
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ತೀವ್ರಗೊಳ್ಳುತ್ತಿರುವ ಈ ಹಂತದಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದಾರೆ. ಪರಮೇಶ್ವರ್ ಅವರ ಈ ನಡೆ ತೀವ್ರ ಕುತೂಹಲ ಕೆರಳಿಸಿದೆ.
ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಶೋಷಿತರ ಸಮಾವೇಶ ಕುರಿತು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣಗಳ ನಡುವೆ ಬಹಿರಂಗವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಇದರ ನಡುವೆ ಡಾ. ಪರಮೇಶ್ವರ್ ಅವರು ಹೈಕಮಾಂಡ್ ಭೇಟಿಗಾಗಿ ಮಂಗಳವಾರ ದೆಹಲಿಗೆ ತೆರಳಲಿದ್ದಾರೆ.
ಪರಮೇಶ್ವರ್ ಅವರು ಶೋಷಿತರ ಸಮಾವೇಶ ನಡೆಸಲು ಅನುಮತಿ ಕೋರಿ ಆಹ್ವಾನ ನೀಡುವ ಸಾಧ್ಯತೆಯಿದೆ. ಇದೇ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟನೆ ನೀಡಬೇಕು. ಬದಲಾವಣೆ ಉದ್ದೇಶವಿದ್ದರೆ ತಮ್ಮನ್ನು ಕೂಡ ಪರಿಗಣಿಸಬೇಕು ಎಂಬ ವಾದವನ್ನು ಹೈಕಮಾಂಡ್ ಮುಂದಿಡುವ ಪ್ರಯತ್ನ ಮಾಡಲಿದ್ದಾರೆ ಎಂದು ಪರಮೇಶ್ವರ್ ಆಪ್ತ ಮೂಲಗಳು ತಿಳಿಸಿವೆ.
ಪರಮೇಶ್ವರ್ ಅವರು ಫೆ.9 ರಂದು ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದರು. ಫೆ.12 ರಂದು ದೆಹಲಿಗೆ ಹೋಗಲು ದಿನಾಂಕ ನಿಗದಿಯಾಗಿತ್ತಾದರೂ ಅಂತಿಮ ಕ್ಷಣದಲ್ಲಿ ರದ್ದಾಗಿತ್ತು. ಇದೀಗ ದೆಹಲಿಗೆ ತೆರಳುತ್ತಿರುವುದರಿಂದ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿದೆ.
Dr. G. Parameshwara: ದಲಿತ ಸಮಾವೇಶ ಮುಂದೂಡಿಕೆ, ಪರಮೇಶ್ವರ್ ಸ್ಪಷ್ಟನೆ | Chitradurga | Suvarna News
ತಲೆ ಮೇಲೆ ಕೈ ಇಟ್ಕೊಬೇಡಿ ಸರ್: ಪರಂ ಎದುರಲ್ಲೇ ಸರ್ಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕಾಂಗ್ರೆಸ್ ಶಾಸಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.