
ಹಾಸನ (ಆ.22): ನನಗೂ ಜೆಡಿಎಸ್ ಸದಸ್ಯರ ಓಟು ಹಾಕಿಸಿಕೊಳ್ಳಬಹುದಾಗಿತ್ತು. ನಾನೇನು ಅಸಹಾಯಕನಲ್ಲ, ನನಗೂ ಶಕ್ತಿ ಇತ್ತು. ಮೈತ್ರಿ ಧರ್ಮವನ್ನು ಬಿಜೆಪಿ ಪಾಲಿಸಿದೆ. ಸಾಂದರ್ಭಿಕ ಶಾಸಕರಿಗೆ ಸಾಂದರ್ಭಿಕವಾಗಿ ಏನು ನಡೆಯುತ್ತದೆ ಎನ್ನುವುದು ಗೊತ್ತಿಲ್ಲ ಎಂದು ಶಾಸಕ ಎಚ್.ಪಿ.ಸ್ವರೂಪ್ ವಿರುದ್ಧ ಪ್ರೀತಂಗೌಡ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವರೂಪ್ ಅವರಿಗೆ ಏನು ಗೊತ್ತಿದೆ? ಅವರ ಕ್ಷೇತ್ರದ ಬಗ್ಗೆಯೇ ಅವರಿಗೆ ಗೊತ್ತಿಲ್ಲ, ಒಂದು ಗುದ್ದಲಿ ಪೂಜೆ ಮಾಡಿಲ್ಲ. ಅವರಿನ್ನೂ ಪ್ರೊಬೆಷನರಿ ಪಿರಿಯಡ್‌ನಲ್ಲಿ ಇದ್ದಾರೆ.
ಉಳಿದ ಮೂರೂವರೆ ವರ್ಷವೂ ಹಾಗೆಯೇ ಇರುತ್ತಾರೆ. ಅವರು ಕೆಲಸ ಮಾಡಲಿ ಆಮೇಲೆ ಸಿರಿಯಸ್ ಆಗಿ ತೆಗೆದುಕೊಳ್ಳುತ್ತೇನೆ ಎಂದು ಛೇಡಿಸಿದರು. ಬಿಜೆಪಿಯ ಸದಸ್ಯರನ್ನು ಅಧ್ಯಕ್ಷ, ಉಪಾಧ್ಯಕ್ಷ ಮಾಡುವ ಶಕ್ತಿ ನನಗಿತ್ತು. ಆದರೆ ಮಂಗಳವಾರ ಸಂಜೆ ಎಚ್.ಡಿ.ರೇವಣ್ಣ, ಅಶ್ವಥ್ ನಾರಾಯಣ್, ಆರ್.ಅಶೋಕ್ ಅವರೇ ಚರ್ಚಿಸಿ ಅಧ್ಯಕ್ಷ ಸ್ಥಾನ ಜೆಡಿಎಸ್‌ಗೆ ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಎಂದು ತೀರ್ಮಾನ ಮಾಡಿದ್ದರು. ಅದರಂತೆ ಬಿಜೆಪಿ ಮೈತ್ರಿ ಧರ್ಮ ಪಾಲನೆ ಮಾಡಿದೆ. ಆದರೆ, ಜೆಡಿಎಸ್‌ನವರು ಇದನ್ನೆಲ್ಲಾ ಗಾಳಿಗೆ ತೂರಿದ್ದಾರೆ.
ಜೈಲಿಗೆ ಹೋದರೂ ಸೀಟು ಬಿಡುವುದಿಲ್ಲ ಎಂಬ ಮನಸ್ಥಿತಿ ಸಿದ್ದರಾಮಯ್ಯನವರಿಗಿದೆ: ಶಾಸಕ ಸಿಮೆಂಟ್ ಮಂಜುನಾಥ್
ಮೈತ್ರಿಧರ್ಮ ಏಕೆ ಪಾಲನೆ ಆಗಿಲ್ಲ ಅನ್ನೋದನ್ನು ಅವರ ಪಕ್ಷದವತೇ ಹೇಳಬೇಕು. ಈ ಬಗ್ಗೆ ಜೆಡಿಎಸ್-ಬಿಜೆಪಿ ರಾಜ್ಯ ನಾಯಕರು ಚರ್ಚೆ ಮಾಡುತ್ತಾರೆ ಎಂದರು. ಹತ್ತು ತಿಂಗಳ ನಂತರ ಜೆಡಿಎಸ್‌ನವರು ಅಧಿಕಾರ ಬಿಟ್ಟು ಕೊಡಲಿಲ್ಲ ಅಂದರೆ ಹಾಸನ ನಗರಸಭೆಯಲ್ಲಿ ಜೆಡಿಎಸ್‌ನವರಿಗೆ ಇದೇ ಕೊನೆಯ ಅಧಿಕಾರ ಆಗುತ್ತದೆ. ಮುಂದೆ ಬಿಜೆಪಿಯೇ ಅಧಿಕಾರದಲ್ಲಿರುತ್ತದೆ. ಹತ್ತು ತಿಂಗಳ ನಂತರ ಅಧಿಕಾರ ಕೊಡಲಿಲ್ಲ ಎಂದರೆ ಮುಂದಿನ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಎರಡು ಅಂಕಿ ದಾಟಲು ಬಿಡುವುದಿಲ್ಲ ಎಂದು ಗುಡುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.