MLC Election: ರಂಗೇರಿದ ಪರಿಷತ್ ಚುನಾವಣೆ, ಸ್ಫೋಟಕ ಹೇಳಿಕೆ ಕೊಟ್ಟ ಬಿಎಸ್‌ವೈ

Published : Dec 04, 2021, 04:55 PM IST
MLC Election: ರಂಗೇರಿದ ಪರಿಷತ್ ಚುನಾವಣೆ, ಸ್ಫೋಟಕ ಹೇಳಿಕೆ ಕೊಟ್ಟ ಬಿಎಸ್‌ವೈ

ಸಾರಾಂಶ

* ಕರ್ನಾಟಕದಲ್ಲಿ ರಂಗೇರಿದ ವಿಧಾನಪರಿಷತ್ ಚುನಾವಣೆ * ಗೆಲುವಿಗಾಗಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ರಣತಂತ್ರ * ಜೆಡಿಎಸ್ ಬೆಂಬಲಕ್ಕೆ ಹಂಬಲಿಸಿದ ಬಿಜೆಪಿ

ಬೆಂಗಳೂರು, (ಡಿ.04): ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Devegowda) ಭೇಟಿ ದಿಲ್ಲಿಯಲ್ಲಿ (New Delhi) ಭೇಟಿ ಮಾಡಿದ್ದು, ಇತ್ತ ರಾಜ್ಯ ರಾಜಕಾರಣದಲ್ಲಿ ಮಾಜಿ, ಹಾಲಿ ಪ್ರಧಾನಿಗಳದ್ದೇ ಸುದ್ದಿ..  ಪರಿಷತ್ ಚುನಾವಣೆ ಮಧ್ಯೆ ದೇವೇಗೌಡ್ರು, ಮೋದಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 

ಪರಿಷತ್ ಚುನಾವಣೆಯಲ್ಲಿ (MLC Election) ಬಿಜೆಪಿ(BJP), ಜೆಡಿಎಸ್‌ (JDS)ಬೆಂಬಲ ಕೋರಿದೆ. ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಹೇಳಿದ್ದಾರೆ. ಆದ್ರೆ, ಇತ್ತ ದೇವೇಗೌಡ ಮಾತ್ರ  ಯಾವುದಕ್ಕೂ ಸ್ಪಷ್ಟನೆ ಕೊಟ್ಟಿಲ್ಲ. ಇನ್ನೂ ಕುಮಾರಸ್ವಾಮಿ(HD Kumaraswamy) ಚರ್ಚೆ ಮಾಡಿ ಬೆಂಬಲ ನೀಡುವುದಾಗಿ ಹೇಳಿದ್ದಾರೆ ವಿನಃ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

council Election Karnataka : JDS ಬೆಂಬಲ ಯಾರಿಗೆ - 2023ರ ಚುನಾವಣೆ ನಿಟ್ಟಿನಲ್ಲಿ ತೀರ್ಮಾನ

ಯಡಿಯೂರಪ್ಪ ಹೇಳಿದ್ದೇನು?
ಈಗಾಗಲೇ ನಾನು ಬಹಿರಂಗವಾಗಿಯೇ ಹೇಳಿದ್ದೇನೆ. ಕುಮಾರಸ್ವಾಮಿ ಅವರೊಂದಿಗೆ ಮಾತಾಡಿರುವೆ. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಇಲ್ಲಾ ಅಲ್ಲಿ ಬಿಜೆಪಿಗೆ ಸಹಕಾರ ನೀಡಬೇಕು ಎಂದಿದ್ದೇನೆ. ನೂರಕ್ಕೆ ನೂರು ಸಹಕಾರ ನೀಡುತ್ತಾರೆ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurapppa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಇದೇ ವೇಳೆ ಸಿದ್ದರಾಮಯ್ಯ ಜೆಡಿಎಸ್ -ಬಿಜೆಪಿ ಬಿ ಟೀಮ್ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್​ವೈ​, ಪ್ರತಿಪಕ್ಷ ನಾಯಕ ಎನ್ನುವುದನ್ನ ಮರೆತು ಹೇಳಿಕೆ ನೀಡುತ್ತಿದ್ದಾರೆ. ಮೈಸೂರನಲ್ಲಿಯೇ ಸೋತು ಹೀಗೆ ಮಾತಾಡುವುದು ಸರಿಯಲ್ಲ. ಇವರ ಸೊಕ್ಕಿನ ದಿಮಾಕಿನ ಮಾತುಗಳಿಗೆ ಚುನಾವಣೆ ಉತ್ತರ ನೀಡಲಿದೆ ಎಂದರು.

Karnataka Politics: ನೋ ಡೌಟ್‌ ಜೆಡಿಎಸ್‌ ಬಿಜೆಪಿಯ ಬಿ-ಟೀಮೇ: ಸಿದ್ದರಾಮಯ್ಯ

ಮೋದಿಯನ್ನು ಹೆಚ್ಡಿ ದೇವೇಗೌಡರು ಆತ್ಮೀಯವಾಗಿ ಭೇಟಿ ಆಗಿದ್ದಾರೆ. ಪರಿಷತ್ ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಅಂತ ಈ ಹಿಂದೆ ಯಡಿಯೂರಪ್ಪ ಹೇಳಿದ್ದರು. ಅದರಂತೆ ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತದೆ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಅಭಿಪ್ರಾಯ
ವಿಧಾನ ಪರಿಷತ್ ಚುನಾವಣೆಯಲ್ಲಿ  (MLC Election)  ನಾವು ಸ್ಪರ್ಧಿಸಿರುವ 6 ಕ್ಷೇತ್ರಗಳಲ್ಲಿ ಯಾರ ಬೆಂಬಲವನ್ನು ಕೇಳುವುದಿಲ್ಲ. ಅವರ ಅಭ್ಯರ್ಥಿ ಸೋಲಿಸಿ ನಮಗೆ ಬೆಂಬಲ ಕೊಡಿ ಎನ್ನಲಾಗುವುದಿಲ್ಲ ಎಂದು ಮಾಜಿ ಸಿಎಂ ಎಚ್ . ಡಿ . ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.  

ನಾವು ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎರಡು ದಿನದಲ್ಲಿ ತೀರ್ಮಾನ ಮಾಡಲಾಗುತ್ತದೆ.  ಮುಂದಿನ 2023ರ ವಿಧಾನ ಸಭಾ ಚುನಾವಣೆ (Assembly election) ಗಮನದಲ್ಲಿ ಇಟ್ಟುಕೊಂಡು ಬೆಂಬಲ ನೀಡುತ್ತೇವೆ ಎಣದು ತಿಳಿಸಿದರು.

ಸಿದ್ದುಗೆ ದೇವೇಗೌಡ ಗುದ್ದು
ತಮ್ಮನ್ನು ಪ್ರಧಾನಿ ಮೋದಿ(Narendra Modi) ಭೇಟಿ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಟೀಕಿಸಿರುವ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಮೋದಿ ಭೇಟಿ ಮಾಡಿದ್ದಕ್ಕೆ ನಾನು ಬಿಜೆಪಿಗೆ ಹೋಗುತ್ತೇನೆಂದು ಹೇಳಿದ್ದಾರೆ. ಏಳುವರೆ ವರ್ಷದಲ್ಲಿ ಮೋದಿ ಅವರನ್ನು 5 ಬಾರಿ ಮಾತ್ರ ಭೇಟಿ ನೀಡಿದ್ದೇನೆ. ಹಾಸನ ಸೇರಿದಂತೆ ರಾಜ್ಯದ ಅಭಿವೃದ್ದಿ ಕುರಿತು ವಿಚಾರ ಮಾಡಿದ್ದೇನೆ ಹೊರತು ಸ್ವಂತ ಕೆಲಸಕ್ಕೆ ಎಂದೂ ಭೇಟಿ ಮಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಯಾರು ಎಷ್ಟೇ ಒತ್ತಡ ತಂದರೂ ನನ್ನ ಜವಾಬ್ಧಾರಿಯಿಂದ ಹಿಂದೆ ಸರಿದಿಲ್ಲ ಎಂದರು.

ಮತದಾನ ದಿನಾಂಕ
ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದ್ದು, ರಾಜಕೀಯ ಕೆಸರೆರಚಾಟ ಮುಗಿಲು ಮುಟ್ಟಿದೆ. ಡಿ.10ರಂದು ಚುನಾವಣೆ ನಡೆಯಲಿದ್ದು, ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಡಿ.14ರ ಫಲಿತಾಂಶದಲ್ಲಿ ಪ್ರಕಟವಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.

ಈಬಾರಿ ಪರಿಷತ್ ಚುನಾವಣೆಯಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಸದಸ್ಯರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಅವಧಿ ಮುಗಿದಿರುವುದರಿಂದ ಈ ಸದಸ್ಯರ ಹೆಸರುಗಳನ್ನು ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ. ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಪುರಸಭೆ, ಮಹಾನಗರ ಪಾಲಿಕೆ ಸದಸ್ಯರಿಗೆ ಮತದಾನದ ಹಕ್ಕು ಇದೆ. ಹಾಗಾಗಿ ರಾಜಕೀಯ ಪಕ್ಷಗಳು ಗ್ರಾಪಂ ಸದಸ್ಯರ ಕಡೆ ಮುಖ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ