ಕರ್ನಾಟಕ ಬಿಜೆಪಿ ಸಂಸದರ ಪುತ್ರ ಶಾಸಕ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌.!

Kannadaprabha News   | Asianet News
Published : Feb 21, 2021, 10:07 AM ISTUpdated : Feb 21, 2021, 10:16 AM IST
ಕರ್ನಾಟಕ ಬಿಜೆಪಿ ಸಂಸದರ ಪುತ್ರ ಶಾಸಕ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌.!

ಸಾರಾಂಶ

ಹೊಸಕೋಟೆ ಶಾಸಕ ಶರತ್‌ 25ಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆ| ಕೈ ಪಾಳೆಯಕ್ಕೆ ಕರ್ನಾಟಕ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ| ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ವಿವಿಧ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ|   

ಬೆಂಗಳೂರು(ಫೆ.21):  ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್‌.ಬಚ್ಚೇಗೌಡ ಅವರ ಪುತ್ರ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರ ಕಾಂಗ್ರೆಸ್‌ ಸೇರ್ಪಡೆಯ ದಿನಾಂಕ ಕೊನೆಗೂ ನಿಗದಿಯಾಗಿದೆ. ಫೆ.25ರಂದು ಅವರು ಪಕ್ಷದ ಸದಸ್ಯತ್ವ ಪಡೆಯುವುದರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.

ನಗರದ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಅಂದು ನಡೆಯುವ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರಲಿದ್ದಾರೆ. ಇವರು ಶರತ್‌ ಬಚ್ಚೇಗೌಡಗೆ ಪಕ್ಷದ ಬಾವುಟ ನೀಡಿ ನಾಯಕರು ಬರಮಾಡಿಕೊಳ್ಳುವರು.

ಕರ್ನಾಟಕ ಬಿಜೆಪಿ ಸಂಸದ ಪುತ್ರ ಕಾಂಗ್ರೆಸ್‌ನತ್ತ: ಅನಿವಾರ್ಯ ಎಂದ ತಂದೆ

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಶರತ್‌ ಮಾತುಕತೆ ನಡೆಸಿದ್ದರು. ಹೈಕಮಾಂಡ್‌ ಒಪ್ಪಿಗೆ ಬಳಿಕ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅವರ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿಪಡಿಸಲಾಗಿದೆ.

ಇನ್ನು, ಅಧಿಕೃತ ಪಕ್ಷ ಸೇರ್ಪಡೆ ಬಳಿಕ ಹೊಸಕೋಟೆಯಲ್ಲಿ ಮಾರ್ಚ್‌ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಬೃಹತ್‌ ಸಮಾವೇಶ ನಡೆಸುವ ಮೂಲಕ ಶರತ್‌ ಬಚ್ಚೇಗೌಡ ತಮ್ಮ ಶಕ್ತಿ ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ