ಉದ್ಘಾಟನೆ ನೆಪದಲ್ಲಿ ಮತ್ತೆ ಐದಾರು ಕಿ.ಮೀ. ಬಸ್ ಚಲಾಯಿಸಿದ ರೇಣುಕಾಚಾರ್ಯ

Published : Sep 14, 2020, 10:20 PM IST
ಉದ್ಘಾಟನೆ ನೆಪದಲ್ಲಿ ಮತ್ತೆ ಐದಾರು ಕಿ.ಮೀ. ಬಸ್ ಚಲಾಯಿಸಿದ ರೇಣುಕಾಚಾರ್ಯ

ಸಾರಾಂಶ

ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಉದ್ಘಾಟನೆ ನೆಪದಲ್ಲಿ ಮತ್ತೆ ಐದಾರು ಕಿ.ಮೀ. ಬಸ್ ಚಲಾಯಿಸಿರು ಪ್ರಸಂಗ ನಡೆದಿದೆ.

ದಾವಣಗೆರೆ, (ಸೆ.14): ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುವ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ  ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. 

ಹೌದು.. ಹೊನ್ನಾಳಿ ಡಿಪೋದ 6 ಬಸ್‌ಗಳನ್ನ ಉದ್ಘಾಟನೆ ಮಾಡಿದರು. ಬಳಿಕ ಸಿಕ್ಕಿದ್ದೇ ಚಾನ್ಸ್ ಅಂತ  ಬಸ್‌ ಚಲಾಯಿಸಿಕೊಂಡು ನಗರ ಪ್ರದಕ್ಷಿಣೆ ಹಾಕಿದರು. ಸರಾಗವಾಗಿ ಪಟ್ಟಣದಲ್ಲಿ ಐದಾರು ಕಿ.ಮೀ. ಬಸ್ ಓಡಿಸಿದ ರೆಣುಕಾಚಾರ್ಯ ಅವರಿಗೆ ಕಾರ್ಯಕರ್ತರು ಜೈಕಾರ ಹಾಕಿದರು.

ಲೈಸನ್ಸ್ ಇಲ್ಲದೇ ಸರ್ಕಾರಿ ಬಸ್ ಓಡಿಸಿದ ಶಾಸಕ: ನಿಯಮ ಉಲ್ಲಂಘಿಸಿದ್ರೂ ಹಾರಿಕೆಯ ಉತ್ತರ! 

ಜನವರಿಯಲ್ಲಿ ಹೊನ್ನಾಳಿಯಿಂದ ಬೆನಕನಹಳ್ಳಿ ಮಾರ್ಗವಾಗಿ ಸಾಸ್ವೆಹಳ್ಳಿ ಗ್ರಾಮದವರೆಗೆ ಕೆಎಸ್‌ಆರ್‌ಟಿಸಿ ಬಸ್‌ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಬಸ್‌ ಚಾಲಕರ ಸಮವಸ್ತ್ರ ಧರಿಸಿ ತಾವೇ ಖುದ್ದಾಗಿ ಚಾಲನೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದರು.

ಒದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ನೋಟಿಸ್ ನೀಡಲಾಗಿತ್ತು. ಅಲ್ಲದೇ ನಿಯಮ ಉಲ್ಲಂಘಿಸಿ ಬಸ್ ಚಲಾಯಿಸಿದ ಶಾಸಕನ ವಿರುದ್ಧ ಹೈಕೋರ್ಟ್‌ನಲ್ಲಿ ಕೇಸ್ ದಾಖಲಾಗಿತ್ತು.

ಇಷ್ಟೆಲ್ಲಾ ಆಗಿದ್ದರೂ ರೇಣುಕಾಚಾರ್ಯ ಅವರು ಮತ್ತೆ ಲೈಸನ್ಸ್ ಇಲ್ಲದೇ ಬಸ್ ಚಲಾಯಿಸಿದ್ದು ತಪ್ಪು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ