ಡಿಕೆ ಶಿವಕುಮಾರ್ ಮನೆಗೆ ತೆರಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ| ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಭೇಟಿ
ಬೆಂಗಳೂರು[ಫೆ.13]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಸಮಾರಂಭವೊಂದರ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಅಚ್ಚರಿ ಮೂಡಿಸಿದೆ.
ಮತ್ತೆ ಬಿಎಸ್‌ವೈ ಸಂಪುಟ ವಿಸ್ತರಣೆ? ಯಾರಿಗೆಲ್ಲಾ ಸಿಗುತ್ತೆ ಮಂತ್ರಿಗಿರಿ?
ಬುಧವಾರ ಸದಾಶಿವನಗರದಲ್ಲಿನ ಶಿವಕುಮಾರ್ ನಿವಾಸಕ್ಕೆ ಮಾಜಿ ಶಾಸಕ ಬಿ.ಪಿ.ಹರೀಶ್ ಅವರೊಂದಿಗೆ ತೆರಳಿದ ರೇಣುಕಾಚಾರ್ಯ ಅವರು ಬರುವ ಮಾ.5ರಂದು ಸ್ವಕ್ಷೇತ್ರ ಹೊನ್ನಾಳಿಯಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಆಹ್ವಾನ ನೀಡಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್ ಹಾಗೂ ಕೃಷಿ ಮೇಳ ಸ್ವಾಗತ ಸಮಿತಿ ಸದಸ್ಯರೂ ಇದ್ದರು.
ಆದರೆ, ಹಲವು ದಿನಗಳ ಹಿಂದೆ ಶಿವಕುಮಾರ್ ವಿರುದ್ಧ ರಾಜಕೀಯವಾಗಿ ಹರಿಹಾಯ್ದಿದ್ದ ರೇಣುಕಾಚಾರ್ಯ ಅವರು ಸ್ವಕ್ಷೇತ್ರದ ಕೃಷಿ ಮೇಳಕ್ಕೆ ಆಹ್ವಾನಿಸುವ ಮೂಲಕ ಯಾರಿಗೆ ಯಾವ ಸಂದೇಶ ರವಾನಿಸುವ ಪ್ರಯತ್ನ ಮಾಡಿದ್ದಾರೆ ಎಂಬುದು ಕುತೂಹಲವಾಗಿದೆ.
ಬಾಯಿಗೆ ಬಂದಂತೆ ಮಾತಾಡಿದ್ರೆ ಆಗಲ್ಲ : ರೇಣುಕಾಚಾರ್ಯ