
ಬೆಂಗಳೂರು, (ಜುಲೈ,18): ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮತ್ತು ಪತ್ನಿ ಪ್ರತಿಭಾ ಶರತ್ ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಶರತ್ ಬಚ್ಚೇಗೌಡ ದಂಪತಿಗೆ ಜು.8ರಂದು ಸೋಂಕು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಅವರು ಮನೆಯಲ್ಲೇ ಕ್ವಾರಂಟೈನ್ಗೆ ಒಳಪಟ್ಟಿದ್ದರು. ಮತ್ತೊಮ್ಮೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಇಂದು(ಶನಿವಾರ) ಬಂದ ವರದಿಯಲ್ಲಿ ನೆಗೆಟಿವ್ ಅಂತ ಬಂದಿದೆ.
ಮತ್ತೋರ್ವ ಶಾಸಕನಿಗೆ ಕೊರೋನಾ: ಬೆಚ್ಚಿಬಿದ್ದ ಕರ್ನಾಟಕದ ರಾಜಕೀಯ ನಾಯಕರು
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿರುವ ಶರತ್ ಬಚ್ಚೇಗೌಡ, ನಾನು ಹಾಗೂ ನನ್ನ ಧರ್ಮಪತ್ನಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದೇವೆ. ಇಂದು ಕೊರೋನಾ ಪರೀಕ್ಷೆಯ ಫಲಿತಾಂಶದಲ್ಲಿ ನೆಗಟಿವ್ ಬಂದಿದೆ. ನಾವು ಗುಣಮುಖರಾಗಲೆಂದು ಆಶೀರ್ವಾದಕ್ಕೆ ಮಾಡಿದವರಿಗೆಲ್ಲ ನಾವು ಮತ್ತು ನಮ್ಮ ಕುಟುಂಬ ಸದಾ ಚಿರಋಣಿಯಾಗಿರಲಿದೆ ಎಂದಿದ್ದಾರೆ.
ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಈ ಸಾಂಕ್ರಾಮಿಕ ರೋಗದ ವಿರುದ್ಧ ಎಲ್ಲರೂ ಧೈರ್ಯದಿಂದ ಒಗ್ಗಟ್ಟಾಗಿ ಹೋರಾಡೋಣ, ಯಾರೂ ತಾಳ್ಮೆ ಕಳೆದುಕೊಂಡು ಧೃತಿಗೆಡಬಾರದು ಎಂದು ಶಾಸಕರು ಮನವಿ ಮಾಡಿದ್ದಾರೆ.
ಸೋಂಕಿತರು ಕ್ವಾರಂಟೈನ್ ಅವಧಿ ಮತ್ತು ಸರ್ಕಾರದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.