
ಹೈದರಾಬಾದ್, (ಜೂನ್.21): ಗನ್‌ಮ್ಯಾನ್‌ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿ ಹಿನ್ನೆಯಲ್ಲಿ ತೆಲಂಗಾಣ ರಾಜ್ಯದ ಬಿಜೆಪಿ ಶಾಸಕ ರಾಜ ಸಿಂಗ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.
ಗನ್‌ಮ್ಯಾನ್‌ಗೆ ಸೋಂಕು ತಗುಲಿರುವುದು ನಿನ್ನೆ ತಿಳಿಯುತ್ತಿದ್ದಂತೆಯೇ ಗೋಶಮಹಲ್ ಬಿಜೆಪಿ ಶಾಸಕ ರಾಜ ಸಿಂಗ್ ಖುದ್ದಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅಲ್ಲದೇ ಅವರ ಕುಟುಂಬದವರೂ ಸಹ ಕ್ವಾರಂಟೈನ್‌ನಲ್ಲಿದ್ದಾರೆ.ಈ ಬಗ್ಗೆ ಶಾಸಕ ರಾಜ ಸಿಂಗ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕನಿಗೂ ತಗುಲಿದ ಕೊರೋನಾ ಸೋಂಕು..!
ಕ್ವಾರಂಟೈನ್ನಲ್ಲಿದ್ದೇ ವ್ಯಾಯಾನ ಮಾಡುತ್ತಿರುವ ಶಾಸಕ, ಅದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ವ್ಯಾಯಾಮದಿಂದ ರೋಗನಿರೋಧಕ ಶಕ್ತಿ ಹೆಚ್ಚಳವಾಗುತ್ತದೆ ಎಂದಿರುವ ಶಾಸಕ, ಎಲ್ಲರೂ ಅದನ್ನು ಪಾಲಿಸುವಂತೆ ಟ್ವಿಟರ್ ಮೂಲಕ ಕರೆ ಕೊಟ್ಟಿದ್ದಾರೆ.
ಇನ್ನು ತೆಲಂಗಾಣದ ಕಾಂಗ್ರೆಸ್ ಹಿರಿಯ ನಾಯಕ ವಿ. ಹನುಮಂತ ರಾವ್ ಅವರಿಗೂ ಇಂದು (ಶನಿವಾರ) ಕೊರೋನಾ ದೃಢಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.
ತೆಲಂಗಾಣದಲ್ಲಿ ಒಟ್ಟು 7072 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, 3506 ಮಂದಿ ಗುಣಮುಖರಾಗಿದ್ದಾರೆ. 203 ಮಂದಿ ಮೃತಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.