ಬಿಜೆಪಿಯವರನ್ನು ಆಹ್ವಾನಿಸಿಲ್ಲ, ಬಂದರೆ ಸ್ವಾಗತ: ಗೃಹ ಸಚಿವ ಪರಮೇಶ್ವರ

By Kannadaprabha News  |  First Published Aug 19, 2023, 8:09 PM IST

ಕಾಂಗ್ರೆಸ್‌ ಧೇಯೋದ್ಧೇಶ, ತತ್ವ ಸಿದ್ಧಾಂತವನ್ನು ಒಪ್ಪಿ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಅವರಿಗೆ ಸ್ವಾಗತಿಸುತ್ತೇವೆ. ಬಿಜೆಪಿಯ ಯಾವ ಶಾಸಕರು ಬರುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಆದರೆ, ಬರುತ್ತಾರೆ ಎನ್ನುವ ಮಾತಿದೆ. ನಮಗೆ ಬೇರೆ ಪಕ್ಷದ ಶಾಸಕರನ್ನು ಕರೆದುಕೊಳ್ಳುವ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ಗೆ ಬರುವವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಾಗುತ್ತದೆ ಎಂದು ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ 


ಬೆಳಗಾವಿ(ಆ.19): ಬಿಜೆಪಿ ಶಾಸಕರಿಗೆ ನಾವು ಆಹ್ವಾನ ಕೊಟ್ಟಿಲ್ಲ. ಆದರೆ, ಕಾಂಗ್ರೆಸ್‌ ತತ್ವ ಸಿದ್ಧಾಂತ ಒಪ್ಪಿ ಬಂದರೇ ಸ್ವಾಗತಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಾಂಗ್ರೆಸ್‌ ಧೇಯೋದ್ಧೇಶ, ತತ್ವ ಸಿದ್ಧಾಂತವನ್ನು ಒಪ್ಪಿ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಅವರಿಗೆ ಸ್ವಾಗತಿಸುತ್ತೇವೆ. ಬಿಜೆಪಿಯ ಯಾವ ಶಾಸಕರು ಬರುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಆದರೆ, ಬರುತ್ತಾರೆ ಎನ್ನುವ ಮಾತಿದೆ. ನಮಗೆ ಬೇರೆ ಪಕ್ಷದ ಶಾಸಕರನ್ನು ಕರೆದುಕೊಳ್ಳುವ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ಗೆ ಬರುವವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಹೋದವರಿಗೆ ಅಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿಗೆ ವಲಸೆ ಹೋದ ಶಾಸಕರು ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ಮಾಹಿತಿ ಇಲ್ಲ. ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದ ಶಾಸಕರಿಗೆ ಅಸಮಾಧಾನ ಆಗಿದೆಂದು ಮಾಧ್ಯಮದಲ್ಲಿ ನೋಡಿದ್ದೇವೆ. ಆದರೆ, ಅದು ಸತ್ಯ ಇದ್ದರೆ ನಮ್ಮಲ್ಲಿ ಬರಬಹುದು. ಸರ್ಕಾರ ಉಳಿಸಲು ಬೇರೆಯವರ ಅನಿವಾರ್ಯತೆ ಇಲ್ಲ ಎಂದರು.

Tap to resize

Latest Videos

ಸರ್ಕಾರದ ಯೋಜನೆ ಸದ್ಬಳಕೆಯಾಗಲಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ರಾಜ್ಯದಲ್ಲಿ ಸುಭದ್ರವಾದ ಸರ್ಕಾರ ಇದೆ. ಜನತೆಗೆ ನೀಡಿದ ಭರವಸೆಯನ್ನು ಒಂದೊಂದಾಗಿ ಈಡೇರಿಸುತ್ತಿದ್ದೇವೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸರ್ಕಾರ ಬಹಳ ದಿನ ಇರುವುದಿಲ್ಲ ಎಂದು ಭವಿಷ್ಯ ನುಡಿದ್ದಾರೆ ಎನ್ನುವ ಪ್ರಶ್ನಗೆ ಉತ್ತರಿಸಿದ ಅವರು, ಯತ್ನಾಳ ಅವರ ಭವಿಷ್ಯ ಬಹಳ ನುಡಿದ್ದಾರೆ ಬಿಡಿ ಎಂದು ವ್ಯಂಗ್ಯವಾಡಿದರು.

ವಿಕಲಚೇತನನ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದೇನೆ: ಸಚಿವ ಪರಮೇಶ್ವರ

ಬೆಳಗಾವಿ ಉದ್ಯಮಬಾಗ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ವಿಕಲಚೇತನನ ಮೇಲೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಇಲ್ಲಿಯವರೆಗೂ ಕ್ರಮ ಜರುಗಿಸಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಇಂಥ ಪ್ರಕರಣ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದೇನೆ. ಜನಸ್ನೇಹಿ ಪೊಲೀಸ್‌ ನೀಡಬೇಕು ಎನ್ನುವ ಉದ್ದೇಶದಿಂದ ಎಲ್ಲ ಜಿಲ್ಲೆಯ ಪೊಲೀಸ್‌ ಇಲಾಖೆಯಲ್ಲಿ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ ಎಂದರು.

ಯತ್ನಾಳ್‌ ಹೇಳಿಕೆ ಬರಿ ಊಹಾಪೋಹ: ಸಂಸದ ಜೊಲ್ಲೆ

ಹಿಂಡಲಗಾ ಕಾರಾಗೃಹದಲ್ಲಿ ಅಕ್ರಮ ಹಾಗೂ ಸಿಬ್ಬಂದಿ ಕೈದಿಗಳಿಗೆ ಕಿರುಕುಳ ನೀಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು ಹಾಗೆ ಇರಲಿಲ್ಲ. ಇತ್ತೀಚೆಗೆ ಇಂಥ ಘಟನೆಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಕಾರಾಗೃಹಕ್ಕೆ ಭೇಟಿ ನೀಡಲಿದ್ದೇನೆ ಎಂದರು.

ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ಪೊಲೀಸರೇ ಚಿನ್ನ ಕದ್ದ ಪ್ರಕರಣ ತನಿಖೆ ಎಲ್ಲಿಯವರೆಗೆ ಬಂದಿದೆ ಎನ್ನುವ ಪ್ರಶ್ನೆಗೆ ಪ್ರತ್ರಿಕಿಯಿಸಿದ ಅವರು, ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.

click me!