ಸಿ.ಟಿ. ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದ ಗೃಹ ಸಚಿವ ಜಿ.ಪರಮೇಶ್ವರ್
ಹುಬ್ಬಳ್ಳಿ(ಡಿ.24): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಹೇಳುವ ಮೂಲಕ ತಮ್ಮನ್ನ ಅಸಮರ್ಥ ಸಚಿವ ಎಂಬ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಜೋಶಿಗೆ ತಿರುಗೇಟು ನೀಡಿದ್ದಾರೆ.
ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಿ.ಟಿ. ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
undefined
ಮಾಧ್ಯಮದವರು ಇಲ್ಲದಿದ್ರೆ ಸಿ.ಟಿ. ರವಿ ಅವರನ್ನ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡ್ತಿದ್ದರು: ಜೋಶಿ
ಸಿ.ಟಿ. ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಸಚಿವ ಪರಮೇಶ್ವರ್ ಅವರು, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ಸಲ ವಿಳಂಬವಾಗಬಹುದು. ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆಯನ್ನ ನೋಡಬೇಕಿದೆ ಎಂದು ತಿಳಿಸಿದ್ದಾರೆ.
ಸಿ.ಟಿ. ರವಿ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಗೃಹ ಇಲಾಖೆಯಲ್ಲಿ ಕೆಲ ಸಚಿವರ ಹಸ್ತಕ್ಷೇಪ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆಯಾಗಿದೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದರೆ ಕ್ರಮ ಖಚಿತ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಹಳೆ ಹುಬ್ಬಳ್ಳಿಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಲೈಂಗಿಕ ಕಿರುಕುಳ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಪರಮೇಶ್ವರ್ ಅವರು, ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್ಪೆಕ್ಟರ್ ತಪ್ಪು ಎಸಿಗಿದ್ದರೇ, ಅವರೇ ಮೇಲೆ ಕ್ರಮ ತೆಗೆದುಕೊಳ್ಳುವೆ ಎಂದು ಹೇಳಿದ್ದಾರೆ.
ಸಿದ್ದು ಬೆನ್ನಿಗೆ ನಿಲ್ಲುವೆ ಎನ್ನುವ ಡಿಕೆಶಿಯೇ ಒಪ್ಪಂದ ಬಗ್ಗೆ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ
ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಆರೋಪ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ಈ ಬಗ್ಗೆ ರಿವ್ಯೂವ ಮಾಡುತ್ತೇನೆ. ಅದರಲ್ಲಿ ತಪ್ಪುಗಳು ಕಂಡು ಬಂದ್ರೆ ಸರಿ ಮಾಡುವೆ ಎಂದು ಭರವಸೆ ನೀಡಿದ್ದಾರೆ.
ಬೆಳಗಾವಿಯಲ್ಲಿ AICC ಕಾರ್ಯಕ್ರಮ ಇದೆ. ಗಾಂಧಿ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಅದರ ಶತಮಾನೋತ್ಸವದ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೀತಿದೆ. ಹುಬ್ಬಳ್ಳಿಯಲ್ಲಿ ಮೂರು ಪೊಲೀಸ್ ಠಾಣೆಗಳ ಉದ್ಘಾಟನೆ ಇದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗಲಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಲೋಕಸಭಾ ಸದಸ್ಯರು ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದು ಹೇಳಿದ್ದಾರೆ.