
ಬೆಂಗಳೂರು (ಡಿ.3) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್‌ನಲ್ಲಿ ಘೋಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ. ಇವರು ಪದೇ ಪದೇ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ಕೊಡುವ ಬದಲು ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಅದರ ಹೊರತಾಗಿ ಕಾಳ ಸಂತೆಯಲ್ಲಿ ಮುಕ್ತವಾಗಿ ಮಾರಾಟ ಮಾಡುತ್ತಿದ್ದಾರೆ. ಅದನ್ನು ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸರ್ಕಾರವು ಇದರಲ್ಲಿ ಶಾಮೀಲಾಗಿದೆ ಅಂತ ಅನುಮಾನ ಬರುತ್ತಿದೆ’ ಎಂದು ಹೇಳಿದರು.
ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಬಿಜೆಪಿ ಕೈವಾಡ; ಬಿಕೆ ಹರಿಪ್ರಸಾದ್ ಗಂಭೀರ ಆರೋಪ
‘ಗೃಹ ಲಕ್ಷ್ಮೀ ಸಮೀಕ್ಷೆ ಮಾಡಿದರೆ ಮೊದಲ ತಿಂಗಳು ಕೇವಲ ಶೇ.35ರಷ್ಟು ಜನರಿಗೆ ಬಂದಿದೆ. ನಂತರದ ಕಂತುಗಳು ಸರಿಯಾಗಿ ಬಂದಿಲ್ಲ. ಗೃಹ ಲಕ್ಷ್ಮೀಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ವಿದ್ಯುತ್ ವಿಚಾರದಲ್ಲಂತೂ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಗಂಟೆ ನಿರಂತರ ವಿದ್ಯುತ್ ಕೊಡುವುದಾಗಿ ಹೇಳಿದ್ದಾರೆ. ಆದರೆ, ರೈತರಿಗೆ ಕೇವಲ 3 ಗಂಟೆ ಮಾತ್ರ ವಿದ್ಯುತ್ ಸಿಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ನಾಯಕರು ಸುಮ್ಮನೆ ತೆಲಂಗಾಣಕ್ಕೆ ಹೋಗಿ ಗ್ಯಾರಂಟಿಗಳ ಬಗ್ಗೆ ಪ್ರಚಾರ ಪಡೆಯುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು
ಬೆಳಗಾವಿ ಅಧಿವೇಶನ: ಕಲಾಪದಲ್ಲಿ ಸರ್ಕಾರ ಕಟ್ಟಿಹಾಕಲು ನಾನೇ ಹಗ್ಗ ಕಳಿಸಿಕೊಡುವೆ: ಡಿಕೆಶಿ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬೊಮ್ಮಾಯಿ, ವೈದ್ಯರ ಸಲಹೆ ಮೇರೆಗೆ ಬೆಳಗಾವಿ ಅಧಿವೇಶನದ ಮೊದಲ ವಾರ ಹಾಜರಾಗುತ್ತಿಲ್ಲ. ಎರಡನೇ ವಾರ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.