
ನವದೆಹಲಿ(ಮಾ.24): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ ಪ್ರಕರಣ ದೇಶಾದ್ಯಂದ ಭಾರಿ ಸಂಚಲನ ಸೃಷ್ಟಿಸಿದೆ. ಇದು ಬಿಜೆಪಿಯ ದ್ವೇಷದ ರಾಜಕೀಯದ ಫಲ ಎಂದು ಕಾಂಗ್ರೆಸ್ ಆರೋಪಿಸಿದೆ. ಇತ್ತ ಬಿಜೆಪಿ ಸಮುದಾಯವನ್ನು ನಿಂದಿಸುವುದು ಯಾವ ಕರ್ಮಫಲ ಎಂದು ಪ್ರಶ್ನಿಸಿದೆ. ರಾಜಕೀಯ ಹೋರಾಟ, ಕಾನೂನು ಹೋರಾಟ ತೀವ್ರಗೊಂಡಿದೆ. ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅನರ್ಹಗೊಂಡಿರುವ ಕಾರಣ ರಾಹುಲ್ ಗಾಂಧಿಗೆ ನೀಡಿರುವ ಸರ್ಕಾರಿ ಅಧಿಕೃತ ಬಂಗಲೆ ಖಾಲಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಸೂರತ್ ಕೋರ್ಟ್ ನೀಡಿರುವ ತೀರ್ಪಿಗೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತರುವಲ್ಲಿ ಅಥವಾ ತೀರ್ಪು ರದ್ದು ಮಾಡುವಲ್ಲಿ ರಾಹುಲ್ ಗಾಂಧಿ ಯಶಸ್ವಿಯಾದರೆ ಎಲ್ಲವೂ ಮರಳಲಿದೆ.
ದೆಹಲಿಯ ಲುಟಿಯೆನ್ಸ್‌ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ರಾಹುಲ್ ಗಾಂಧಿ ವಾಸವಿದ್ದಾರೆ. ಒಂದು ತಿಂಗಳ ಒಳಗೆ ಉನ್ನತ ಕೋರ್ಟ್‌ನಿಂದ ತಡೆಯಾಜ್ಞೆ ತರುವಲ್ಲಿ ರಾಹುಲ್ ಸಫರಾದರೆ ಸಂಸದ ಸ್ಥಾನ ಹಾಗೂ ಬಂಗಲೆ ಉಳಿಯಲಿದೆ. ಇಲ್ಲವಾದರೆ ಒಂದು ತಿಂಗಳಲ್ಲಿ ರಾಹುಲ್ ಗಾಂಧಿ ಸರ್ಕಾರಿ ಅಧಿಕೃತ ಬಂಗಲೆ ತೆರವು ಮಾಡಬೇಕಾದ ಅನಿವಾರ್ಯ ಎದುರಾಗಲಿದೆ.
ಭಾರತದ ಒಕ್ಕೊರಲ ಧ್ವನಿಗೆ ನನ್ನ ಹೋರಾಟ, ಯಾವುದೇ ತ್ಯಾಗಕ್ಕೂ ಸಿದ್ಧ; ರಾಹುಲ್ ಗಾಂಧಿ ಟ್ವೀಟ್!
2014ರಲ್ಲಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದ ಸಂಸದರಾಗಿ ಆಯ್ಕೆಯಾದ ಬಳಿ ದೆಹಲಿಯ ತುಘಲಕ್ ಲೇನ್, 12,ರ ವಿಳಾಸದಲ್ಲಿ ಸರ್ಕಾರಿ ಅಧಿಕೃತ ಬಂಗಲೆ ನೀಡಲಾಗಿದೆ. ಒಂದು ತಿಂಗಳಲ್ಲಿ ರಾಹುಲ್ ಗಾಂಧಿ ಪರವಾಗಿ ನ್ಯಾಯಾಲಯ ಆದೇಶ ಹೊರಡಿಸಿದಿದ್ದರೆ, ಈ ಬಂಗಲೆ ತೆರವು ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ಕಾಂಗ್ರೆಸ್ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಿದೆ. ಇತ್ತ ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ರಾಹುಲ್ ಗಾಂಧಿ To ಲಾಲೂ ಪ್ರಸಾದ್, ಸಂಸದ, ಶಾಸಕ ಸ್ಥಾನದಿಂದ ಅನರ್ಹಗೊಂಡ ನಾಯಕರ ಲಿಸ್ಟ್!
ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಗುರುವಾರ ಇಲ್ಲಿನ ದುರ್ಗದಬೈಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ದ್ವೇಷದ ರಾಜಕಾರಣ ಹಾಗೂ ಪ್ರಜಾಪ್ರಭುತ್ವ ವಿರೋಧ ಆಡಳಿತ ನಡೆಸುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶದ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ಈ ನಡೆ ತೀವ್ರ ಖಂಡನೀಯ ಎಂದು ಆರೋಪಿಸಿ, ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.