ಅನರ್ಹ ಪಡಿತರ ಚೀಟಿ ಪತ್ತೆಗೆ ಮನೆ ಮನೆ ಸರ್ಚಿಂಗ್‌: ಪಿಡಿಒ, ಗ್ರಾಮ ಲೆಕ್ಕಿಗರಿಂದ ಖುದ್ದು ಪರಿಶೀಲನೆ

Published : Mar 11, 2025, 08:53 AM ISTUpdated : Mar 11, 2025, 09:03 AM IST
ಅನರ್ಹ ಪಡಿತರ ಚೀಟಿ ಪತ್ತೆಗೆ ಮನೆ ಮನೆ ಸರ್ಚಿಂಗ್‌: ಪಿಡಿಒ, ಗ್ರಾಮ ಲೆಕ್ಕಿಗರಿಂದ ಖುದ್ದು ಪರಿಶೀಲನೆ

ಸಾರಾಂಶ

ಅನರ್ಹ ಬಿಪಿಎಲ್‌ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. 

ವಿಧಾನ ಪರಿಷತ್ (ಮಾ.11): ಅನರ್ಹ ಬಿಪಿಎಲ್‌ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ಸೋಮವಾರ ಪರಿಷತ್‌ನಲ್ಲಿ ಬಿಜೆಪಿಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್‌ ಕಾರ್ಡ್‌ ಹೊಂದಿರುವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ, ಇವರೆಲ್ಲರೂ ಎಪಿಎಲ್‌ ಕಾರ್ಡ್‌ ಪಡೆಯಬೇಕಿತ್ತು. ಈ ಹಿಂದೆ ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ಪರಿಷ್ಕರಣೆಗೆ ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ, ಈಗ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗ ಸೇರಿದಂತೆ ಮುಂತಾದವರನ್ನು ಒಳಗೊಂಡ ಸಮಿತಿ ರಚಿಸಿ, ಈ ಸಮಿತಿ ಮೂಲಕ ಖುದ್ದಾಗಿ ಪರಿಶೀಲಿಸಲು ನಿರ್ಧರಿಸಲಾಗಿದೆ ಎಂದರು.

ಸುಮಾರು 91 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್‌ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಪರಿಷ್ಕರಣೆ ಮಾಡಲಾಗುವುದು, ಇದಕ್ಕೆ ಎಲ್ಲ ಪಕ್ಷದ ನಾಯಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೂ ಮುನ್ನ ಸಿ.ಟಿ.ರವಿ ಮಾತನಾಡಿ, ಕಳೆದ ವರ್ಷದಿಂದ ಯಾರಿಗೂ ಪಡಿತರ ಚೀಟಿ ಕೊಡದೆ ಸ್ಥಗಿತಗೊಳಿಸಲಾಗಿದೆ. ಅರ್ಜಿ ಹಾಕಿದವರಿಗೂ ಕೊಡುತ್ತಿಲ್ಲ. ಹೊಸ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ನಿಗದಿತ ದಿನದಲ್ಲಿ ಮಾತ್ರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸರ್ವರ್‌ ಡೌನ್‌ ಸಮಸ್ಯೆ ಎದುರಾಗುತ್ತಿದೆ. ಈ ಎಲ್ಲ ಸಮಸ್ಯೆ ಬಗೆಹರಿಸಬೇಕು. ಕಾಲಮಿತಿಯಲ್ಲಿ ಪಡಿತರ ಚೀಟಿ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಅನರ್ಹರು ಅಕ್ರಮ ಮಾರ್ಗದಲ್ಲಿ ಪಡಿತರ ಚೀಟಿ ಪಡೆದಿರುವ ಅಂದಾಜಿದೆ
ಇವರ ಪತ್ತೆಗೆ ಈ ಹಿಂದೆ ಆರಂಭಿಸಿದ್ದ ತಪಾಸಣೆ ಅಭಿಯಾನಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬ್ರೇಕ್‌
ಇದೀಗ ಕೇಂದ್ರ ಸರ್ಕಾರದ ಮಾನದಂಡ ಆಧರಿಸಿ ಹೊಸದಾಗಿ ಮನೆಮನೆ ಪರಿಶೀಲಿಸಲು ಸರ್ಕಾರ ನಿರ್ಧಾರ
ಮನೆ ಮನೆಗೆ ತೆರಳಿ ಅವರು ಹೊಂದಿರುವ ಸೌಕರ್ಯಗಳನ್ನು ಆಧರಿಸಿ ಅವರ ಬಿಪಿಎಲ್‌ ಅರ್ಹತೆ ನಿರ್ಧಾರ
ಒಂದು ವೇಳೆ ಮಿತಿಗಿಂತ ಹೆಚ್ಚಿನ ಆದಾಯ ಹೊಂದಿದ್ದರೆ ಬಿಪಿಎಲ್‌ ಬದಲಾಗಿ ಎಪಿಎಲ್‌ ಕಾರ್ಡ್‌ ವಿತರಣೆ
ಅದಾದ ಬಳಿಕ ಹೊಸದಾಗಿ ಬಿಪಿಎಲ್‌ ಪಡಿತರ ಚೀಟಿ ವಿತರಣೆ ಆರಂಭ: ಸಚಿವ ಮುನಿಯಪ್ಪ ಭರವಸೆ

ಬಿಜೆಪಿ ವಿರೋಧದ ಮಧ್ಯೆ ಬೆಂಗಳೂರು ಅರಮನೆ ವಿಧೇಯಕ ವಿಧಾನ ಪರಿಷತ್ತಲ್ಲೂ ಅಂಗೀಕಾರ

91000 ಅರ್ಜಿ ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್‌ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಪರಿಷ್ಕರಣೆ ಮಾಡಲಾಗುವುದು,
-ಕೆ.ಎಚ್‌.ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ