
ಹೊನ್ನಾಳಿ(ಜೂ.28): ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಲು ಎಲ್ಲರೂ ಸಮರ್ಥರಿದ್ದಾರೆ. ಅವರಂತೆ ನಾನೂ ಸಹ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ. ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ಎಂಪಿ ಟಿಕೆಟ್‌ಗೂ ಆಕಾಂಕ್ಷಿಯಾಗಿದ್ದೇನೆ. ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಜನತೆ ಸೇರಿದಂತೆ ಜಿಲ್ಲೆಯ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನನಗೆ ಕರೆ ಮಾಡಿ ಲೋಕಸಭಾ ಅಭ್ಯರ್ಥಿಯಾಗಿ, ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಎಲ್ಲಾ ಸಾಧಕ-ಬಾಧಕಗಳನ್ನು ಯೋಚಿಸಿ ನಿರ್ಧಾರ ಮಾಡಿದ್ದೇನೆ. ನಾನೂ ಕೂಡ ಎಂಪಿ ಚುನಾವಣೆಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು. ಸಂಸದ ಜಿ.ಎಂ.ಸಿದ್ದೇಶ್ವರ ಸಹ ನನಗೆ ದೂರವಾಣಿ ಕರೆ ಮಾಡಿದ್ದರು, ಅವರಿಗೂ ಹೇಳಿದ್ದೇನೆ. ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದರು.
ಕಾಂಗ್ರೆಸ್ ರಾಜ್ಯದಲ್ಲಿ ಅತ್ತೆ-ಸೊಸೆ ಮಧ್ಯೆ ಜಗಳ ತಂದಿಟ್ಟಿದೆ: ಎಂಪಿ ರೇಣುಕಾಚಾರ್ಯ
ನನ್ನ ಹಾಗೂ ಸಿದ್ದೇಶ್ವರ ಅವರ ನಡುವೆ ಉತ್ತಮ ಬಾಂಧವ್ಯವಿದ್ದು ಯಾವುದೇ ಗೊಂದಲಗಳಿಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.