನಯ್ಯ ಪಿಐಎಲ್ ವಜಾ ಆದ ವಿಚಾರವನ್ನೂ ಎಸ್ಐಟಿನವ್ರು ವರದಿಯಲ್ಲಿ ಸೇರಿಸಿಯೇ ಕೊಡ್ತಾರೆ ಎಂದು ಪರಮೇಶ್ವರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.