ಹೊಸಕೋಟೆಯಲ್ಲಿ 2ನೇ ಬಾರಿ ಗೆದ್ದು ಬೀಗಿದ ಶರತ್‌ ಬಚ್ಚೇಗೌಡ

By Kannadaprabha NewsFirst Published May 14, 2023, 10:32 AM IST
Highlights

ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡ ಜಯಭೇರಿ ಬಾರಿಸುವುದರ ಮೂಲಕ ಎರಡನೇ ಬಾರಿ ಅಧಿ​ಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸಕೋಟೆ: ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡ ಜಯಭೇರಿ ಬಾರಿಸುವುದರ ಮೂಲಕ ಎರಡನೇ ಬಾರಿ ಅಧಿ​ಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. 2020ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂಟಿಬಿ ನಾಗರಾಜ್‌ ಅವರ ವಿರುದ್ಧ 11 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿ​ಸಿದ್ದ ಶರತ್‌ ಬಚ್ಚೇಗೌಡ ಈಗ 2023ರ ವಿಧಾನಸಭಾ ಚುನಾವಣೆಯಲ್ಲಿ 5172 ಮತಗಳ ಅಂತರದಿಂದ ಎರಡನೇ ಬಾರಿಗೆ ಗೆಲುವು ಸಾ​ಸುವಲ್ಲಿ ಯಶಸ್ವಿಯಾಗಿದ್ದು ಹೊಸಕೋಟೆಯಲ್ಲಿ ಶರತ್‌ ಕಾಲ ಮುಂದುವರೆದಂತಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಶರತ್‌ ಬಚ್ಚೇಗೌಡ 1,06,769 ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್‌ 1,01,597 ಮತ ಪಡೆದು ಪರಾಭವಗೊಂಡಿದ್ದಾರೆ. 5,172 ಮತಗಳ ಅಂತರದಿಂದ ಶರತ್‌ ಗೆಲುವಿನ ವಿಜಯಮಾಲೆಗೆ ಕೊರಳೊಡ್ಡಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವ್ಯಕ್ತಿಗತ ಸಮರದಲ್ಲಿ ಬಚ್ಚೇಗೌಡರ ಕುಟುಂಬ ಹಾಗೂ ಎಂಟಿಬಿ ನಾಗರಾಜ್‌ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುತ್ತಿತ್ತು. ಮತ ಎಣಿಕೆ ಕೇಂದ್ರದಲ್ಲಿ ಪ್ರಥಮ ಹಂತದಿಂದಲೆ ಶರತ್‌ ಬಚ್ಚೇಗೌಡರು ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ 21ನೇ ಸುತ್ತಿನಲ್ಲಿ 5172 ಮತಗಳ ಅಂತರದಿಂದ ಗೆಲುವು ಸಾ​ಧಿಸಿದರು.

Chikkaballapur Constituency: ಅಭಿವೃದ್ಧಿಯ ಹರಿಕಾರ ಡಾ.ಸುಧಾಕರ್‌ ಸೋಲಿಗೆ ಕಾರಣವೇನು?

ಪಕ್ಷದ ಸೇವೆ ಮಾಡ್ತೇನೆ: ರಾಜ್ಯದಲ್ಲಿ ಸ್ಪಷ್ಟಬಹುಮತದಿಂದ ಕಾಂಗ್ರೆಸ್‌ ಪಕ್ಷ ಅಧಿ​ಕಾರಕ್ಕೆ ಬಂದಿದ್ದು, ನೀವು ಮಂತ್ರಿ ಸ್ಥಾನದ ರೇಸ್‌ನಲ್ಲಿದ್ದೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶರತ್‌, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಪಕ್ಷದ ಸೇವೆ ಮಾಡಲು ಬಂದಿದ್ದೇನೆ. ಸಚಿವ ಸ್ಥಾನದ ವಿಚಾರ ಹೈಕಮಾಂಡ್‌ಗೆ ಬಿಟ್ಟವಿಚಾರ ಎಂದು ಶರತ್‌ ಬಚ್ಚೇಗೌಡ ಪ್ರತಿಕ್ರಿಯಿಸಿದರು.

ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಎರಡನೇ ಬಾರಿಗೆ ಗೆಲುವು ಸಾ​ಧಿಸಲು ಅನುವು ಮಾಡಿಕೊಟ್ಟಿದ್ದಾರೆ. ಮತದಾರರ ಋುಣ ತೀರಿಸಲು ನಾನು ಪಕ್ಷಾತೀತವಾಗಿ, ಧರ್ಮಾತೀತವಾಗಿ, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪ್ರಮುಖವಾಗಿ ನಗರಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇನೆ.
-ಶರತ್‌ ಬಚ್ಚೇಗೌಡ,

ಅ​ಧಿಕಾರಕ್ಕೆ ಅಂಟಿಕೊಂಡು ಕೂರುವವ ನಾನಲ್ಲ: ಸಚಿವ ಎಂಟಿಬಿ ನಾಗರಾಜ್‌

click me!