ರಾಜ್ಯದಲ್ಲಿ ಜನಸಾಮಾನ್ಯರಿಗೆ ಮಾತ್ರವಲ್ಲದೇ ರಾಜಕಾರಣಿಗಳಿಗೂ ಮಹಾಮಾರಿ ಕೊರೋನಾ ವೈರಸ್ ಬೆಂಬಿಡದೆ ಕಾಡುತ್ತಿದ್ದು, ಇದೀಗ ಶಾಸಕ ಶರತ್ ಬಚ್ಚೇಗೌಡ ಕುಟುಂಬಕ್ಕೂ ಕೊರೋನಾ ಶಾಕ್.
ಚಿಕ್ಕಬಳ್ಳಾಪುರ, (ಜುಲೈ,08): ರಾಜ್ಯದ ಜನಪ್ರತಿನಿಧಿಗಳಿಗೂ ಮಾರಕ ಕೊರೋನಾ ವೈರಸ್ ಬಿಸಿ ತಟ್ಟಿದ್ದು, ಒಬ್ಬೊರಿಗೆ ಕೊರೋನಾ ಅಟ್ಯಾಕ್ ಆಗುತ್ತಿದೆ.
ಇದೀಗ ಸಂಸದ ಬಿಎನ್ ಬಚ್ಚೇಗೌಡ ಅವರ ಪುತ್ರ, ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರಿಗೂ ಕೊರೋನಾ ಸೋಂಕು ತಗುಲಿರುವವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.
ಮಾಜಿ ಸಿಎಂ ಆಪ್ತ ಸಹಾಯಕನಿಗೆ ಕೊರೋನಾ: ಎಚ್‌ಡಿಕೆ ಜತೆ ಚಿಕ್ಕಮಗಳೂರಿಗೆ ಹೋಗಿದ್ದ ಪಿಎ
ಶರತ್ ಬಚ್ಚೇಗೌಡ ಮತ್ತು ಅವರ ಪತ್ನ ಇಬ್ಬರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ವರದಿ ಇಂದು (ಬುಧವಾರ) ಸಂಜೆ ಬಂದಿದ್ದು, ಶರತ್ ಮತ್ತು ಅವರ ಹೆಂಡತಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ಖಚಿತಪಡಿಸಿದ ಶರತ್ ಬಚ್ಚೇಗೌಡ
ಜುಲೈ 6 ಸೋಮವಾರ ದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಒಳಗಾಗಿದ್ದು, ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ನಿಮಗೆ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಆದರೂ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ.
JDS ಶಾಸಕನಿಗೂ ವಕ್ಕರಿಸಿದ ಕೊರೋನಾ ಹೆಮ್ಮಾರಿ
ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ರೋಗ ನಿರೋಧಕ ಶಕ್ತಿಯು ನಮ್ಮಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ.
ಜುಲೈ 6 ಸೋಮವಾರ ದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಒಳಗಾಗಿದ್ದು, (1/3 ) pic.twitter.com/jdgh0jsDtJ
— Sharath Bachegowda (@SBG4Hosakote)