ಇದು ಜನಾದೇಶ ಪಡೆದಿರುವ ಸರ್ಕಾರ. ಇಂತಹ ಸರ್ಕಾರವನ್ನು ದೆಹಲಿಯಲ್ಲಿ ಕುಳಿತು ದುರ್ಬಲಗೊಳಿಸಲು ಪ್ರಯತ್ನ ಮಾಡುತ್ತಿದ್ದೀರಲ್ಲಾ. ನಿಮಗೆ ನಿಜಕ್ಕೂ ನೈತಿಕತೆ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು (ಆ.10): ರಾಜ್ಯಪಾಲರು ಸಂವಿಧಾನದ ರಕ್ಷಕರು. ಯಾವುದಾದರೂ ಆರೋಪ ಬಂದಾಗ ಸಾಕ್ಷಿ ಕಲೆ ಹಾಕಬೇಕು. ಯಾವುದೇ ಸಾಕ್ಷಿ ಇಲ್ಲದ ಕೇಸ್ ನಲ್ಲಿ ಸಿಎಂಗೆ ಶೋಕಾಸ್ ನೋಟಿಸ್ ನೀಡೋದು ಎಷ್ಟರ ಮಟ್ಟಿಗೆ ಸರಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನಿಸಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಇದು ಜನಾದೇಶ ಪಡೆದಿರುವ ಸರ್ಕಾರ. ಇಂತಹ ಸರ್ಕಾರವನ್ನು ದೆಹಲಿಯಲ್ಲಿ ಕುಳಿತು ದುರ್ಬಲಗೊಳಿಸಲು ಪ್ರಯತ್ನ ಮಾಡುತ್ತಿದ್ದೀರಲ್ಲಾ. ನಿಮಗೆ ನಿಜಕ್ಕೂ ನೈತಿಕತೆ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
undefined
ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ ಜಾಹೀರಾತು ಕೊಟ್ಟಿದ್ರೀ: ಸಚಿವ ಪರಮೇಶ್ವರ್
ಸಿದ್ದರಾಮಯ್ಯ ನಾಡು ಕಂಡ ಪ್ರಾಮಾಣಿಕ, ಹೋರಾಟಗಾರ, ಅಪರೂಪದ ನಾಯಕ. ಸಿಎಂಗೆ ಕಪ್ಪು ಮಸಿ ಬಳಿಯಲಿಕ್ಕೆ ಮುಂದಾಗಿದ್ದೀರಾ, ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದೀರಾ. ಕಾಂಗ್ರೆಸ್ ಪಕ್ಷ ಪ್ರಜಾಸತ್ತಾತ್ಮಕ ವಿರೋಧಿಗಳನ್ನು ಒಗ್ಗಟ್ಟಾಗಿ ಎದುರಿಸುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ನಿಂದ ಶಕ್ತಿಪ್ರದರ್ಶನ: ಬೃಹತ್ ಜನಾಂದೋಲನ ಸಮಾವೇಶ ಸಂಘಟಿಸಿದ ಕಾಂಗ್ರೆಸ್ ಪಕ್ಷವು ತನ್ನ ಶಕ್ತಿಪ್ರದರ್ಶನ ಮೂಲಕ ಬಿಜೆಪಿ- ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ನೀಡಿತು. ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಕಾಂಗ್ರೆಸ್ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಾಗವಹಿಸಿದ್ದರು.
ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದರು. ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ನಾಯಕರು ಬ್ಯಾಟಿಂಗ್ ಬೀಸಿದರು. ಹಾಗೆಯೇ, ದೋಸ್ತಿಗಳ ಪಾದಯಾತ್ರೆಗೆ ಆಕ್ರೋಶ ವ್ಯಕ್ತಪಡಿಸುವ ಮೂಲಕ ಉಪ ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಂತರು.
52 ಕೋಟಿ ಆಸ್ತಿ ಘೋಷಿಸಿದ್ದರೂ ಸ್ವಂತ ಮನೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ನಟ ಚೇತನ್!
ಕಳೆದ ಒಂದು ತಿಂಗಳಿನಿಂದ ಸರ್ಕಾರದ ಮೇಲೆ ಮಾಡುತ್ತಿರುವ ಆರೋಪಕ್ಕೆ ಉತ್ತರ ಕೊಡುವ ಸಮಾವೇಶ ಇದಾಗಿದೆ. 20 ವರ್ಷದ ಹಳೆ ಪ್ರಕರಣವನ್ನು ಈಗ ಮುನ್ನಲೆಗೆ ಬಿಜೆಪಿ, ಜೆಡಿಎಸ್ ನವರು ತಂದಿದ್ದಾರೆ. ಬಡವರು, ಧ್ವನಿ ಇಲ್ಲದವರ ಪರವಾಗಿ ಸಿಎಂ ಕೆಲಸ ಮಾಡುತ್ತಿದ್ದಾರೆ. ಉತ್ತಮ ಸರ್ಕಾರಕ್ಕೆ ತೊಂದರೆ ಕೊಡುವುದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರ ಉತ್ತಮವಾಗಿ ನಡೆಯುತ್ತಿದೆ.
- ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವರು